ಪೌರ ಕಾರ್ಮಿಕರಿಗೆ ವಸತಿ ಸೌಕರ್ಯ ಕಲ್ಪಿಸಲು ವಸಂತ ಕುಮಾರ್ ಭರವಸೆ

KannadaprabhaNewsNetwork |  
Published : Oct 16, 2025, 02:00 AM IST
ತರೀಕೆರೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ | Kannada Prabha

ಸಾರಾಂಶ

ತರೀಕೆರೆ, ಪೌರ ಕಾರ್ಮಿಕರಿಗೆ ಸರ್ಕಾರಿ ನಿವೇಶನದಲ್ಲಿ ವಸತಿ ಸೌಕರ್ಯ ಕಲ್ಪಿಸಿಕೊಡಲು ಪುರಸಭೆ ಅಧ್ಯಕ್ಷ ವಸಂತಕುಮಾರ್ ಭರವಸೆ ನೀಡಿದ್ದಾರೆ.

-ತರೀಕೆರೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಪೌರ ಕಾರ್ಮಿಕರಿಗೆ ಸರ್ಕಾರಿ ನಿವೇಶನದಲ್ಲಿ ವಸತಿ ಸೌಕರ್ಯ ಕಲ್ಪಿಸಿಕೊಡಲು ಪುರಸಭೆ ಅಧ್ಯಕ್ಷ ವಸಂತಕುಮಾರ್ ಭರವಸೆ ನೀಡಿದ್ದಾರೆ.ಬುಧವಾರ ಪುರಸಭೆ ತರೀಕೆರೆ, ಪೌರಸೇವಾ ನೌಕರರ ಸಂಘ ತರೀಕೆರೆ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೌರಕಾರ್ಮಿಕರ ದಿನಾಚರಣೆ ಶುಭಾಷಯ ತಿಳಿಸಿದರು.

ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ ಸ್ವಚ್ಛತೆಗೆ ಟೊಂಕ ಕಟ್ಟಿ ನಿಂತಿರುವ ಪೌರಕಾರ್ಮಿಕರ ಬಗ್ಗೆ ಚಿಂತನೆ ಅಗತ್ಯ, ದಲಿತ ಸಮುದಾಯವನ್ನು ನಡೆಸಿಕೊಳ್ಳುವ ಬಗ್ಗೆ ಚಿಂತನೆ ಅಗತ್ಯ, ಪೌರಕಾರ್ಮಿಕರು ದೇಶಕ್ಕೋಸ್ಕರ ದುಡಿಯುತ್ತಿದ್ದಾರೆ, ದಲಿತರನ್ನು, ಹಿಂದುಳಿದವರನ್ನು ಸಮಾನವಾಗಿ ನೋಡಿಕೊಳ್ಳುವ ಪರಿಸ್ಥಿತಿ ಅಗತ್ಯ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕೊಟ್ಟ ಸಂವಿಧಾನ ನೆನಪಿಸಿಕೊಳ್ಳಬೇಕು. ಅಸಮಾನತೆ ಹೋಗಲಾಡಿಸಬೇಕು ಶೋಷಣೆ ವಿರುದ್ಧ ಹೋರಾಡಬೇಕು. ತರೀಕೆರೆ ಪುರಸಭೆ ನಿಮ್ಮ ಜೊತೆ ಇದೆ ಎಂದು ಹೇಳಿದರು.

ಸರ್ಕಾರದ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣ ಕೊಡಬೇಕು ಎಂದು ಹೇಳಿದರು.ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ ಭಾರತದ ಭವ್ಯ ಭವಿಷ್ಯಕ್ಕಾಗಿ ಸಮರ್ಪಣೆ ಮತ್ತು ಸಂಚಲನಾ ಮನೋಭಾವ ಅಗತ್ಯ ಸುಂದರವಾದ ತರೀಕೆರೆ ಸೌಂದರ್ಯಕ್ಕಾಗಿ ಕ್ಷಣ ಕ್ಷಣವು ಕಣ ಕಣದಲ್ಲೂ ತುಡಿತ ಹೊಂದಿರುವ ನಮ್ಮ ಪೌರಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರಿಗೆ ನಾಗರಿಕರು ಮತ್ತು ಆಡಳಿತ ಮಂಡಳಿ ಸದಾ ಚಿರಋಣಿಯಾಗಿರಬೇಕು. ಪೌರ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಕೊಡುವಂತಾಗಬೇಕು, ರಾಷ್ಟ್ರ ಕಾರ್ಯದಲ್ಲಿ ಭಾರತದ ಉಜ್ವಲ ಭವಿಷ್ಯಕ್ಕಾಗಿ ಅವರನ್ನು ಅಣಿಗೊಳಿಸಬೇಕು ಎಂದು ತಿಳಿಸಿದ ಅವರು ಪೌರಕಾರ್ಮಿಕರಿಗೆ ಶುಭಾಷಯ ತಿಳಿಸಿದರು.ಪುರಸಭೆ ಸದಸ್ಯ ಟಿ.ಜಿ.ಲೋಕೇಶ್ ಮಾತನಾಡಿ ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ. ಕಷ್ಟಪಟ್ಟು ದುಡಿಯುವವರಿಗೆ ಸೌಲಭ್ಯ ಕಲ್ಪಿಸಬೇಕು. ನಿಮ್ಮ ಆರೋಗ್ಯ ಬಹಳ ಮುಖ್ಯ.ಎಲ್ಲ ಪೌರಕಾರ್ಮಿಕರಿಗೆ ಪುರಸಭೆ ಯಿಂದಲೇ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್ ಮಾತನಾಡಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ತರೀಕೆರೆ ಎನ್.ವೆಂಕಟೇಶ್, ಪುರಸಭೆ ಸದಸ್ಯರಾದ ಆಶಾ ಅರುಣ್ ಕುಮಾರ್, ಗಿರಿಜಾ ಪ್ರಕಾಶ್ ವರ್ಮ, ಪುರಸಭೆ ನಾಮಿನಿ ಸದಸ್ಯ ಆದಿಲ್ ಪಾಷ, ಉಪ ವಿಭಾಗಾಧಿಕಾರಿ ನಟೇಶ್ ಮತ್ತಿತರರು ಮಾತನಾಡಿದರು.ಪುರಸಭೆ ಸದಸ್ಯರು, ಪುರಸಭೆ ನಾಮಿನಿ ಸದಸ್ಯರು, ಪೌರಕಾರ್ಮಿಕರು, ಪುರಸಭೆ ಪರಿಸರ ಅಭಿಯಂತರಾದ ತಾಹಿರಾ ತಸ್ನೀಮ್, ಪುರಸಭೆ ಕಂದಾಯ ಅಧಿಕಾರಿ ಮಂಜುನಾಥ್, ಪೌರಸೇವಾ ನೌಕರರ ಸಂಘ ಪದಾದಿಕಾರಿ ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು. ಪ್ರತಿಭಾ ಪುರಸ್ಕಾರ ನೀಡಲಾಯಿತು.

-

15ಕೆಟಿಆರ್.ಕೆ 4ಃ ತರೀಕೆರೆಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪುರಸಭೆ ಅಧ್ಯಕ್ಷ ವಸಂತಕುಮಾರ್, ಪುರಸಭೆ ಸದಸ್ಯರು, ಪುರಸಭೆ ನಾಮಿನಿ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್, ಪೌರಸೇವಾ ನೌಕರರ ಸಂಘ ಪದಾದಿಕಾರಿ ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿ ಅಧಿವೇಶನಕ್ಕೆ ಪೊಲೀಸರ ಸರ್ಪಗಾವಲು
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ