ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ: ಮಹೇಶ್‌

KannadaprabhaNewsNetwork |  
Published : Jul 02, 2024, 01:39 AM IST
ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರ ಸಂಘದಿಂದ ಸೋಮವಾರ ಆಯೋಜಿಸಿದ್ದ ಹೊಸ ಮೂರು ಕಾನೂನುಗಳ ತಿಳುವಳಿಕೆ ಮೂಡಿಸುವ ಕಾರ್ಯಕ್ರಮವನ್ನು ಮಹೇಶ್‌ಕುಮಾರ್ ಅವರು ಉದ್ಘಾಟಿಸಿದರು. ಸುಜೇಂದ್ರ, ಶರತ್‌ಚಂದ್ರ, ಅನಿಲ್‌ಕುಮಾರ್‌, ಪ್ರಿಯದರ್ಶಿನಿ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ರಾಷ್ಟ್ರದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ರೂಪಿಸುವ ನಿಟ್ಟಿನಲ್ಲಿ ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಇಂದಿನಿಂದ ಜಾರಿಗೊಳಿಸಲಾಗಿದೆ ಎಂದು ಹಿರಿಯ ವಕೀಲ ಎಸ್.ಎಚ್.ಮಹೇಶ್‌ಕುಮಾರ್ ಹೇಳಿದರು.

ಇಂದಿನಿಂದ ಜಾರಿಗೆ ಬಂದ ಹೊಸ ಕಾನೂನುಗಳ ಪರಿಚಯ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಷ್ಟ್ರದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ರೂಪಿಸುವ ನಿಟ್ಟಿನಲ್ಲಿ ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಇಂದಿನಿಂದ ಜಾರಿಗೊಳಿಸಲಾಗಿದೆ ಎಂದು ಹಿರಿಯ ವಕೀಲ ಎಸ್.ಎಚ್.ಮಹೇಶ್‌ಕುಮಾರ್ ಹೇಳಿದರು.

ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರ ಸಂಘದಿಂದ ಸೋಮವಾರ ಆಯೋಜಿಸಿದ್ದ ಹೊಸ 3 ಕಾನೂನುಗಳ ತಿಳುವಳಿಕೆ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ದಂಡ ಸಂಹಿತೆ, ಹಿಂದಿನ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಹೊಸದಾಗಿ ಅನುಷ್ಟಾನ ಗೊಳ್ಳುವ ಕಾಯ್ದೆಗಳಾಗಿವೆ ಎಂದು ತಿಳಿಸಿದರು.

ಜೀರೋ ಎಫ್‌ಐಆರ್, ಆನ್‌ಲೈನ್ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಎಸ್‌ಎಂಎಸ್ ಮೂಲಕ ಸಮನ್ಸ್ ಕಳುಹಿಸು ವುದು ಮತ್ತು ಹೇಯ ಅಪರಾಧ ನಡೆದಾಗ ಆ ಸ್ಥಳದ ವೀಡೀಯೋ ಚಿತ್ರೀಕರಣ ಕಡ್ಡಾಯಗೊಳಿಸಿರುವ ನಿಬಂಧನೆಗಳನ್ನು ಹೊಸ ಕಾನೂನುಗಳು ಆಧುನಿಕ ನ್ಯಾಯವ್ಯವಸ್ಥೆ ಜಾರಿಗೆ ತಂದಿದೆ ಎಂದು ವಿಶ್ಲೇಷಿಸಿದರು.ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ಇಂದಿನಿಂದ ದಾಖಲಾಗುವ ಪ್ರತಿಯೊಂದು ಪ್ರಕರಣಗಳು ಹೊಸ ಕಾನೂನಿನ ನಿಯಾಮನುಸಾರ ನಡೆಯಲಿದೆ. ಅಲ್ಲದೇ ನ್ಯಾಯಾಲಯದಲ್ಲಿ ಬಾಕಿ ಉಳಿದ ಪ್ರಕರಣಗಳು ಮಾತ್ರ ಹಿಂದಿನ ಕಾನೂನು ನಿಯಮದಂತೆ ಪಾಲನೆಯಾಗಲಿದೆ ಎಂದರು.ಪ್ರತಿಯೊಂದು ಎಫ್‌ಐಆರ್‌ಗಳನ್ನು 154 ನೇ ಸೆಕ್ಷನ್ ಬದಲಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ನೇ ಸೆಕ್ಷನ್ ಅಡಿ ದಾಖಲಿಸಿಕೊಳ್ಳಲಾಗುತ್ತಿದೆ. ಜೊತೆಗೆ ಹೊಸದಾಗಿ ರಚನೆಯಾದ ಕಾನೂನುಗಳಲ್ಲಿ ಲೋಪದೋಷಗಳು ಕಂಡು ಬಂದಲ್ಲಿ ಸರಿಪಡಿಸಿಕೊಳ್ಳುವ ಕಾರ್ಯಕ್ಕೂ ಮುಂದಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಕೆ.ಎಸ್.ಶರತ್‌ಚಂದ್ರ, ಕಾರ್ಯದರ್ಶಿ ಆರ್.ಅನಿಲ್‌ಕುಮಾರ್, ಖಜಾಂಚಿ ಡಿ.ಬಿ.ದೀಪಕ್, ಸಹ ಕಾರ್ಯದರ್ಶಿ ಎನ್.ವಿ.ಪ್ರಿಯದರ್ಶಿನಿ ಉಪಸ್ಥಿತರಿದ್ದರು.

1 ಕೆಸಿಕೆಎಂ 3ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರ ಸಂಘದಿಂದ ಸೋಮವಾರ ಆಯೋಜಿಸಿದ್ದ ಹೊಸ ಮೂರು ಕಾನೂನುಗಳ ತಿಳುವಳಿಕೆ ಮೂಡಿಸುವ ಕಾರ್ಯಕ್ರಮವನ್ನು ಮಹೇಶ್‌ಕುಮಾರ್ ಉದ್ಘಾಟಿಸಿದರು. ಸುಜೇಂದ್ರ, ಶರತ್‌ಚಂದ್ರ, ಅನಿಲ್‌ಕುಮಾರ್‌, ಪ್ರಿಯದರ್ಶಿನಿ ಇದ್ದರು.

PREV

Recommended Stories

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ