ಕನ್ನಡಪ್ರಭ ವಾರ್ತೆ ಉಡುಪಿ
ಅವರು ಮಂಗಳವಾರ ನಗರಸಭೆ ವತಿಯಿಂದ ನಗರದ ಅಜ್ಜರಕಾಡುವಿನ ಪುರಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪೌರಕಾರ್ಮಿಕರು ಸಮಾಜದ ಆಸ್ತಿ. ಅವರು ತಮ್ಮ ವೃತ್ತಿಯ ಮೂಲಕ ನಗರದ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಅವರಿಂದಾಗಿ ಉಡುಪಿ ನಗರಸಭೆಯು ಇತರೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಮಾದರಿಯಾಗಿ ಕರ್ತವ್ಯನಿರ್ವಹಿಸುತ್ತಿದೆ ಎಂದರು.ಜಿಲ್ಲಾಧಿಕಾರಿ ಡಾ. ಕೆ . ವಿದ್ಯಾಕುಮಾರಿ ಮಾತನಾಡಿ, ನಗರದ ಆರೋಗ್ಯವನ್ನು ಕಾಪಾಡುವ ಪೌರ ಕಾರ್ಮಿಕರ ಆರೋಗ್ಯವೂ ಉತ್ತಮವಾಗಿರಬೇಕು ಎಂಬ ಉದ್ದೇಶದಿಂದ ಸರ್ಕಾರದ ವತಿಯಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಆಯೋಜಿಸಲಾಗುವ ಆರೋಗ್ಯ ತಪಾಸಣೆಯಲ್ಲಿ ಪೌರ ನೌಕರರು ಮಾಡಿಸಿಕೊಳ್ಳಬೇಕು. ಆರೋಗ್ಯದ ದೃಷ್ಟಿಯಿಂದ ಸುರಕ್ಷತಾ ಪರಿಕರ ಉಪಕರಣಗಳನ್ನು ಧರಿಸಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಸಂವಿಧಾನ ದಿನ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಉಡುಪಿ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪುರ ಮೆರವಣಿಗೆ ನಡೆಯಿತು. ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಕೆ. ಪ್ರಭಾಕರ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಉಡುಪಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭಾ ಸದಸ್ಯರು, ಪೌರಕಾರ್ಮಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.