ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ

KannadaprabhaNewsNetwork |  
Published : Oct 27, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮ ಸಲ್ಲಿಸುವುದರ ಮೂಲಕ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೋಮವಾರ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯಕಾರಿಣಿ ಮಾಜಿ ಸದಸ್ಯ ಪಾಪೇಶ್ ನಾಯಕ, ರಾಮಾಯಣ ಒಂದು ಶ್ರೇಷ್ಠವಾದ ಗ್ರಂಥವಾಗಿದ್ದು 24 ಸಾವಿರ ಶೋಕ್ಲಗಳಿವೆ.

2008ರಲ್ಲಿ ಬಿ.ಎಸ್.ಯಡಿಯೂರಪ್ಪರವರ ಸರ್ಕಾರ ಇದ್ದಾಗ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆಗೆ ತೀರ್ಮಾನಿಸಿ ರಜೆ ಮಂಜೂರು ಮಾಡಲಾಯಿತು. ಈಗ ನಮ್ಮ ಸಮುದಾಯದ ಆದಿವಾಸಿ ಜನಾಂಗದ ಮಹಿಳೆಯನ್ನು ರಾಷ್ಟ್ರಪತಿಗಳನ್ನಾಗಿ ಮಾಡುವುದರ ಮೂಲಕ ನಮ್ಮ ಎಸ್. ಸಮುದಾಯಕ್ಕೆ ಕೇಂದ್ರ ಸರ್ಕಾರ ಗೌರವ ನೀಡಿದೆ ಎಂದರು.

ಬಿಜೆಪಿಯ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರಾಜು ಮಾತನಾಡಿ, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಜನರು ಅವರನ್ನು ದೇವರೆಂದು ಪರಿಗಣಿಸುತ್ತಾರೆ ಹಾಗೂ ವಾಲ್ಮೀಕಿ ಜಯಂತಿಯನ್ನು ಒಂದು ಹಬ್ಬದಂತೆ ಆಚರಿಸುತ್ತಾರೆ. ಮಹರ್ಷಿ ವಾಲ್ಮೀಕಿಯವರನ್ನು ಆದಿಕವಿಎಂದು ಕರೆಯಲಾಗುತ್ತದೆ. ಅವರ ಮೂಲ ಹೆಸರು ರತ್ನಾಕರ ಎಂಬುದಾಗಿತ್ತು. ಅವರು ಅರಣ್ಯದಲ್ಲಿ ದರೋಡೆಕೋರರಾಗಿ ಜೀವನ ನಡೆಸುತ್ತಿದ್ದರು. ನಂತರ ಅವರಲ್ಲಿ ಆಳವಾದ ಆಧ್ಯಾತ್ಮಿಕ ಪರಿವರ್ತನೆಯುಂಟಾಯಿತು. ನಾರದ ಮಹರ್ಷಿಗಳೊಂದಿಗಿನ ಭೇಟಿಯು ಅವರ ಜೀವನದಲ್ಲಿ ಒಂದು ಮಹತ್ವದ ತಿರುವು ನೀಡಿತು. ಇದು ಅವರನ್ನು ಆತ್ಮಾವಲೋಕನ, ಭಕ್ತಿ ಮತ್ತು ತಪಸ್ಸಿನ ಮಾರ್ಗದತ್ತ ಕೊಂಡೊಯ್ದಿತು ಎಂದರು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಎಸ್.ಟಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನವೀನ್, ಬೋಸೆ ರಂಗಪ್ಪ, ಕಾರ್ಯದರ್ಶಿ ತಿಪ್ಪೇಸ್ವಾಮಿ, ದಕ್ಷಿಣ ಮೂರ್ತಿ, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಮ್, ನಗರಸಭೆ ಮಾಜಿ ಸದಸ್ಯ ನಾಗರಾಜ್, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತಾ, ಪ್ರಧಾನ ಕಾರ್ಯದರ್ಶಿ ದೀಪ. ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ಲೀಲಾವತಿ, ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು, ರಾಜು, ಮಹಿಳಾ ಮೋರ್ಚಾದ ಕಾರ್ಯದರ್ಶಿ ಶ್ಯಾಮಲ ಶಿವಪ್ರಕಾಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು