ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಆವರಣದಲ್ಲಿ ಕೃಷಿ ಇಲಾಖೆಯಿಂದ 133 ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರು 66 ಮೇಷನ್ ಕಿಟ್ ಹಾಗೂ ಎಲೆಕ್ಟ್ರಿಕಲ್ ಕೆಲಸ ಮಾಡುವ 55 ಕಾರ್ಮಿಕರಿಗೆ ಕೀಟ್‌ಗಳನ್ನು ವಿತರಿಸಿ ಮಾತನಾಡಿದರು.
ತಾಲೂಕಿನ ಅಂತರವಳ್ಳಿಯಲ್ಲಿ 65 ಲಕ್ಷ ರು. ವೆಚ್ಚದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಶಂಕುಸ್ಥಾಪನೆ ಹಾಗೂ 990 ಲಕ್ಷದ ಅಂದಾಜು ಮೊತ್ತದಲ್ಲಿ ಹುಸ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಾಂಪೌಂಡ್ ಮತ್ತು ಸಂಕೀರ್ಣ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ ಎಂದರು.5,78000 ರು. ಬೆಲೆ ಬಾಳುವ 66 ಮೇಷನ್ ಕಿಟ್ ಮತ್ತು 55 ಮಂದಿಗೆ ಎಲೆಕ್ಟ್ರಾನಿಕ್ ಕಿಟ್ ಸೇರಿದಂತೆ ಒಟ್ಟು 111 ಅರ್ಹ ಫಲಾನುಭವಿಗಳಿಗೆ ಕಿಟ್ ವಿತರಿಸಲಾಗಿದೆ. ಕೃಷಿ ಇಲಾಖೆಯಿಂದ 39,90,000 ರು. ವೆಚ್ಚದ ಸಲಕರಣೆಗಳನ್ನು ವಿತರಿಸಲಾಗಿದೆ. 11 ಕೋಟಿಗೂ ಹೆಚ್ಚು ವಿವಿಧ ಸೌಲಭ್ಯ ಹಾಗೂ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಈ ವೇಳೆ ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಪುರಸಭೆ ಸದಸ್ಯ ಶಿವಸ್ವಾಮಿ, ತಾಪಂ ಇಒ ಶ್ರೀನಿವಾಸ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್, ಕಾರ್ಮಿಕ ಇಲಾಖೆ ನಿರ್ದೇಶಕಿ ಅನಿತಾ ಸೇರಿದಂತೆ ಇತರರು ಇದ್ದರು.