ವಾಲ್ಮೀಕಿ ರಾಮಾಯಣ ಮಾನವ ಜೀವನಕ್ಕೆ ದಾರಿದೀಪ

KannadaprabhaNewsNetwork |  
Published : Oct 27, 2026, 01:30 AM IST
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಾನವ ಜೀವನಕ್ಕೆ ದಾರಿದೀಪ ಸಚಿವ ಕೆ.ಎಂ. ಶಿವಲಿಂಗೇಗೌಡ | Kannada Prabha

ಸಾರಾಂಶ

ಮಹರ್ಷಿ ವಾಲ್ಮೀಕಿ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ತಮ್ಮ ಅಮೂಲ್ಯ ಕೃತಿಗಳ ಮೂಲಕ ಇಡೀ ಮಾನವಕುಲಕ್ಕೆ ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾನ್ ದಾರ್ಶನಿಕರು. ಅವರು ರಚಿಸಿದ ರಾಮಾಯಣವು ಶತಮಾನಗಳಿಂದ ಜನರ ಬದುಕಿನ ಮೇಲೆ ಪ್ರಭಾವ ಬೀರಿದ್ದು, ಧರ್ಮ, ಕರ್ತವ್ಯ, ತ್ಯಾಗ, ಪ್ರೀತಿ ಹಾಗೂ ಮಾನವೀಯತೆಯ ಸಂದೇಶವನ್ನು ಸಾರುತ್ತಿದೆ ಎಂದರು.

ಅರಸೀಕೆರೆ: ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಭಾರತೀಯ ಸಂಸ್ಕೃತಿಯ ಅಮೂಲ್ಯ ಪರಂಪರೆಯಾಗಿದ್ದು, ಮಾನವೀಯ ಮೌಲ್ಯಗಳು, ಸಾಮರಸ್ಯ ಹಾಗೂ ಆದರ್ಶ ಜೀವನದ ಮಹತ್ವವನ್ನು ಸಾರುವ ಮೂಲಕ ಸಮಾಜಕ್ಕೆ ಸದಾ ಮಾರ್ಗದರ್ಶನ ನೀಡುತ್ತಿದೆ ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಹೇಳಿದರು.ನಗರದ ತಾಲೂಕು ಕಚೇರಿಯ ಕಂದಾಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಮಹರ್ಷಿ ವಾಲ್ಮೀಕಿ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ತಮ್ಮ ಅಮೂಲ್ಯ ಕೃತಿಗಳ ಮೂಲಕ ಇಡೀ ಮಾನವಕುಲಕ್ಕೆ ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾನ್ ದಾರ್ಶನಿಕರು. ಅವರು ರಚಿಸಿದ ರಾಮಾಯಣವು ಶತಮಾನಗಳಿಂದ ಜನರ ಬದುಕಿನ ಮೇಲೆ ಪ್ರಭಾವ ಬೀರಿದ್ದು, ಧರ್ಮ, ಕರ್ತವ್ಯ, ತ್ಯಾಗ, ಪ್ರೀತಿ ಹಾಗೂ ಮಾನವೀಯತೆಯ ಸಂದೇಶವನ್ನು ಸಾರುತ್ತಿದೆ ಎಂದರು.ರಾಮಾಯಣ ಕೇವಲ ಧಾರ್ಮಿಕ ಗ್ರಂಥವಲ್ಲ; ಅದು ಆದರ್ಶ ಜೀವನವನ್ನು ರೂಪಿಸಿಕೊಳ್ಳಲು ಪ್ರೇರಣೆ ನೀಡುವ ಮಾರ್ಗದರ್ಶಿಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ರಾಮಾಯಣ ಮತ್ತು ಮಹಾಭಾರತ ಎರಡೂ ಮಹತ್ವದ ಸ್ಥಾನವನ್ನು ಹೊಂದಿವೆ. ಇಂತಹ ಮಹಾನ್ ಕೃತಿಗಳು ಸಮಾಜದಲ್ಲಿ ಸಾಮರಸ್ಯ ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸಲು ನೆರವಾಗಿವೆ ಎಂದು ತಿಳಿಸಿದರು.ವಾಲ್ಮೀಕಿ ಸಮಾಜದವರು ತಮ್ಮ ರಾಜಕೀಯ ಜೀವನದಲ್ಲಿ ಸದಾ ಪ್ರೀತಿ, ವಿಶ್ವಾಸ ಹಾಗೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಅವರ ಹಾರೈಕೆ ಮತ್ತು ಸಹಕಾರದಿಂದ ಇಂದು ಸಚಿವನಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ಮುಂದಿನ ದಿನಗಳಲ್ಲಿ ದಿನಾಂಕ ನಿಗದಿಪಡಿಸಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.ಈ ಸಂದರ್ಭದಲ್ಲಿ ತಹಸೀಲ್ದಾರ್‌ ಎಂ.ಜಿ. ಸಂತೋಷ್ ಕುಮಾರ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್ ಗೀಜಿಹಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶಿವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯಣ್ಣ, ಜಿಲ್ಲಾ ದಿಶಾ ಸಮಿತಿ ಸದಸ್ಯೆ ಮಂಜುಳಾ ಚಂದ್ರನಾಯ್ಕ, ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಹನುಮಪ್ಪ, ಮುಖಂಡರಾದ ಯಳವಾರೆ ಕೇಶವಮೂರ್ತಿ, ಕೆಲ್ಲಂಗೆರೆ ಕುಮಾರ್‌, ರೂಪ ಗುರುಮೂರ್ತಿ, ಕುಮಾರ್‌, ಕೊಟ್ರೇಶ್ ಸೇರಿದಂತೆ ಹಲವು ಮುಖಂಡರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು-ನಾಳೆ ಸಿಜಿಕೆ ರಂಗನಮನ ಕಾರ್ಯಕ್ರಮ
ಮತ್ತೆ ಬೆಳ್ಳೂರು ಶಿವರಾಂ ಬಣಕ್ಕೆ ಬ್ರಾಹ್ಮಣಸಭಾ ಅಧಿಕಾರ