ಶ್ರೀ ಆದಿಚುಂಚನಗಿರಿ ಶಾಖಾ ಮಠ ರಜತ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ

KannadaprabhaNewsNetwork |  
Published : Nov 19, 2024, 12:51 AM IST
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ | Kannada Prabha

ಸಾರಾಂಶ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ನ.26ರಂದು ಬಿಜಿಎಸ್‌ ಕರಾವಳಿ ರತ್ನ ಪ್ರಶಸ್ತಿ ಪ್ರದಾನ, ಜ.1,2ರಂದು ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಮಂಗಳೂರು

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ನ.26ರಂದು ಬಿಜಿಎಸ್‌ ಕರಾವಳಿ ರತ್ನ ಪ್ರಶಸ್ತಿ ಪ್ರದಾನ, ಜನವರಿ 1 ಮತ್ತು 2ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ, ಪಿ.ಯು. ಕಾಲೇಜು ಕಟ್ಟಡ ಉದ್ಘಾಟನೆ ಏರ್ಪಡಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಖಾ ಮಠ ರಜತ ಮಹೋತ್ಸವ ಆಚರಿಸುತ್ತಿದೆ. ಅದೇ ರೀತಿ ಬಿಜಿಎಸ್ ಎಜ್ಯುಕೇಶನ್ ಸೆಂಟರ್ (ಸಿಬಿಎಸ್‌ಇ) ಶಾಲೆ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ ಎಂದು ತಿಳಿಸಿದರು.

26ರಂದು ಕರಾವಳಿ ರತ್ನ ಪ್ರಶಸ್ತಿ ಪ್ರದಾನ:

ರಜತ ಮಹೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಡಾ.ವೈ. ಭರತ್ ಶೆಟ್ಟಿ ಮಾತನಾಡಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನ.26ರಂದು ಬೆಳಗ್ಗೆ 10.30ಕ್ಕೆ ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದರು.

ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹೊಸ ದಿಗಂತ ಸಿಇಒ ಪಿ.ಎಸ್. ಪ್ರಕಾಶ್, ಮಾಜಿ ಶಾಸಕ ಸಂಜೀವ ಮಠಂದೂರು, ಮನಪಾ ಸದಸ್ಯೆ ಸುಮಂಗಳಾ ಭಾಗವಹಿಸುವರು ಎಂದರು.

ಸಾಧಕರಾದ ಡಾ.ಕೆ. ಚಿನ್ನಪ್ಪ ಗೌಡ (ಸಾಹಿತ್ಯ), ಪ್ರೊ.ಕೆ.ವಿ.ರಾವ್ (ವಿಜ್ಞಾನ), ಗುರುವಪ್ಪ ಎನ್.ಟಿ. ಬಾಳೆಪುಣಿ (ಮಾಧ್ಯಮ), ಡಾ. ರಮೇಶ್ ಡಿ.ಪಿ., ಡಾ. ಸತೀಶ್ ಕಲ್ಲಿಮಾರ್ (ವೈದ್ಯಕೀಯ), ಪ್ರಕಾಶ್ ಅಂಚನ್ ಬಂಟ್ವಾಳ (ಶಿಕ್ಷಣ), ಮಾಧವ ಸುವರ್ಣ (ಧಾರ್ಮಿಕ), ಭಕ್ತಿ ಭೂಷಣ್‌ದಾಸ್ (ಗೋ ಸೇವೆ), ಪುಷ್ಪಾವತಿ ಬುಡ್ಲೆಗುತ್ತು (ನಾಟಿ ವೈದ್ಯೆ), ವೀಣಾ ಕುಲಾಲ್ (ಸಮಾಜಸೇವೆ), ನರಸಿಂಹ ರಾವ್ ದೇವಸ್ಯ, ಡಾ.ಕೆ.ಎಸ್. ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ನಾಡು (ಕೃಷಿ), ಗೋಪಾಲಕೃಷ್ಣ ಭಟ್ (ಸಿನೆಮಾ), ಜಗದೀಶ್ ಆಚಾರ್ಯ (ಸಂಗೀತ), ಮಂಜುಳಾ ಸುಬ್ರಹ್ಮಣ್ಯ (ನೃತ್ಯ), ಶಿವರಾಮ ಪಣಂಬೂರು (ಯಕ್ಷಗಾನ), ಸುಜಾತ ಮಾರ್ಲ (ಯೋಗ), ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ (ಉದ್ಯಮ), ಅಭಿಷೇಕ್ ಶೆಟ್ಟಿ (ಕ್ರೀಡೆ), ಮಾಧವ ಉಳ್ಳಾಲ್ (ಪರಿಸರ), ವಿಕ್ರಂ ಬಿ. ಶೆಟ್ಟಿ (ಚಿತ್ರಕಲೆ) ಅವರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಭರತ್‌ ಶೆಟ್ಟಿ ವಿವರಿಸಿದರು.

ರಜತ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಪಿ.ಎಸ್. ಪ್ರಕಾಶ್ ಮಾತನಾಡಿದರು.

ರಜತ ಮಹೋತ್ಸವ ಸಮಿತಿ ಉಪಾಧ್ಯಕ್ಷರಾದ ಹರಿನಾಥ್, ಕಿರಣ್ ಬುಡ್ಲೆಗುತ್ತು, ಸುರೇಶ್ ಬೈಲು, ಯೋಗೀಶ್ ಶೆಟ್ಟಿ ಜೆಪ್ಪು, ಪ್ರಧಾನ ಕಾರ್ಯದರ್ಶಿ ರಣದೀಪ್ ಕಾಂಚನ್, ಸಹ ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ಕೋಶಾಧಿಕಾರಿ ನರಸಿಂಹ ಕುಲಕರ್ಣಿ, ಮಂಗಳೂರು ಶಾಖಾ ಮಠದ ಮ್ಯಾನೇಜರ್ ಸುಬ್ಬ ಕಾರಡ್ಕ ಇದ್ದರು. ಇದೇ ಸಂದರ್ಭ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

-------------ಜ.1,2ರಂದು ವೈವಿಧ್ಯಮಯ ಕಾರ್ಯಕ್ರಮ

ರಜತಮಹೋತ್ಸವ ಹಾಗೂ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ನಿರ್ಮಿಸಿರುವ ಪಿ.ಯು. ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನಕ್ಕೆ ಶಂಕುಸ್ಥಾಪನೆ ನೆರವೇರಲಿದೆ ಎಂದು ಶ್ರೀ ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ