ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಕೆ.ಆರ್.ನಗರದ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ಪತೀ ಮಠದ ಮಠಾಧೀಶ ಶ್ರೀ ಶಂಕರಭಾರತೀ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ತತ್ಕರಕಮಲಸಂಜಾತರಾದ ಬ್ರಹ್ಮಾನಂದಭಾರತೀ ಸ್ವಾಮಿಗಳ ಉಪಸ್ಥಿತಿಯಲ್ಲಿ ರಾತ್ರಿ ರಾಕ್ಷೆಘ್ನ ಹೋಮ, ಕಲಶ ಸ್ಥಾಪನಾದಿಗಳು, ಬಲಿ ಉತ್ಸವ, ಗಿರಿಜಾ ಕಲ್ಯಾಣೋತ್ಸವ ರಾತ್ರಿ ನಾಲ್ಕು ಯಾಮಗಳಲ್ಲಿ ಪಂಚಾಮೃತಾಭಿಷೇಕ, ರುದ್ರಾಭಿಷೇಕ ಸಹಿತ ವಿಶೇಷ ಪೂಜೆಗಳು ಜರುಗಿತು.
ರಥೋತ್ಸವ ಸಂದರ್ಭದಲ್ಲಿ ಎಸ್‌ಎಲ್‌ಎನ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ವಾದ್ಯಘೋಷ, ಕೋಲಾಟ ಹಾಗೂ ಭಜನೆ ಮಾಡುತ್ತಾ ರಥೋತ್ಸವಕ್ಕೆ ವಿಶೇಷ ಮೆರಗನ್ನು ತಂದರು. ಹರಿದಾಸ ಮಹಿಳಾ ಸಂಘ, ಸೌಂದರ್ಯ ಲಹರಿ ಭಜನಾ ಮಂಡಳಿಯ ಸದಸ್ಯರುಗಳು ಹಾಗೂ ಸುಮಂಗಲಿಯರು ಸೌಂದರ್ಯ ಲಹರಿ, ಶಿವಾನಂದಲಹರಿ, ಲಲಿತ ಸಹಸ್ರನಾಮ ಮುಂತಾದ ಸ್ತೋತ್ರಗಳನ್ನು ಪಾರಾಯಣ ಮಾಡುತ್ತ ಸಾಗಿದರು.ರಥೋತ್ಸವದ ನಂತರ ದೇವಾಲಯದಲ್ಲಿ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.