- ಕ್ರಿಕೆಟ್, ಸಮಾಜ ಸೇವೆಗಳ ಆಯೋಜನೆ: ದಿನೇಶ ಶೆಟ್ಟಿ
- - - ಕನ್ನಡಪ್ರಭ ವಾರ್ತೆ, ದಾವಣಗೆರೆಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನ ಅಂಗವಾಗಿ ಜೂ.13ರಿಂದ 15ರವರೆಗೆ ಹಲವಾರು ರಚನಾತ್ಮಕ, ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿರುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಜನ್ಮದಿನ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. 13ರಂದು ಬೆಳಗ್ಗೆ 11 ಗಂಟೆಗೆ ಆವರಗೆರೆ ಗ್ರಾಮದ ಗೋಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಿಸಲಾಗುವುದು. 14ರಂದು ಬೆಳಗ್ಗೆ 11 ಗಂಟೆಗೆ ಪಿ.ಜೆ. ಬಡಾವಣೆಯ ವನಿತಾ ಸಮಾಜದ ಹಿರಿಯ ವನಿತೆಯರಿಗೆ ಸೀರೆ ವಿತರಣೆ ಹಾಗೂ ಸಿಹಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.15ರಂದು ವಿಕಲಚೇತನಕರ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ವಿತರಿಸಲಾಗುವುದು. 16ರಂದು ಶಾಮನೂರು ಶಿವಶಂಕರಪ್ಪ ಅವರು ತಮ್ಮ ಮನೆದೇವರು ಎಮ್ಮಿಗನೂರಿನ ಶ್ರೀ ಕಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸುವರು. ಅನಂತರ ನಿವಾಸ "ಶಿವ ಪಾರ್ವತಿ "ಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.
ಪಕ್ಷದ ಸೇವಾದಳದ ಜಿಲ್ಲಾಧ್ಯಕ್ಷ ಡೋಲಿ ಚಂದ್ರು ಮಾತನಾಡಿ, ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರ ಜನ್ಮದಿನವಾದ ಜೂ.16ರಂದು ಬೆಳಗ್ಗೆ 11 ಗಂಟೆಗೆ ಐಎಂಎ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲಿದ್ದಾರೆ ಎಂದರು.ಪಕ್ಷದ ಉತ್ತರ- ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಕೆ.ಜಿ.ಶಿವಕುಮಾರ, ಅಯೂಬ್ ಪೈಲ್ವಾನ್, ಮಹಿಳಾ ಘಟಕದ ಕವಿತಾ ಚಂದ್ರಶೇಖರ, ರಾಜೇಶ್ವರಿ, ಎಸ್.ಮಲ್ಲಿಕಾರ್ಜುನ, ರಾಜು ಭಂಡಾರಿ, ಮಂಜುಳಾ, ಶುಭಮಂಗಳ, ದಾಕ್ಷಾಯಣಮ್ಮ ಇತರರು ಇದ್ದರು.
- - - -12ಕೆಡಿವಿಜಿ3: ದಾವಣಗೆರೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.