ವಾಲ್ಮೀಕಿ, ಮದಕರಿ ನಾಯಕ ಜಯಂತ್ಯುತ್ಸವ: 13ರಂದು ಸಿದ್ಧತಾ ಸಭೆ

KannadaprabhaNewsNetwork |  
Published : Oct 09, 2025, 02:00 AM IST
08 ಜೆ.ಜಿ.ಎಲ್.1) ಜಗಳೂರು ಪಟ್ಟಣದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ನಾಗರಾಜ್ ಇತರರು ಮಾತನಾಡಿದರು. | Kannada Prabha

ಸಾರಾಂಶ

ಜಗಳೂರು ಪಟ್ಟಣದ ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.13ರಂದು ಪ್ರಸ್ತುತ ವರ್ಷ ವಾಲ್ಮೀಕಿ ಜಯಂತಿ ಮತ್ತು ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ ಆಚರಿಸಲು ನಾಯಕ ಸಂಘದ ಗೌರವಾಧ್ಯಕ್ಷ, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ್ ಸಮ್ಮುಖ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಹೇಳಿದರು.

- ಜಗಳೂರು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಮಾಹಿತಿ

- - -

ಕನ್ನಡಪ್ರಭ ವಾರ್ತೆ ಜಗಳೂರು

ಪಟ್ಟಣದ ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.13ರಂದು ಪ್ರಸ್ತುತ ವರ್ಷ ವಾಲ್ಮೀಕಿ ಜಯಂತಿ ಮತ್ತು ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ ಆಚರಿಸಲು ನಾಯಕ ಸಂಘದ ಗೌರವಾಧ್ಯಕ್ಷ, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ್ ಸಮ್ಮುಖ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಹೇಳಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದೆರಡು ವರ್ಷಗಳಿಂದ ನಮ್ಮ ನಾಯಕ ಸಮಾಜ ಮುಖಂಡರು ಬೇರೆ ಬೇರೆ ಕಾರಣಗಳಿಂದ ವಾಲ್ಮೀಕಿ ಜಯಂತಿ ಅದ್ಧೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಸರ್ಕಾರಿ ಕಾರ್ಯಕ್ರಮವಾಗಿ ಅಷ್ಟೇ ಆಚರಿಸಿದ್ದೇವೆ. ಮೂರು ಮೂರು ಬಣಗಳಾಗಿದ್ದು, ರಾಜಕೀಯ ಕಾರಣಗಳಿಂದಾಗಿ ಆಚರಣೆ ಮಾಡಲಾಗಿಲ್ಲ. ಶಾಸಕರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆದಿದ್ದು, ಎಲ್ಲರೂ ಒಟ್ಟುಗೂಡಿ ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಎಲ್ಲ ಜನಾಂಗದ ಮುಖಂಡರ ಕರೆದು ಮಹರ್ಷಿ ವಾಲ್ಮೀಕಿ ಮತ್ತು ಮದಕರಿ ನಾಯಕ ಜಯಂತಿ ಆಚರಣೆಗೆ ಸಭೆ ಕರೆಯಲಾಗಿದೆ. ನಾಯಕ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಪಾಲ್ಗೊಂಡು ಸಲಹೆ ನೀಡಬೇಕು ಎಂದು ಮನವಿ ಮಾಡಿದರು.

ನಿವೃತ್ತ ಉಪನ್ಯಾಸಕ ಹನುಮಂತಾಪುರ ರಾಜಪ್ಪ, ಮಹರ್ಷಿ ವಾಲ್ಮೀಕಿ ಹಾಕಿಕೊಟ್ಟ ಸಂದೇಶಗಳನ್ನು ಜನರಿಗೆ ತಿಳಿಸಬೇಕಾಗಿದೆ. ಅಂದಿನ ಕಾಲದಲ್ಲಿ ಸಾಮಾಜಿಕವಾಗಿ, ಕೃಷಿ, ಶೈಕ್ಷಣಿಕ ಅಭಿವೃದ್ಧಿಗಾಗಿ ಮದಕರಿನಾಯಕರು ಹಾಕಿಕೊಟ್ಟ ಹಾದಿಯನ್ನು ಜನರಿಗೆ ತಿಳಿಸುವ ಉದ್ದೇಶ ನಮ್ಮದಾಗಿದೆ. ಹೀಗಾಗಿ ನಾಯಕ ಸಂಘದ ಗ್ರಾಪಂ ಸದಸ್ಯರು, ಅಧ್ಯಕ್ಷರು, ತಾಪಂ, ಜಿಪಂ ಮಾಜಿ ಅಧ್ಯಕ್ಷರು, ನಿವೃತ್ತ ನೌಕರರು ಭಾಗವಹಿಸಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನಾಯಕ ಸಮಾಜದ ತಾಲೂಕು ಕಾರ್ಯದರ್ಶಿ ಹುಚ್ಚವ್ವನಹಳ್ಳಿ ನಾಗರಾಜ್, ಆರ್.ಓಬಳೇಶ್, ವಕೀಲ ಸಂಘದ ಅಧ್ಯಕ್ಷ ಟಿ.ಬಸವರಾಜ್, ಡಿ.ಆರ್.ಹನುಮಂತಪ್ಪ, ಎನ್.ಬಿ.ತಿಪ್ಪಣ್ಣ, ಚಂದ್ರಶೇಖರ್, ಜೆ.ಟಿ.ರಾಜಣ್ಣ, ರಮೇಶ್, ಜೆ.ಟಿ.ನಾಗರಾಜ್, ಪಿ.ಹಾಲಪ್ಪ, ಕೆಂಚೋಬಳಪ್ಪ, ಶಿಕ್ಷಕ ಲೋಕೇಶ್ ಇತರರು ಇದ್ದರು.

- - -

-08ಜೆ.ಜಿ.ಎಲ್.1:

ಜಗಳೂರು ತಾಲೂಕು ನಾಯಕ ಸಂಘದ ಅಧ್ಯಕ್ಷ ನಾಗರಾಜ್, ಇತರ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ