ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ
ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ಉಪನ್ಯಾಸ ನೀಡಿ, ದಾರ್ಶನಿಕರ ತತ್ವ ಆದರ್ಶಗಳು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ, ಇಡೀ ಮನುಕುಲಕ್ಕೆ ಅನ್ವಯವಾಗುತ್ತವೆ. ಇವುಗಳನ್ನು ಎಲ್ಲಾ ವರ್ಗದ ಜನರು ಅದರಲ್ಲೂ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕು. ಜನಸಾಮಾನ್ಯರಿಗೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳನ್ನು ಅವರು ಆಡು ಮಾತಿನಲ್ಲಿಯೇ ತಿಳಿಸುವ ಅನಿವಾರ್ಯತೆ ಶಿವಶರಣೆಯರಲ್ಲಿ ಇತ್ತು. ಸಾಮಾನ್ಯ ಜನರೂ ಸಹ ಭಗವಂತನ್ನು ಪೂಜಿಸಲು ಸಾಧ್ಯ ಎಂದು ವಚನಕಾರರು ತೋರಿಸಿಕೊಟ್ಟಿದ್ದರು ಎಂದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದ.ಕ. ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮತ್ತು ಜಿಲ್ಲಾ ಮೊಗವೀರ ಸಂಘದ ಅಧ್ಯಕ್ಷ ದಿನೇಶ್ ಎರ್ಮಾಳು ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾ, ವಿದ್ಯಾರ್ಥಿ ನಾಯಕಿಯರಾದ ನಿಷ್ಮಾ, ಪ್ರೀತಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ವಿದ್ಯಾರ್ಥಿನಿ ಕಾತ್ಯಾಯಿನಿ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ವಂದಿಸಿದರು.