ರಾಮನಗರ: ಜಿಲ್ಲೆಯಲ್ಲಿ ಹಲವೆಡೆ ಶನಿವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಇದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು.
ಶನಿವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಜೋರು ಮಳೆಯಾಗಿರುವ ಕಾರಣ ಹೊಲ, ರಸ್ತೆ ಗುಂಡಿಗಳಲ್ಲಿ ನೀರು ತುಂಬಿತ್ತು. ರಸ್ತೆ ದಾಟಲು ಜನರು ಹರಸಾಹಸ ಪಡುತ್ತಿದ್ದರು.
ಗ್ರಾಮೀಣ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬಗಳು, ಮರಗಳು ರಸ್ತೆಗೆ ಉರುಳಿದ್ದು, ಅವುಗಳನ್ನು ತೆರವುಗೊಳಿಸಲು ಮಳೆ ಅಡ್ಡಿಯಾಗಿತ್ತು. ವಿದ್ಯುತ್ ಪೂರೈಕೆಯಲ್ಲಿಯೂ ಅಡಚಣೆ ಉಂಟಾಗಿತ್ತು.ಮನೆಗಳಿಗೆ ನುಗ್ಗಿದ ಕಲುಷಿತ ನೀರು:
ಚನ್ನಪಟ್ಟಣದ ಶೆಟ್ಟೆಹಳ್ಳಿ ಕೆರೆ ಪುನಶ್ಚೇತನ ಕಾರ್ಯ ಸಾಗಿದ್ದು, ಕೆರೆಯಲ್ಲಿನ ಕಲುಷಿತ ನೀರನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಆದರೆ, ಶನಿವಾರ ಸಂಜೆ ಸುರಿದ ಭಾರೀ ಮಳೆಗೆ ಕೆರೆಯ ಕೋಡಿಹಳ್ಳ ಕಟ್ಟಿಕೊಂಡ ಪರಿಣಾಮ ಕೆರೆಯ ಕಲುಷಿತ ನೀರು ರಾಜಾಕೆಂಪೇಗೌಡ ಬಡಾವಣೆಯ ರಸ್ತೆಗೆ ಹರಿದು, ಆಸುಪಾಸಿನ ಮನೆಗಳಿಗೆ ನುಗ್ಗಿ, ಪೀಠೋಪಕರಣಗಳಿಗೆ ಹಾನಿಮಾಡಿತು. ಆನಂತರ ಕೆರೆಯ ಕೋಡಿ ಹಳ್ಳವನ್ಬು ಸ್ವಚ್ಛಗೊಳಿಸಿ ನೀರು ತೆರವುಗೊಳಿಸಲಾಯಿತು. ನಗರಸಭೆ ನಿರ್ಲಕ್ಷ್ಯದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದರು.
ಕನಕಪುರ ಮತ್ತು ಮಾಗಡಿ ಪಟ್ಟಣ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿಯೂ ಮಳೆಯಾಗಿದ್ದು, ಎಲ್ಲಿಯೂ ಯಾವುದೇ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
8.ಚನ್ನಪಟ್ಟಣದ ಇಂಜಿಯನ್ ಆಯಿಲ್ ಪೆಟ್ರೋಲ್ ಬಂಕ್ ಆವರಣದಲ್ಲಿ ಕಾರು ಮುಳುಗಿರುವುದು.
10.ಬೆಂಗಳೂರು - ಮೈಸೂರು ಹಳೆ ಹೆದ್ದಾರಿಯಲ್ಲಿ ಮಳೆ ನೀರು ಸಂಗ್ರಹವಾಗಿರುವುದು.