ವಾಲ್ಮಿಕಿ ರಾಮಾಯಣ ಎಲ್ಲರಿಗೂ ಮಾದರಿ: ರಹೀಮ್‌ ಖಾನ್‌

KannadaprabhaNewsNetwork |  
Published : Oct 08, 2025, 01:00 AM IST
ಬೀದರ್‌ನ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮಿಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಪೌರಾಡಳಿತ ಹಾಗೂ ಹಜ್‌ ಖಾತೆ ಸಚಿವರಾದ ರಹೀಮ್‌ ಖಾನ್‌ ಮಾತನಾಡಿದರು. | Kannada Prabha

ಸಾರಾಂಶ

ಮಹರ್ಷಿ ವಾಲ್ಮೀಕಿ ಅವರು ಬರೆದ ರಾಮಾಯಣ ಎಲ್ಲರಿಗೂ ಮಾದರಿಯಾಗಿದೆ, ಇವರ ಇತಿಹಾಸದ ಬಗ್ಗೆ ಎಲ್ಲರೂ ಅರಿತುಕೊಂಡು ನಮ್ಮ ಜೀವನದಲ್ಲಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಪೌರಾಡಳಿತ ಹಾಗೂ ಹಜ್‌ ಖಾತೆ ಸಚಿವರಾದ ರಹೀಮ್‌ ಖಾನ್‌ ಹೇಳಿದರು.

ಕನ್ನಡಪ್ರಭ ವಾರ್ತೆ, ಬೀದರ್‌

ಮಹರ್ಷಿ ವಾಲ್ಮೀಕಿ ಅವರು ಬರೆದ ರಾಮಾಯಣ ಎಲ್ಲರಿಗೂ ಮಾದರಿಯಾಗಿದೆ, ಇವರ ಇತಿಹಾಸದ ಬಗ್ಗೆ ಎಲ್ಲರೂ ಅರಿತುಕೊಂಡು ನಮ್ಮ ಜೀವನದಲ್ಲಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಪೌರಾಡಳಿತ ಹಾಗೂ ಹಜ್‌ ಖಾತೆ ಸಚಿವರಾದ ರಹೀಮ್‌ ಖಾನ್‌ ಹೇಳಿದರು.

ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮಿಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮರ ತತ್ವ ಸಿದ್ಧಾಂತಗಳನ್ನು ಪಾಲಿಸಬೇಕು ಹಾಗೂ ವಾಲ್ಮಿಕಿ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಪಡೆದು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು. ಮಹರ್ಷಿ ವಾಲ್ಮಿಕಿ ಭವನ ನಿರ್ಮಾಣಕ್ಕೆ ಬೇಕಾದ ಅನುದಾನದ ಬಗ್ಗೆ ಮುಖ್ಯಮಂತ್ರಿ ಗಳ ಬಳಿ ಮನವಿ ಮಾಡಿದಾಗಿ ಹೇಳಿದರು.

ಸಂಸದ ಸಾಗರ ಈಶ್ವರ ಖಂಡ್ರೆ ಮಾತನಾಡಿ, ಮಹರ್ಷಿ ವಾಲ್ಮಿಕಿಯನ್ನು ಆದಿಕವಿ ಎಂದು ಕರೆಯುತ್ತಾರೆ. ಇವರು ಬರೆದಿರುವ ರಾಮಾಯಣ ಗ್ರಂಥ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಗ್ರಂಥದಲ್ಲಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅನೇಕ ಅಂಶಗಳು ಒಳಗೊಂಡಿವೆ ಎಂದರು.

ಬೀದರ್‌ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಮಹರ್ಷಿ ವಾಲ್ಮಿಕಿ ಅವರು ಬರೆದ ರಾಮಾಯಣದಿಂದ ಹೊಸ ಯುಗಕ್ಕೆ ನಾಂದಿ ಹಾಡಿತು. ಜಗತ್ತಿನ ಶ್ರೇಷ್ಠ ಗ್ರಂಥಗಳಲ್ಲಿ ರಾಮಾಯಣ ಕೂಡ ಒಂದಾಗಿದೆ. ಮಹಾತ್ಮರನ್ನು ನಾವೆಲ್ಲರೂ ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತ ಗೊಳಿಸಬಾರದು ಅವರು ಇಡೀ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

ಸಾಮಾಜಿಕ ಚಿಂತಕರಾದ ಶಿವಾನಂದ ನಿಡವಂಚಾ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಕುರಿತು ಅತಿಥಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮುಂಚಿತವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹರ್ಷಿ ವಾಲ್ಮಿಕಿ ಅವರ ಭಾವಚಿತ್ರಕ್ಕೆ ಪೌರಾಡಳಿತ ಮತ್ತು ಹಜ್‌ ಖಾತೆ ಸಚಿವ ರಹೀಮ್‌ ಖಾನ್‌, ಬೀದರ್‌ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪೂಜೆ ಸಲ್ಲಿಸಿ ನಂತರ ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್‌, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರಾದ ಅಮೃತರಾ‍ವ್‌ ಚೀಮಕೋಡೆ, ಅಪರ ಜಿಲ್ಲಾದಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಿರೀಶ ರಂಜೊಳಕರ ಸಮಾಜದ ಮುಖಂಡರಾದ ಜಗನ್ನಾಥ ಜಮಾದಾರ, ಸುನೀಲ್‌ ಕಾಶಂಪೂರ್‌, ರಾಜಕುಮಾರ ಕರಣಿ, ನಂದುಕುಮಾರ ಜಮಗಿಕರ್‌, ಸುನೀಲ ಭಾವಿಕಟ್ಟಿ, ಮಾರುತಿ ಮಾಸ್ಟರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ
ವಾಯವ್ಯ ಸಾರಿಗೆಗೆ ಶೀಘ್ರ 700 ಹೊಸ ಬಸ್‌ : ಕಾಗೆ