ಸಂಸ್ಕಾರಯುತ ಸಮಾಜ ಕಟ್ಟಲು ಗಣೇಶೋತ್ಸವ ಪ್ರೇರಣೆ: ಕಾಮತ್

KannadaprabhaNewsNetwork |  
Published : Sep 18, 2026, 02:30 AM IST
ಬಂಟ್ಸ್‌ ಹಾಸ್ಟೇಲ್‌ನಲ್ಲಿ ಗಣೇಶೋತ್ಸವ ಧಾರ್ಮಿಕ ಸಭೆ ನಡೆಯಿತು ಹಾಗೂ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು | Kannada Prabha

ಸಾರಾಂಶ

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್‌ನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭ

ಮಂಗಳೂರು: ಸಂಸ್ಕಾರಯುತ ಹಿಂದೂ ಸಮಾಜ ಒಟ್ಟು ಮಾಡಲು ಗಣೇಶೋತ್ಸವ ಪ್ರೇರಣೆಯಾಗಿದೆ. ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುವ ಶ್ರೀ ಗಣೇಶೋತ್ಸವ ಶಿಸ್ತುಬದ್ದವಾಗಿ ನಡೆಯುತ್ತಿದ್ದು, ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್‌ನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ರೋಗ ರುಜಿನ ದೂರ ಮಾಡಲು, ಜೀವನದಲ್ಲಿ ಶಾಂತಿ ನೆಮ್ಮದಿ ಕಾಣಲು ಗಣೇಶನ ಆರಾಧನೆ ಅಗತ್ಯ ಎಂದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್‌ಗುತ್ತು, ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ.ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಉದ್ಯಮಿ ಸುಯೋಗ್ ಶೆಟ್ಟಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಡಾ.ಸತ್ಯ ಕೃಷ್ಣ ಭಟ್, ರಘುರಾಮ ಭಟ್, ಪ್ರದೀಪದ ಕುಮಾರ್ ಕಲ್ಕೂರ, ವಿವಿಧ ಬಂಟರ ಸಂಘಗಳ ಪದಾಧಿಕಾರಿಗಳಾದ ರತ್ನಾಕರ್ ಶೆಟ್ಡಿ ಎಕ್ಕಾರ್, ಅಶೊಕ್ ಶೆಟ್ಟಿ ಮುಲ್ಕಿ, ಜಯರಾಮ‌ ಬೆಳ್ತಂಗಡಿ, ಮಹಾಬಲ ಚೌಟ, ವಿಜಯ ಶೆಟ್ಟಿ ಕಾರ್ಕಳ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಮತ್ತಿತರರು ಇದ್ದರು.ವೇದಮೂರ್ತಿ ಡಾ.ಸತ್ಯ ಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ವಂದಿಸಿದರು. ಕಿರಣ್ ಪಕ್ಕಳ ನಿರೂಪಿಸಿದರು.

ಶೋಭಾಯಾತ್ರೆಗೆ ಚಾಲನೆ:ಉದ್ಯಮಿ ಸುಯೋಗ್ ಶೆಟ್ಟಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂಜೆ ನಡೆಯಿತು. ಶೋಭಾಯಾತ್ರೆ ಓಂಕಾರ ನಗರದಿಂದ ಬಂಟ್ಸ್ ಹಾಸ್ಟೇಲ್ ಸರ್ಜಲ್, ಪಿವಿಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರ ಅಲೆದಾಟ ತಪ್ಪಿಸಲು ಪ್ರಜಾಸೇವೆ ಆಂದೋಲನ: ಶಾಸಕ ಆರ್.ವಿ. ದೇಶಪಾಂಡೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆತ್ಮಾವಲೋಕನ ಅಗತ್ಯ