ಯಾದಗಿರಿ: 220/110/11ಕೆವಿ ರಾಮಸಮುದ್ರ ವಿದ್ಯುತ್ ಉಪ ಕೇಂದ್ರದಿಂದ ಆಸ್ತಿತ್ವದಲ್ಲಿರುವ 110/11ಕೆವಿ ಸೈದಾಪೂರ ವಿದ್ಯುತ್ ಉಪ ಕೇಂದ್ರದವರೆಗೆ ಡಿ.ಸಿ ಟವರ್‌ಗಳ ಮೇಲೆ ಭಾಗಶಃ ಎಸ್.ಸಿ ಮತ್ತು ಡಿ.ಸಿ ಮಾರ್ಗದ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಸೈದಾಪೂರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ, ತಾಂಡಗಳಿಗೆ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಜೆಸ್ಕಾಂಗೆ ಸಹಕರಿಸಬೇಕು ಎಂದು ಯಾದಗಿರಿ ಕಾರ್ಯ ಮತ್ತು ಪಾಲನಾ ವಿಭಾಗ, ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆ ತಿಳಿಸಿದ್ದಾರೆ.