ಮಾನವೀಯತೆಯೇ ಧರ್ಮ ಎಂದವರು ವಾಲ್ಮೀಕಿ

KannadaprabhaNewsNetwork |  
Published : Oct 18, 2024, 12:16 AM IST
ವಾಲ್ಮೀಕಿ | Kannada Prabha

ಸಾರಾಂಶ

ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಹನೂರು

ಮಹರ್ಷಿ ವಾಲ್ಮೀಕಿ ಮಾನವ ಕುಲಕ್ಕೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿ ಎಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಹೇಳಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಡೀ ವಿಶ್ವಕ್ಕೆ ರಾಮರಾಜ್ಯವನ್ನು ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ. ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿ ರಚನೆಯಾಗಿದ್ದರೂ ವಾಲ್ಮೀಕಿ ರಾಮಾಯಣಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಹೇಳಿದರು.

ವಾಲ್ಮೀಕಿ ರಾಮಾಯಣ ಬೋಧಿಸುವ ಆದರ್ಶಗಳನ್ನು ಬುದ್ಧ, ಬಸವ, ಕನಕದಾಸ, ಅಂಬೇಡ್ಕರ್ ಕೂಡ ಬೋಧಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಮಹನೀಯರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

ಉಪ ಕಾರ್ಯದರ್ಶಿ ಚಂದ್ರಶೇಖರ್, ದ್ವಿತೀಯ ದರ್ಜೆ ಸಹಾಯಕರಾದ ಸರಗೂರು ಮಹಾದೇವಸ್ವಾಮಿ, ಜನಾರ್ಧನ್, ನಾಗರಾಜು, ಮಲ್ಲಿಕಾರ್ಜುನ್, ಸ್ವಾಮಿ, ಆಗಮಿಕರಾದ ಪ್ರಸಾದ್ ಕರವೀರ ಸ್ವಾಮಿ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ