ಚಿಕ್ಕಮಗಳೂರುಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯಡಿ ಉದ್ಯೋಗಾವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್.ಕೀರ್ತನಾ ಮನವಿ ಮಾಡಿದ್ದಾರೆ.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್.ಕೀರ್ತನಾ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯಡಿ ಉದ್ಯೋಗಾವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್.ಕೀರ್ತನಾ ಮನವಿ ಮಾಡಿದ್ದಾರೆ.
ಈ ಮೂಲಕ ತಮ್ಮ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸುವ ಜೊತೆಗೆ, ವೈಯಕ್ತಿಕ ಆದಾಯ ಹೆಚ್ಚಿಸಿಕೊಂಡು ಆರ್ಥಿಕವಾಗಿ ಸದೃಢ ರಾಗಬಹುದು ಎಂದು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಜು. ೧ ರಿಂದ ವಿಬಿಜಿ ರಾಮ್ ಜಿ ಯೋಜನೆ ಅನುಷ್ಠಾನಗೊಂಡಿದ್ದು, ಅರ್ಹ ಗ್ರಾಮೀಣ ಕುಟುಂಬಕ್ಕೆ ೧೦೦ ದಿನಗಳ ಬದಲಾಗಿ ೧೨೫ ಮಾನವ ದಿನಗಳ ಕಡ್ಡಾಯ ಉದ್ಯೋಗ ಅವಕಾಶ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸ್ಯಾಚುರೇಷನ್ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.
ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ), ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಗೆ ಈಗಾಗಲೇ ಮಾಸ್ಟರ್ ಟ್ರೇನರ್‌ಗಳಿಂದ ತರಬೇತಿಯನ್ನು ನೀಡಲಾಗಿದೆ.ದಿನಗೂಲಿ ೩೭೦ರಿಂದ ೩೮೨ ರು.ಗೆ ಏರಿಕೆ:ವಿಬಿಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಕೂಲಿಕಾರರಿಗೆ ನೀಡಲಾಗುವ ದಿನಗೂಲಿ ೩೭೦ರಿಂದ ರೂ.೩೮೨ಕ್ಕೆ ಹೆಚ್ಚಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡುವ ವ್ಯವಸ್ಥೆ ಮುಂದುವರಿಯಲಿದೆ. ಕೂಲಿಕಾರರು ನಿರ್ವಹಿಸಿದ ಕೆಲಸಕ್ಕೆ ಸಂಬಂಧಿಸಿದ ಕೂಲಿ ಮೊತ್ತ ಗರಿಷ್ಠ ೧೫ ದಿನಗಳೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡುವುದು ಕಡ್ಡಾಯ. ಕೂಲಿ ಪಾವತಿಯಲ್ಲಿ ವಿಳಂಬವಾದಲ್ಲಿ ನಿಯಮಾ ನುಸಾರ ಪರಿಹಾರ ಮೊತ್ತವನ್ನು ದಂಡದ ರೂಪದಲ್ಲಿ ಪಾವತಿಸಬೇಕಾಗುತ್ತದೆ.
-- ಕೋಟ್--
ವಿಬಿಜಿ ರಾಮ್ ಜಿ ಯೋಜನೆಯಡಿ ಒಟ್ಟು ೩೧೮ ವಿಧದ ವಿವಿಧ ಕಾಮಗಾರಿ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸುವ ಜತೆಗೆ, ಅಗತ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತದೆ.
- ಎಚ್.ಎಸ್.ಕೀರ್ತನಾ, ಸಿಇಒ, ಜಿಪಂ---ಬಾಕ್ಸ್---ವಿಬಿಜಿ ರಾಮ್ ಜಿ ಯಡಿ ಹಳ್ಳಿಯ ಅಭಿವೃದ್ಧಿಗೆ 4 ಕ್ರಮ೧. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಸಂಗ್ರಹ ಹಾಗೂ ಜಲ ಸಂಪನ್ಮೂಲಗಳ ಅಭಿವೃದ್ಧಿಗೆ ಕಾಮಗಾರಿ ಕೈಗೊಳ್ಳುವುದು.
೨. ಹಳ್ಳಿಯ ಮೂಲಸೌಕರ್ಯ ಅಗತ್ಯ ಪೂರೈಸುವ ರಸ್ತೆ, ಚರಂಡಿ ಸೇರಿದಂತೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು.
೩. ಗ್ರಾಮೀಣ ಜನರ ಉದ್ಯೋಗ ಮತ್ತು ಆದಾಯದ ಅವಕಾಶ ಹೆಚ್ಚಿಸುವ ಹಾಗೂ ವಿವಿಧ ಜೀವನೋಪಾಯ ಚಟುವಟಿಕೆಗಳಿಗೆ ನೆರವಾಗುವ ಮೂಲಸೌಕರ್ಯ ಅಭಿವೃದ್ಧಿ.೪. ತೀವ್ರ ಹವಾಮಾನ ಮತ್ತು ವಿಪತ್ತು ಶಮನ ಕಾರ್ಯಗಳು ಪ್ರವಾಹ, ಬರ, ಅತಿವೃಷ್ಟಿ ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳು ಹಾಗೂ ವಿಪತ್ತುಗಳಿಂದ ಉಂಟಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ಕಾಮಗಾರಿ ಕೈಗೊಳ್ಳುವುದು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.