ಕನ್ನಡಪ್ರಭ ವಾರ್ತೆ ಯಾದಗಿರಿ
ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘವು ಬುಧವಾರ ಕರೆ ನೀಡಿದ್ದ ಬೃಹತ್ ಪ್ರತಿಭಟನೆಯು ವಾಲ್ಮೀಕಿ ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.ವಿವಿಧ ಈ ಎಲ್ಲ ಬೇಡಿಕೆಗಳ ಈಡೇರಿಸಲು ಒತ್ತಾಯಿಸಲು ನಾಡಿನ ವಿವಿಧೆಡೆಯಿಂದ ಯಾದಗಿರಿಗಾಗಮಿಸಿದ್ದ ಸಾವಿರಾರು ವಾಲ್ಮೀಕಿ ಸಮುದಾಯ ಜನರು ಇಲ್ಲಿನ ತಹಸಿಲ್ ಕಚೇರಿ ಬಳಿ ಜಮಾಗೊಂಡರು. ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತದ ಮೂಲಕ ಸಾಗಿದ ಪ್ರತಿಭಟನಾ ರ್‍ಯಾಲಿ, ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತಕ್ಕೆ ಆಗಮಿಸಿ, ಅಲ್ಲಿ ಸಾವಿರಾರು ಜನರು ಸಮಾವೇಶಗೊಂಡರು. ತಮಗಾದ ಅನ್ಯಾಯದ ವಿರುದ್ಧ ಪ್ರತಿಭಟನಾಕಾರ ಕೂಗುಗಳು ಪ್ರತಿಧ್ವನಿಸಿತು.
ದಾವಣಗೆರೆ ಜಿಲ್ಲೆಯ ರಾಜನಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಸಮಾಜದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷ ಮರೆಪ್ಪ ನಾಯಕ್ ಮಗ್ದಂಪುರ, ಜಿಲ್ಲಾಧ್ಯಕ್ಷ ಕೃಷ್ಣಪ್ಪಗೌಡ ಆಲ್ದಾಳ್, ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ ಚಳವಳಿ ರಾಜಣ್ಣ, ನಗರಸಭೆ ಸದಸ್ಯ ಹಣಮಂತ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಾಯಕ ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಬಂದು ಜಿಲ್ಲಾಧಿಕಾರಿ ಕಚೇರಿ ದ್ವಾರದ ಬಳಿ ಸಮಾವೇಶಗೊಂಡರು.ಸಚಿವ ಸ್ಥಾನದಿಂದ ರಾಜಣ್ಣ ವಜಾ: ಖಂಡನೆ
ವಾಲ್ಮೀಕಿ ನಾಯಕ ಸಂಘವು ಬುಧವಾರ ಕರೆ ನೀಡಿದ್ದ ಬೃಹತ್ ಪ್ರತಿಭಟನೆಯ ವೇಳೆ ಸಚಿವ ಸ್ಥಾನದಿಂದ ವಜಾಗೊಂಡ ಕೆ.ಎನ್.ರಾಜಣ್ಣ ಅವರ ಪರ ಕೂಗುಗಳು ಕೇಳಿಬಂದವು.ನಿಖರ ಕಾರಣವಿಲ್ಲದೇ ಏಕಾಏಕಿ ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ತೆಗೆಯುವ ಮೂಲಕ ಸಮಸ್ತ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದ್ದು, ಕೂಡಲೇ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಸಾಹೇಬಗೌಡ ಗೌಡಗೇರಾ, ಶ್ರವಣಕುಮಾರ ನಾಯಕ, ಮರೆಪ್ಪ ಪ್ಯಾಟಿ, ಭೀಮಣ್ಣಗೌಡ ಯಮನೂರು, ಬಸಣ್ಣಗೌಡ ಕಡದ್ರಾಳ, ಕಾಶಪ್ಪ ನಾಯಕ, ತಿಮ್ಮಣ್ಣ ನಾಯಕ್ ಸಾವಿರಾರು ಜನರು ಭಾಗವಹಿಸಿದ್ದರು.ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಶ್ರೀಗಳು ಸೇರಿದಂತೆ ಮುಖಂಡರು ಮನವಿ ಸಲ್ಲಿಸಿದರು. ಶ್ರೀ ಸದ್ಗುರು ರಂಗಲಿಂಗೇಶ್ವರ ಮಠದ ಪೀಠಾಧಿಪತಿ ತ್ರಿಶೂಲಪ್ಪ ಶರಣರು ಮುಡಬೂಳ, ಬೀದರ್ ಜಿಲ್ಲಾ ಅಧ್ಯಕ್ಷ ದಶರಥ ನಾಯಕ, ಬಳ್ಳಾರಿ ಜಿಲ್ಲಾ ಅಧ್ಯಕ್ಷ ಯರ್ರಿಸ್ವಾಮಿ. ವಿಜಯ ನಗರ ಜಿಲ್ಲಾಧ್ಯಕ್ಷ ಜಂಬಯ್ಯ ನಾಯಕ. ರಾಯಚೂರು ಜಿಲ್ಲಾ ಅಧ್ಯಕ್ಷ ರಘುವೀರ ನಾಯಕ ಹಾಗೂ ಶಾರದ ಹುಲಿನಾಯಕ. ಬಿಜಾಪೂರ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಕೌಲಗಿ. ಭೀಮರಾಯ ಠಾಣಗುಂದಿ. ಅಂಬುನಾಯಕ. ಟಿ. ಎನ್. ಭೀಮುನಾಯಕ. ಸಾಬು ಬಗ್ಲಿ. ರಮೇಶ ದೊರೆ. ಗಂಗಾಧರ ನಾಯಕ. ವೆಂಕಟೇಶ ಬೇಟೆಗಾರ. ಹಣಮಂತ್ರಾಯ ದೊರೆ ವನದುರ್ಗಾ. ಶೇಖರ ದೊರೆ. ಪ್ರಭು ಹುಲಿನಾಯಕ, ಕಲ್ಯಾಣ ಕರ್ನಾಟಕದ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಇದ್ದರು.