ದೇಶದಲ್ಲಿ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರ ಉಳಿಸಲು ವಾಲ್ಮೀಕಿ, ಮಹನೀಯರ ಕೊಡುಗೆ ಇದೆ: ಜಿ.ಆದರ್ಶ

KannadaprabhaNewsNetwork |  
Published : Oct 08, 2025, 01:00 AM IST
7ಕೆಎಂಎನ್ ಡಿ11 | Kannada Prabha

ಸಾರಾಂಶ

ರಾಮಾಯಣದ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿತ್ವ ಮೌಲ್ಯಗಳನ್ನು ನೀಡಿರುವ ಮಹರ್ಷಿ ವಾಲ್ಮೀಕಿ ಅವರು ಸಮಾಜದ ಸುಸ್ಥಿರತೆಗೆ ಕಾರಣರಾಗಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲು ರಚಿಸಿರುವ ರಾಮಾಯಣವೆಂಬ ಮಹಾಗ್ರಂಥದ ಚರಿತ್ರೆಯನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಗುರಿಸಾಧನೆಗೆ ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ನಾಗಮಂಗಲ

ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ಮಹರ್ಷಿ ವಾಲ್ಮೀಕಿ ಯಂತಹ ಮಹನೀಯರ ಕೊಡುಗೆ ಅಪಾರ ಎಂದು ತಹಸೀಲ್ದಾರ್ ಜಿ.ಆದರ್ಶ ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಆಡಳಿತಸೌಧದಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮನುಷ್ಯರು ಸಣ್ಣ ಪುಟ್ಟ ತಪ್ಪು ಮಾಡುವುದು ಸಹಜ. ತಾವು ಮಾಡಿದ ತಪ್ಪುಗಳನ್ನು ತಿದ್ದಿ ನಡೆದರೆ ಮಹರ್ಷಿ ವಾಲ್ಮೀಕಿ ಅವರಂತೆ ಶ್ರೇಷ್ಠರಾಗಿ ಬದುಕು ಸಾಗಿಸಬಹುದು ಎಂದರು.

ರಾಮಾಯಣದ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿತ್ವ ಮೌಲ್ಯಗಳನ್ನು ನೀಡಿರುವ ಮಹರ್ಷಿ ವಾಲ್ಮೀಕಿ ಅವರು ಸಮಾಜದ ಸುಸ್ಥಿರತೆಗೆ ಕಾರಣರಾಗಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲು ರಚಿಸಿರುವ ರಾಮಾಯಣವೆಂಬ ಮಹಾಗ್ರಂಥದ ಚರಿತ್ರೆಯನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಗುರಿಸಾಧನೆಗೆ ಮುಂದಾಗಬೇಕು ಎಂದರು.

ಶಿಕ್ಷಕ ನಂದನ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಬ್ಬ ದಾರ್ಶನಿಕ ವ್ಯಕ್ತಿ. ಅಕ್ಷರ ಜ್ಞಾನದ ಅರಿವೇ ಇಲ್ಲದ ಇವರು ತಮ್ಮ ಪ್ರಾಮಾಣಿಕ ತಪಸ್ಸಿನಿಂದ 24 ಸಾವಿರ ಶ್ಲೋಕಗಳನ್ನೊಳಗೊಂಡ ಸಂಪೂರ್ಣ ರಾಮಾಯಣ ಗ್ರಂಥ ರಚಿಸಿ ಶ್ರೇಷ್ಠರಾದರು ಎಂದರು.

ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಆಡಳಿತ ಸೌಧದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಪ್ರತಿಮೆಗಳಿಗೆ ತಹಸೀಲ್ದಾರ್ ಜಿ.ಆದರ್ಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹೂಮಾಲೆ ಹಾಕಿ ಗೌರವ ನಮನ ಸಲ್ಲಿಸಿದ ನಂತರ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿ ನಮನ ಸಲ್ಲಿಸಿದರು.

ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಸಾಧಕರೂ ಸೇರಿದಂತೆ ಕಳೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಐದು ಮಂದಿ ವಿದ್ಯಾರ್ಥಿಗಳು ಹಾಗೂ ಅಂತರಾಷ್ಟ್ರೀಯ ಜಾನಪದ ಕಲಾವಿದೆ ತೊಳಲಿ ಗ್ರಾಮದ ಕು.ಚೈತ್ರ ಮತ್ತು ಶಿಕ್ಷಕ ನಂದನ್ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ತಾಪಂ ಇಒ ಬಿ.ಎಸ್.ಸತೀಶ್, ಡಿವೈಎಸ್‌ಪಿ ಬಿ.ಚಲುವರಾಜು, ಬಿಇಒ ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಸ್.ರಾಘವೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಸಪ್ಪಬೋವಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ವಕೀಲ ಚಂದ್ರಶೇಖರ್, ಶಿಕ್ಷಕಿ ಉಮಾ, ಸಮುದಾಯದ ಮುಖಂಡರಾದ ಶಾಂತಮ್ಮ, ರವಿ, ನರಸನಾಯಕ್, ವಿಶ್ವನಾಥ್, ತೊಳಲಿ ಕೃಷ್ಣಮೂರ್ತಿ, ಮೇಲ್ವಿಚಾರಕ ಲೋಕೇಶ್ ಸೇರಿದಂತೆ ಹಲವರು ಇದ್ದರು.

PREV

Recommended Stories

ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ
ವಾಯವ್ಯ ಸಾರಿಗೆಗೆ ಶೀಘ್ರ 700 ಹೊಸ ಬಸ್‌ : ಕಾಗೆ