ಲೋಕಕಲ್ಯಾಣಾರ್ಥ ಬಲಮುರಿ ಗಣಪತಿ ದೇವಾಲಯದಲ್ಲಿ ವಿವಿಧ ಹೋಮ

KannadaprabhaNewsNetwork |  
Published : Sep 30, 2026, 01:30 AM IST
ಲೋಕಕಲ್ಯಾಣಾರ್ಥ ಬಲಮುರಿ ಗಣಪತಿ ದೇವಾಲಯದಲ್ಲಿ ವಿವಿಧ ಹೋಮ | Kannada Prabha

ಸಾರಾಂಶ

ಅಂಗಾರಕ ಸಂಕಷ್ಟ ಚತುರ್ಥಿಯ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಂಡವು. ಗಣಪತಿಯ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳನ್ನು ನೆರವೇರಿಸಿ, ಬಿಲ್ವಾರ್ಚನೆ ಹಾಗೂ ವಿವಿಧ ರೀತಿಯ ಅರ್ಚನೆಗಳನ್ನು ಸಲ್ಲಿಸಲಾಯಿತು. ಬಳಿಕ ದೇವಾಲಯದ ಆವರಣದಲ್ಲಿ ಮಹಾಗಣಪತಿ, ನವಗ್ರಹ, ವಾಸ್ತು, ಮೃತ್ಯುಂಜಯ, ಧನ್ವಂತರಿ ಸೇರಿದಂತೆ ವಿವಿಧ ಹೋಮಗಳನ್ನು ವಿಧಿವಿಧಾನಗಳೊಂದಿಗೆ ನಡೆಸಲಾಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸರತಿ ಸಾಲಿನಲ್ಲಿ ನಿಂತು ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಅಂಗಾರಕ ಸಂಕಷ್ಟ ಚತುರ್ಥಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು.

ಅರಸೀಕೆರೆ: ಅಂಗಾರಕ ಸಂಕಷ್ಟ ಚತುರ್ಥಿ ಅಂಗವಾಗಿ ನಗರದ ಪ್ರವಾಸಿ ಮಂದಿರದ ಸಮೀಪದ ಹಳೆ ಸಬ್‌ ರಿಜಿಸ್ಟ್ರಾರ್‌ ಕಚೇರಿ ಆವರಣದಲ್ಲಿರುವ ಬಲಮುರಿ ಗಣಪತಿ ದೇವಾಲಯದಲ್ಲಿ ಲೋಕಕಲ್ಯಾಣ ಹಾಗೂ ಸರ್ವರ ಒಳಿತಿಗಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.ಅಂಗಾರಕ ಸಂಕಷ್ಟ ಚತುರ್ಥಿಯ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಂಡವು. ಗಣಪತಿಯ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳನ್ನು ನೆರವೇರಿಸಿ, ಬಿಲ್ವಾರ್ಚನೆ ಹಾಗೂ ವಿವಿಧ ರೀತಿಯ ಅರ್ಚನೆಗಳನ್ನು ಸಲ್ಲಿಸಲಾಯಿತು. ಬಳಿಕ ದೇವಾಲಯದ ಆವರಣದಲ್ಲಿ ಮಹಾಗಣಪತಿ, ನವಗ್ರಹ, ವಾಸ್ತು, ಮೃತ್ಯುಂಜಯ, ಧನ್ವಂತರಿ ಸೇರಿದಂತೆ ವಿವಿಧ ಹೋಮಗಳನ್ನು ವಿಧಿವಿಧಾನಗಳೊಂದಿಗೆ ನಡೆಸಲಾಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸರತಿ ಸಾಲಿನಲ್ಲಿ ನಿಂತು ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಅಂಗಾರಕ ಸಂಕಷ್ಟ ಚತುರ್ಥಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು.ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅಭಿವೃದ್ಧಿ ಸಮಿತಿ ವತಿಯಿಂದ ಮೋದಕ, ಸಜ್ಜಿಗೆ, ಗೊಜ್ಜು ಅವಲಕ್ಕಿ ಸೇರಿದಂತೆ ವಿವಿಧ ಬಗೆಯ ಪ್ರಸಾದವನ್ನು ವಿತರಿಸಲಾಯಿತು.ಪೂರ್ಣಾಹುತಿ ಸಂದರ್ಭದಲ್ಲಿ ದೇವಾಲಯದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಥಪೂರ್ಣವಾಗಿ ದಸರಾಗೆ ಅಗತ್ಯ ಕ್ರಮವಹಿಸಿ: ಜುಬಿನ್‌ ಮೊಹಾಪಾತ್ರ
ತಾಯಿ ಮಕ್ಕಳ ಆರೈಕೆ, ಗುಣಮಟ್ಟದ ಸೇವೆ ನಿಗಾವಹಿಸಿ: ಡಾ.ರಜನಿ ಎಂ