ಇಂದು ಕೊಪ್ಪಳದಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ

KannadaprabhaNewsNetwork |  
Published : Nov 13, 2026, 02:15 AM IST
ಸಮಾವೇಶದ ಸಿದ್ಧತೆಯನ್ನು ಮುಖಂಡರಾದ ಟಿ. ರತ್ನಾಕರ ಹಾಗೂ ರಾಮಣ್ಣ ಕಲ್ಲಣ್ಣವರ | Kannada Prabha

ಸಾರಾಂಶ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ನಗರದ ನೂತನ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನ. 13ರಂದು ನಗರದಲ್ಲಿ ನಡೆಯಲಿದೆ. ತಾಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಮುಖ್ಯ ಸಮಾರಂಭ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ವಾಲ್ಮೀಕಿ ಜಯಂತಿ ಮೆರವಣಿಗೆ ನಡೆಯಲಿದೆ.

ಕೊಪ್ಪಳ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ನಗರದ ನೂತನ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನ. 13ರಂದು ನಗರದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಮುಖ್ಯ ಸಮಾರಂಭ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ವಾಲ್ಮೀಕಿ ಜಯಂತಿ ಮೆರವಣಿಗೆ ನಡೆಯಲಿದೆ.

ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ, ಕುಷ್ಟಗಿ ಶಾಸಕ ದೊಡ್ಡನಗೌಡ ಹನುಮಗೌಡ ಪಾಟೀಲ ಉಪಸ್ಥಿತರಿರುವರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು. ಸಂಸದ ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪುರ, ಹೇಮಲತಾ ನಾಯಕ, ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನಸಾಬ ನಬಿಸಾಬ ದೋಟಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ. ರೆಡ್ಡಿ ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕ ಡಾ. ಅಶೋಕ್ ಡಿ.ಆರ್. ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೋಗಲದ ಹಾಗೂ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಪಾಲ್ಗೊಳ್ಳುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌