-ಉದ್ಘಾಟನೆ
ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ
-----ಕನ್ನಡಪ್ರಭ ವಾರ್ತೆ ಯಾದಗಿರಿಮಕ್ಕಳ ದಿನಾಚರಣೆ ಕಾರ್ಯಕ್ರಮ ಪ್ರಯುಕ್ತ, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸೊಸೈಟಿ, ಯಾದಗಿರಿ ಇವರ ಸಹಯೋಗದಲ್ಲಿ ಜಿಲ್ಲೆಯಲ್ಲಿರುವ 9-16 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ, ಮಾತನಾಡಿದ ಅವರು, ಮಕ್ಕಳ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಪ್ರತಿವರ್ಷದಂತೆ ಜಿಲ್ಲೆಯಲ್ಲಿ ಜಿಲ್ಲಾ ಬಾಲ ಭವನ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಕಾರ್ಯಕ್ರಮಕ್ಕೆ ಆಯ್ಕೆಗೊಳಿಸಲು ಇಂತಹ ಸ್ಪರ್ಧೆಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಾಲ ಭವನದ ವತಿಯಿಂದ ಹಮ್ಮಿಕೊಳ್ಳುತ್ತಿರುವ ಕಲಾ ಪ್ರತಿಭೆ ಕಾರ್ಯಕ್ರಗಳಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಸೃಜನಾತ್ಮಕ ಕಲೆ (ಚಿತ್ರಕಲೆ, ಜೇಡಿ ಮಣ್ಣಿನ ಕಲೆ, ಕರಕುಶಲೆ), ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂದ), ಸೃಜನಾತ್ಮಕ ಪ್ರದರ್ಶನ ಕಲೆ (ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ), ವಿಜ್ಞಾನದಲ್ಲಿ ನೂತನ ಅವಿಷ್ಕಾರ ಸ್ಪರ್ಧೆಗಳನ್ನು ಯಾದಗಿರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ 250 ಮಕ್ಕಳು ಭಾಗವಹಿಸಿದ್ದರು.
ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯವಾಗಿ ಜಿಲ್ಲಾ ಮಟ್ಟದಿಂದ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಲಾಯಿತು.
-
ಮಕ್ಕಳ ದಿನಾಚರಣೆ ಕಾರ್ಯಕ್ರಮ ಪ್ರಯುಕ್ತ, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸೊಸೈಟಿ, ಯಾದಗಿರಿ ಇವರ ಸಹಯೋಗದಲ್ಲಿ, ಜಿಲ್ಲೆಯಲ್ಲಿರುವ 9-16 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.