ವಾಲ್ಮೀಕಿ ರಾಮಾಯಣ ಮಾನವಕುಲದ ಶ್ರೇಷ್ಠ ಜೀವನದರ್ಶನ: ಶಿವಣ್ಣನವರ

KannadaprabhaNewsNetwork |  
Published : Nov 05, 2026, 02:15 AM IST
ಮ | Kannada Prabha

ಸಾರಾಂಶ

ಮಹರ್ಷಿ ವಾಲ್ಮೀಕಿ ಅವರ ಬದುಕು ಸಾಧನೆ, ಪರಿವರ್ತನೆ ಮತ್ತು ಜ್ಞಾನದ ಮಹತ್ವವನ್ನು ಸಾರುತ್ತದೆ.

ಬ್ಯಾಡಗಿ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೇವಲ ಮಹಾ ಕಾವ್ಯವಲ್ಲ, ಅದು ಮಾನವೀಯ ಮೌಲ್ಯಗಳು, ಧರ್ಮ, ನ್ಯಾಯ, ಸತ್ಯ ಮತ್ತು ಆದರ್ಶ ಬದುಕಿನ ದಾರಿ ತೋರಿಸುವ ಶ್ರೇಷ್ಠ ಗ್ರಂಥವಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದಲ್ಲಿ ಬುಧವಾರ ತಾಲೂಕಾಡಳಿತ, ತಾಪಂ.ಬ್ಯಾಡಗಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಮಹರ್ಷಿ ವಾಲ್ಮೀಕಿ ಅವರು ತಮ್ಮ ಜ್ಞಾನ, ತಪಸ್ಸು ಹಾಗೂ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ, ಅವರ ಜೀವನ ಮತ್ತು ಚಿಂತನೆಗಳು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿವೆ. ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಬೆಳೆಸುವ ಮೂಲಕ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಮಹರ್ಷಿ ವಾಲ್ಮೀಕಿಯವರ ಸಂದೇಶಗಳು ಇಂದಿನ ಯುವ ಜನತೆಗೆ ಉತ್ತಮ ಮಾರ್ಗದರ್ಶನ ನೀಡುತ್ತವೆ ಎಂದರು.

ವಾಲ್ಮೀಕಿ ಆದರ್ಶ ಎಲ್ಲರಿಗೂ ಪ್ರೇರಣೆ: ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಬದುಕು ಸಾಧನೆ, ಪರಿವರ್ತನೆ ಮತ್ತು ಜ್ಞಾನದ ಮಹತ್ವವನ್ನು ಸಾರುತ್ತದೆ. ವ್ಯಕ್ತಿಯ ಜೀವನದಲ್ಲಿ ಬದಲಾವಣೆ ಸಾಧ್ಯ ಎಂಬುದಕ್ಕೆ ವಾಲ್ಮೀಕಿ ಮಹರ್ಷಿಗಳ ಜೀವನವೇ ಮಹತ್ವದ ಉದಾಹರಣೆಯಾಗಿದೆ. ಅವರ ರಾಮಾಯಣವು ತಲೆಮಾರುಗಳಿಂದ ಜನರಿಗೆ ಸಂಸ್ಕಾರ, ಕರ್ತವ್ಯಪ್ರಜ್ಞೆ ಮತ್ತು ನೈತಿಕ ಮೌಲ್ಯಗಳನ್ನು ಕಲಿಸುತ್ತಿದೆ ಎಂದರು.

ಶಿಕ್ಷಣಕ್ಕೆ ಆದ್ಯತೆ: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಪೋಷಕರು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಆದ್ಯತೆ ನೀಡಬೇಕು, ಸಂಘಟಿತರಾಗಿ ಸಮಾಜದ ಪ್ರಗತಿಗೆ ಶ್ರಮಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅವರ ಆಶಯಗಳನ್ನು ಸಾಕಾರಗೊಳಿಸಬೇಕು ಎಂದರು.

ಈ ವೇಳೆ ಗ್ರೇಡ್-2 ತಹಶೀಲ್ದಾರ ಸಾರಿಕಾ ಶಿಂಗನಮಕ್ಕಿ, ಪಿಎಸ್‌ಐ ಭಾರತಿ ಕುರಿ, ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ, ನೌಕರರ ಸಂಘದ ಅಧ್ಯಕ್ಷ ಎಂ.ಎನ್.ಕಂಬಳಿ, ಸಮಾಜದ ಮುಖಂಡರಾದ ರಾಮಣ್ಣ ಕೋಡಿಹಳ್ಳಿ, ಹೊನ್ನೂರಪ್ಪ ಕಾಡಸಾಲಿ, ಶಿವಾನಂದ ಯಮನಕ್ಕನವರ, ನ್ಯಾಯವಾದಿ ಶಿವಪ್ಪ ಅಂಬಲಿ, ಕುಮಾರ ಮ್ಯಾಗೇರಿ, ಮಲ್ಲೇಶಪ್ಪ ಒಳಗುಂದಿ, ಮೋಹನಕುಮಾರ ಹುಲ್ಲತ್ತಿ, ನಿಂಗಪ್ಪ ಕೋಡಿಹಳ್ಳಿ, ಮಂಜುನಾಥ ಕೋಡಿಹಳ್ಳಿ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಸಮಾಜ ಬಾಂಧವರು ಉಪಸ್ಥಿತರಿದ್ದರು.

ವಾಲ್ಮೀಕಿ ನಗರದಿಂದ ಆರಂಭವಾದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಬೃಹತ್ ಭಾವಚಿತ್ರದ ಮೆರ ವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿತು, ಡಿಜೆ ಸದ್ದಿಗೆ ಯುವಕರು ಹೆಜ್ಜೆ ಹಾಕಿದ್ದು ಪಟ್ಟಣದಲ್ಲಿ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ