ದೇಶದ ಏಕತೆ, ಅಖಂಡತೆ ಕಾಪಾಡಿದ ವಲ್ಲಭಭಾಯಿ ಪಟೇಲ್‌: ಮಂಜುನಾಥ ಸೊರಟೂರ

KannadaprabhaNewsNetwork |  
Published : Nov 01, 2026, 03:30 AM IST
ಕೊಪ್ಪಳದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ ನಡೆಯಿತು. | Kannada Prabha

ಸಾರಾಂಶ

ಕೊಪ್ಪಳ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ನಡೆಯಿತು. ಪಕ್ಷದ ಮುಖಂಡರು ಭಾಗವಹಿಸಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಸ್ಮರಿಸಿದರು.

ಕೊಪ್ಪಳ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಹೊರತುಪಡಿಸಿ ಭಾರತದ ಐಕ್ಯತೆ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ದೇಶದ ಏಕತೆ ಮತ್ತು ಅಖಂಡತೆ ಕಾಪಾಡುವಲ್ಲಿ ಅವರ ಕೊಡುಗೆ ಅಪಾರ ಎಂದು ಜೆಡಿಎಸ್ ಸಂಸ್ಕೃತಿ ಘಟಕದ ಅಧ್ಯಕ್ಷ ಮಂಜುನಾಥ ಸೊರಟೂರ ಹೇಳಿದರು.

ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಾನಂತರ ದೇಶದಲ್ಲಿದ್ದ ಸುಮಾರು 565 ರಾಜಪ್ರಭುತ್ವದ ಸಂಸ್ಥಾನಗಳನ್ನು ಭಾರತೀಯ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮಹತ್ವದ ಹೊಣೆಗಾರಿಕೆಯನ್ನು ಪಟೇಲ್ ಸಮರ್ಥವಾಗಿ ನಿಭಾಯಿಸಿದರು. ತಮ್ಮ ರಾಜತಾಂತ್ರಿಕ ಕೌಶಲ, ದೂರದೃಷ್ಟಿ ಹಾಗೂ ರಾಜನೀತಿಯ ಮೂಲಕ ಸಂಸ್ಥಾನಗಳ ಆಡಳಿತಗಾರರನ್ನು ಭಾರತದ ಒಕ್ಕೂಟಕ್ಕೆ ಸೇರಲು ಮನವೊಲಿಸಿದರು. ಅವರ ಪ್ರಯತ್ನಗಳ ಫಲವಾಗಿ ದೇಶದ ಏಕೀಕರಣ ಸಾಧ್ಯವಾಯಿತು ಎಂದರು.

ಯುವ ಉದ್ಯಮಿ ಬಸವರಾಜ ಚಂದ್ರಶೇಖರ್ ಮಾತನಾಡಿ, ಸರ್ದಾರ್ ಪಟೇಲ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯಾನಂತರ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಜತೆಗೆ ಆಧುನಿಕ ಅಖಿಲ ಭಾರತ ನಾಗರಿಕ ಸೇವೆಗಳ ರೂಪಿಸುವಲ್ಲಿಯೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆಡಳಿತಾತ್ಮಕ ದೂರದೃಷ್ಟಿ ಇಂದಿಗೂ ಪ್ರಸ್ತುತವಾಗಿದೆ ಎಂದರು.

ಪಕ್ಷದ ಖಜಾಂಚಿ ಮೌನೇಶ ಕಿನ್ನಾಳ ಮಾತನಾಡಿ, ದೇಶದ ಐಕ್ಯತೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಯುವಕರು ಜಾಗ್ರತರಾಗಬೇಕು. ಯುವಜನರ ದಾರಿ ತಪ್ಪಿಸುವ ಮತ್ತು ಭಾರತೀಯತೆಯ ಆಶಯಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಪಟೇಲ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಏಕತೆ ಮತ್ತು ಅಖಂಡತೆಗಾಗಿ ಶ್ರಮಿಸಬೇಕು ಎಂದರು.

ಪಕ್ಷದ ಮುಖಂಡರಾದ ರಾಘು ಪಾಟೀಲ್ ನರೇಗಲ್, ಬೀರಣ್ಣ ಕುಳ್ಳಳ್ಳಿ, ವೀರೇಶ ಮಾದಿನೂರು, ರಂಗಪ್ಪ ಪೂಜಾರ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ