ಇದೇ 13ರಂದು ವಿವಿಧ ಮುಖ್ಯಮಂತ್ರಿಯಿಂದ ವಿವಿಧ ಉದ್ಘಾಟನೆ, ಶಂಕುಸ್ಥಾಪನೆ : ಶಾಸಕ ಟಿ.ಡಿ.ರಾಜೇಗೌಡ

KannadaprabhaNewsNetwork |  
Published : Apr 09, 2026, 01:30 AM IST
ನರಸಿಂಹರಾಜಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅಧ್ಯಕ್ಷತೆಯಲ್ಲಿ ಪೂರ್ವಬಾವಿ ಸಭೆ ನಡೆಯಿತು. ಶಾಸಕ ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಏಪ್ರಿಲ್ 13 ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶೃಂಗೇರಿ ಕ್ಷೇತ್ರದ ವ್ಯಾಪ್ತಿಯ ₹150 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಜ್ಯ ನವೀಕರಿಸಬಹುದಾದ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ತಾಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಏಪ್ರಿಲ್ 13 ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶೃಂಗೇರಿ ಕ್ಷೇತ್ರದ ವ್ಯಾಪ್ತಿಯ ₹150 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಜ್ಯ ನವೀಕರಿಸಬಹುದಾದ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಬುಧವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎನ್.ಆರ್.ಪುರಕ್ಕೆ ಬರುವ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಶೃಂಗೇರಿ ಕ್ಷೇತ್ರ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಿಸ್ತು ಬದ್ದವಾಗಿ ಸರಿಯಾದ ರೀತಿ ನಿರ್ವಹಣೆ ಮಾಡಬೇಕು. ಮಲೆನಾಡಿನ ಸಂಸ್ಕೃತಿ ಬಿಂಬಿಸುವ ರೀತಿಯಲ್ಲಿ ಕಾರ್ಯಕ್ರಮ ನಡೆಸಬೇಕು. ಯಾವುದೇ ಸಮಸ್ಯೆ ಬಂದರೂ ಮುಕ್ತವಾಗಿ ಚರ್ಚೆ ನಡೆಸಬೇಕು. ಶಾಸಕನಾಗಿ ನಾನು ಎಲ್ಲಾ ಸಹಕಾರ ನೀಡುತ್ತೇನೆ. ವಿಶೇಷವಾಗಿ ನರಸಿಂಹರಾಜಪುರ ತಾಲೂಕು ಅಧಿಕಾರಗಳ ಜವಾಬ್ದಾರಿ ಹೆಚ್ಚಾಗಿದೆ ಎಂದರು.

ಮುಂದಿನ 3 ದಿನ ಮಳೆ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ಜಾಗೃತರಾಗಬೇಕು. ಮಳೆ ಬಂದರೆ ಬದಲಿ ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಹಾಗೂ ಟೇಕಾಪ್ ಆಗುವಾಗ ಮಳೆ ಇದ್ದರೆ ಕಷ್ಟವಾಗಲಿದೆ ಎಂದರು.

ಸಭೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಏ.12 ರಂದು ಸಂಜೆ ನರಸಿಂಹರಾಜಪುರಕ್ಕೆ ಬಂದು ವಾಸ್ತವ್ಯ ಹೂಡಲಿದ್ದಾರೆ. ಏ.13 ರಂದು ರಸ್ತೆ ಅಗಲೀಕರಣದ ಭೂಮಿ ಪೂಜೆ, ಸೇತುವೆ ಉದ್ಘಾಟನೆ ಹಾಗೂ ಶೃಂಗೇರಿ ಕ್ಷೇತ್ರ ಮಟ್ಟದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯಲಿದೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಮುಖ್ಯಮಂತ್ರಿಗಳು ನರಸಿಂಹರಾಜಪುರಕ್ಕೆ ಬಂದು ಕಾರ್ಯಕ್ರಮ ಮುಗಿಸಿ ಹೋಗುವವರೆಗೂ ಎಲ್ಲಾ ಇಲಾಖೆ ಅಧಿಕಾರಿಗಳು ಸಿದ್ಧರಾಗಿರಬೇಕು. ಯಾವುದೇ ಸಂದರ್ಭದಲ್ಲೂ ಮುಖ್ಯ ಮಂತ್ರಿ ಮಾಹಿತಿ ಕೇಳಿದರೂ ತಕ್ಷಣ ಇಲಾಖೆ ಮುಖ್ಯಸ್ಥರು ಮಾಹಿತಿ ನೀಡಬೇಕು. ಶೃಂಗೇರಿ ಕ್ಷೇತ್ರದ ಎಲ್ಲಾ ಇಲಾಖೆ ಅಧಿಕಾರಿಗಳ ಹಾಜರಾತಿ ಅತಿ ಮುಖ್ಯ. 250 ಅಧಿಕಾರಿಗಳಿಗೆ ಬೇರೆ ಆಸನ ಮಾಡಲಾಗುವುದು ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ, ಮೆಸ್ಕಾಂ,ಪೊಲೀಸ್ ಇಲಾಖೆ ಮುನ್ನಚ್ಚರಿಕೆ ವಹಿಸಬೇಕು. 3 ಸಾವಿರ ಕುರ್ಚಿಗಳನ್ನು ಹಾಕಿಸಲಾಗುವುದು. ವೇದಿಕೆ ಪಕ್ಕದಲ್ಲೇ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಪಟ್ಟಣದ ಎಲ್ಲಾ ಕಡೆ ಸ್ವಚ್ಛತೆಗೆ ಗಮನ ನೀಡಬೇಕು. ಪಪಂನವರು ಸ್ವಚ್ಛತೆಗೆ ಗಮನ ನೀಡಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಮಾದ್ಯಮದವರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಮುಖ್ಯ ಮಂತ್ರಿ ಕಾರ್ಯಕ್ರಮದ ಶಿಷ್ಟಚಾರದ ಪ್ರಕಾರ ನಡೆಸಲಾಗುವುದು. ಕನಿಷ್ಠ 5 ಜನರಿಗೆ ಮಾತ್ರ ಮಾತನಾಡಲು ಅವಕಾಶವಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿದ ನಂತರ ಗೌರವಾರ್ಪಣೆ ಮಾಡಲು ಅವಕಾಶ ನೀಡಲಾಗುವುದು ಎಂದರು.

ಸಮಾರಂಭಕ್ಕೆ 3 ತಾಲೂಕುಗಳಿಂದ 2,200 ಫಲಾನುಭವಿಗಳು ಬರಲು 50 ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.15 ರಿಂದ 20 ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದರು.

ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಮಾಹಿತಿ ನೀಡಿ, ಬಸ್‌ ಪಾರ್ಕಿಂಗ್‌ಗೆ ನಿಲ್ದಾಣದಿಂದ ಬೇರೆ ರಸ್ತೆಯಲ್ಲಿ ಹೋಗಿ ಅಲ್ಲಿನ ಖಾಲಿ ಲೇಔಟ್ ನಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡುತ್ತೇವೆ. ಪ್ರವಾಸಿ ಮಂದಿರದಿಂದ ಮುಂದಕ್ಕೆ ಹೋದರೆ ಅಲ್ಲೂ ಪಾರ್ಕಿಂಗ್ ವ್ಯವಸ್ಥೆ ಮಾಡುತ್ತೇವೆ. ಮುಖ್ಯಮಂತ್ರಿ ವಾಸ್ತವ್ಯ ಹೂಡುವ ಪ್ರವಾಸಿ ಮಂದಿರದ ಒಳಗೆ ಕೆಲವೇ ವಾಹನಕ್ಕೆ ಮಾತ್ರ ಪ್ರವೇಶವಿದೆ. ಸಾರ್ವಜನಿಕರಿಗೆ ಪ್ರವೇಶವಿಲ್ಲ. ಸಭೆ ನಡೆಯುವಾಗ ವಿಐಪಿ, ಮಹಿಳೆಯರು, ಅಧಿಕಾರಿಗಳು, ಫಲಾನು ಭವಿಗಳು ಹಾಗೂ ಮಾದ್ಯಮದವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಶಿವಮೊಗ್ಗ ಭದ್ರಾ ಕಾಡಾ ಅಭಿವೃದ್ಧ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಜಿಪಂ ಕಾರ್ಯ ನಿರ್ವಹಣಾಧಿಕಾರಿ ಕೀರ್ತನ, ಜಿಲ್ಲಾ ಉಪ ಕಾರ್ಯದರ್ಶಿ ಗೌರವ್ ಶೆಟ್ಟಿ, ತರೀಕೆರೆ ಉಪ ವಿಭಾಗಾಧಿಕಾರಿ ನಟೇಶ್, 3 ತಾಲೂಕುಗಳ ತಹಸೀಲ್ದಾರ್, ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.

-- ಬಾಕ್ಸ್ --

ಮನವಿ ಅರ್ಪಿಸಲು ಸಿದ್ಧತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಾಗ ಶೃಂಗೇರಿ ಕ್ಷೇತ್ರದಿಂದ ಮನವಿ ಅರ್ಪಿಸಲು ಸಿದ್ಧತೆ ಮಾಡಲಾಗಿದೆ. ಅಡಕೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ, ಅರಣ್ಯ ಸಮಸ್ಯೆ, ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಹಾಗೂ ಕೊಪ್ಪದಿಂದ ಶಿವಮೊಗ್ಗ ಏರ್ ಪೋರ್ಟಿಗೆ ಹೋಗಲು ಸುಸಜ್ಜಿತ ರಸ್ತೆಗೆ ವಿಶೇಷ ಅನುದಾನ ನೀಡುವಂತೆ ಮನವಿ ನೀಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಭಾಗದ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುವುದು ಅವಶ್ಯ
ಬಸ್‌ ನಿಲ್ದಾಣ ಉದ್ಘಾಟಿಸಿದ ಸಂಸದ ಡಾ.ಸುಧಾಕರ್‌