ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಸ್ವಾಮಿಗೆ ಒಂದು ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, 500 ಲೀಟರ್ ಕಬ್ಬಿನ ಹಾಲು, ಅರಿಶಿನ ಚಂದನ ಹಸುವಿನ ತುಪ್ಪ ಜೇನುತುಪ್ಪ ಸುಗಂಧ ದ್ರವ್ಯಗಳು ಹಾಗೂ ಪವಿತ್ರ ಗಂಗಾಜಲದಿಂದ ಅಭಿಷೇಕ ಮಾಡಿ ಮಲ್ಲಿಗೆ ಜಾಜಿ, ಸಂಪಿಗೆ, ಸೇವಂತಿಗೆ, ಗುಲಾಬಿ, ಪವಿತ್ರ ಪತ್ರೆಗಳು ದವನ, ಕಮಲ ಹಾಗೂ ಸಂಪಿಗೆ, ತುಳಸಿಯಿಂದ ಪುಷ್ಪಾಭಿಷೇಕ ಮಾಡಿ ಪಟ್ಟಾಭಿಷೇಕ ನೆರವೇರಿಸಿ, ಶ್ರೀನಿವಾಸ ಕಲ್ಯಾಣೋತ್ಸವದ ಮೂಲಕ ಲೋಕ ಕಲ್ಯಾಣಾರ್ಥವಾಗಿ ವಿಶೇಷೇ ಪ್ರಾರ್ಥನೆ ಸಲ್ಲಿಸಲಾಯಿತು.
ಆನಂತರ ಭುದೇವಿ ಸಮೇತನಾದ ಭೂವರಾಹನಾಥನ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ಭಾಗವಹಿಸಿದ್ದ ಭಕ್ತಾದಿಗಳಿಗೆ ಸಿಹಿ ಪೊಂಗಲ್, ಬಿಸಿಬೇಳೆ ಬಾತ್, ಮೊಸರನ್ನ ಹಾಗೂ ಸಜ್ಜಪ್ಪ ಪ್ರಸಾದ ವಿತರಿಸಲಾಯಿತು.ದೇಗುಲದ ಟ್ರಸ್ಟಿ ಡಾ.ಶ್ರೀನಿವಾಸ ರಾಘವನ್ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮಾರ್ಗದಿಂದ ಸಾಗಿದರೆ ಮಾತ್ರ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯುವ ಜೊತೆಗೆ ಕೈಹಿಡಿದ ಕೆಲಸದಲ್ಲಿ ಯಶಸ್ಸನ್ನು ಕಾಣಲು ಕೂಡ ಸಾಧ್ಯವಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.
ಕೆ.ಎಂ.ದೊಡ್ಡಿ:ಪ್ರತಿಯೊಬ್ಬರೂ ಎರಡು ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ರೋಟರಿ ಸೆಂಟ್ರಲ್ ಕಾರ್ಯದರ್ಶಿ ಡಾ.ಸೌಮ್ಯ ರಾಜೇಶ್ ಸಲಹೆ ನೀಡಿದರು.
ಕಣ್ಣು ಮಾನವ ದೇಹದ ಅತೀ ಸೂಕ್ಷ್ಮ ಆಂಗ. ಆದ್ದರಿಂದ ಪ್ರತಿಯೊಬ್ಬರು ದೇಹದ ಆರೋಗ್ಯದ ಜೊತೆಗೆ ಕಣ್ಣಿನ ಆರೋಗ್ಯವನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು ಎಂದರು.ಇದೇ ವೇಳೆ ಶಿಬಿರದಲ್ಲಿ 100 ಜನರನ್ನು ತಪಾಸಣೆ ಮಾಡಿ ಅದರಲ್ಲಿ 50 ಜನರನ್ನು 3 ದಿನ ಕಣ್ಣಿನ ಶಸ್ತ್ರ ಚಿಕೆತ್ಸೆಗಾಗಿ ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಗೆ ಕಳುಹಿಸಲಾಯಿತು.