ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿರುವ ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಜೀವನ ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ತಿಳಿಸಬೇಕು. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಸಮುದಾಯದಲ್ಲಿ ಮೌಲ್ಯಾಧಾರಿತ ಬದುಕನ್ನು ರೂಪಿಸಲು ಸಹಾಯ ಮಾಡುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಾನಪದ ಗಾಯಕ ಸಿ.ಎಂ .ನರಸಿಂಹಮೂರ್ತಿ ಮಾತನಾಡಿ, ಕಾಲೇಜು ದಿನಗಳು ವಿದ್ಯಾರ್ಥಿಗಳಿಗೆ ಬಹಳ ಪ್ರಮುಖವಾದದ್ದು. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಸಮಯ ನೀಡಬೇಕು. ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸೃಜನಶೀಲತೆಯನ್ನು ಬೆಳೆಸುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಸ್ವಾಭಿಮಾನ ಬೆಳೆಯುತ್ತದೆ ಮುಂದೆ ಆ ವಿದ್ಯಾರ್ಥಿಗಳೇ ಸಾಧಕರಾಗುತ್ತಾರೆ ಎಂದರು.
ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ. ಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು.ಕನ್ನಡ ಅಧ್ಯಾಪಕ ಆರ್ಕಪ್ಪ ,ಸವಿತಾ, ಪಾರ್ವತಿ, ಮೊದಲಾದವರು ಭಾಗವಹಿಸಿದ್ದರು ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.