ಜಗತ್ತಿಗೆ ರಾಮನ ಆದರ್ಶ ತಿಳಿಸಿದವರು ವಾಲ್ಮೀಕಿ: ಯಶ್‌ಪಾಲ್ ಸುವರ್ಣ

KannadaprabhaNewsNetwork |  
Published : Oct 27, 2026, 02:45 AM IST
ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ಜಗತ್ತು ಕಂಡ ಸರ್ವಶ್ರೇಷ್ಠ ಶ್ರೀರಾಮನ ಆದರ್ಶಗಳನ್ನು ನಮಗೆ ತಿಳಿಸಿ ಕೊಟ್ಟವರು ಮಹರ್ಷಿ ವಾಲ್ಮೀಕಿ. ಅವರ ಹೆಸರಿನಲ್ಲಿ ನೀಡಲಾಗುವ ಸರ್ಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಮಾತ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಉಡುಪಿ

ಜಗತ್ತು ಕಂಡ ಸರ್ವಶ್ರೇಷ್ಠ ಶ್ರೀರಾಮನ ಆದರ್ಶಗಳನ್ನು ನಮಗೆ ತಿಳಿಸಿ ಕೊಟ್ಟವರು ಮಹರ್ಷಿ ವಾಲ್ಮೀಕಿ. ಅವರ ಹೆಸರಿನಲ್ಲಿ ನೀಡಲಾಗುವ ಸರ್ಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಮಾತ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಅವರು ಜಿಲ್ಲಾಡಳಿತ ಆಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಜೀವನದಲ್ಲಿ ಒಂದು ಕ್ಷಣದಲ್ಲಿ ತೆಗೆದುಕೊಂಡ ಒಳ್ಳೆಯ ಅಥವಾ ಕೆಟ್ಟ ನಿರ್ಧಾರಗಳು ಬದುಕನ್ನೇ ಬದಲಾಯಿಸಬಲ್ಲವು ಎನ್ನುವ ದೃಷ್ಟಾಂತವನ್ನು ವಾಲ್ಮೀಕಿ ಜೀವನ ನಮಗೆ ತೋರಿಸಿಕೊಡುತ್ತದೆ. ಪ್ರಯತ್ನಪೂರ್ವಕವಾಗಿ ನಾವು ಸದಾ ಇತರರಿಗೆ ಒಳ್ಳೆಯದನ್ನೇ ಮಾಡಬೇಕು ಎಂದರು.ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಉಪಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ವ್ಯಕ್ತಿತ್ವದ ಕುರಿತು ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 619 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಚೇರ್ಕಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮಂಜುನಾಥ್ ಇವರಿಗೆ 1 ಲಕ್ಷ ರು. ಪ್ರೋತ್ಸಾಹಧನ ನೀಡಿ ಸನ್ಮಾನಿಸಲಾಯಿತು.

ಪಪೂ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಮನೀಷಾ, ಅಶ್ವಿತಾ, ಶ್ರಾವ್ಯ, 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸ್ವಸ್ತಿ, ಲಾವಣ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನೋಣಯ್ಯ ರೆಂಜಾಳ, ಡಾ.ಅಶ್ವಿತಾ ಹಾಗೂ ಮಹಾಬಲ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಪರಿಶಿಷ್ಟ ವರ್ಗಗಳ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಸಮನ್ವಯಾಧಿಕಾರಿ ನಾರಾಯಣಸ್ವಾಮಿ ಸ್ವಾಗತಿಸಿ, ಐಟಿಡಿಪಿ ಸಿಬ್ಬಂದಿ ಶ್ರೀದೇವಿ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನದಿ ತೀರ ಕಲುಷಿತ ಆತಂಕಕಾರಿ: ಶಾಂತ ಮಲ್ಲಿಕಾರ್ಜುನ ಶ್ರೀ
ಕಡಲತಡಿಯಿಂದ ಕಾಶ್ಮೀರಕ್ಕೆ ಆಟೋ ಜೈತ್ರ ಯಾತ್ರೆ!