13ರಂದು ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ ಜಯಂತಿ

KannadaprabhaNewsNetwork |  
Published : Oct 07, 2026, 01:45 AM IST
6ಕೆಡಿವಿಜಿ2-ದಾವಣಗೆರೆಯಲ್ಲಿ ಡಿವೈಎಸ್ಪಿ ಬಿ.ಶರಣ ಬಸವೇಶ್ವರ ಅವರಿಗೆ ಕೆಪಿಸಿಸಿ ವಕ್ತಾರ ದಿನೇಶ ಕೆ.ಶೆಟ್ಟಿ, ಅಯೂಬ್ ಪೈಲ್ವಾನ್, ಜಿ.ಎಸ್.ಮಂಜುನಾಥ ಗಡಿಗುಡಾಳ, ಎ.ನಾಗರಾಜ ಇತರರು ದೂರು ನೀಡಿದರು. | Kannada Prabha

ಸಾರಾಂಶ

ನಾಡ ದೊರೆ ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ-2026 ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲಾ ನಾಯಕ ಸಮಿತಿ ವತಿಯಿಂದ ಅ.13ರಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ರೀನಿವಾಸ ನಾಯಕ ತಿಳಿಸಿದ್ದಾರೆ.

- ಇಡೀ ದಿನ ನಾಡದೊರೆ ಸೇವೆ, ಕೊಡುಗೆ ಸ್ಮರಣೆ: ಶ್ರೀನಿವಾಸ ನಾಯಕ ಮಾಹಿತಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನಾಡ ದೊರೆ ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ-2026 ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲಾ ನಾಯಕ ಸಮಿತಿ ವತಿಯಿಂದ ಅ.13ರಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ರೀನಿವಾಸ ನಾಯಕ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,​ ಕೋಟೆನಾಡು ಚಿತ್ರದುರ್ಗ ಹಾಗೂ ಈ ನೆಲದ ರಕ್ಷಣೆಗೆ ಶೌರ್ಯ, ಸಾಹಸ, ಪರಾಕ್ರಮ ಮೆರೆದ ರಾಜವೀರ ಮದಕರಿ ನಾಯಕರ ನೆನಪಿನಲ್ಲಿ ಜಯಂತ್ಯುತ್ಸವ ಆಚರಿಸಲಾಗುತ್ತಿದೆ. ವಿವಿಧ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮ ಸಹ ನಡೆಯಲಿವೆ ಎಂದರು.

ಅಂದು ಬೆಳಗ್ಗೆ 11.30ಕ್ಕೆ ನಾಡದೊರೆ ರಾಜವೀರ ಮದಕರಿ ನಾಯಕರ ಪ್ರತಿಮೆ,‌ ವೀರವನಿತೆ ಒನಕೆ‌ ಓಬವ್ವ, ಸಂವಿಧಾನಶಿಲ್ಪಿ ಅಂಬೇಡ್ಕರ್ ಪ್ರತಿಮೆ, ದಾಸಶ್ರೇಷ್ಠ ಕನಕ ದಾಸರ ಪ್ರತಿಮೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಜಗಜ್ಯೋತಿ ಬಸವೇಶ್ವರರ ಪ್ರತಿಮೆ, ಶ್ರೀ ಕೃಷ್ಣ ಪ್ರತಿಮೆಗಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಗುವುದು. ಈ ವೇಳೆ ವಿವಿಧ ಸಾಂಸ್ಕೃತಿಕ, ಜಾನಪದ ಹಾಗೂ ಪಾರಂಪರಿಕ ಕಲಾತಂಡಗಳಿಂದ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿ ​ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಶ್ರೀಗಳು ಸಾನ್ನಿಧ್ಯದಲ್ಲಿ ರಾಜ್ಯದ ಎಲ್ಲ ಸಮುದಾಯದ ಮಠಾಧೀಶರು ಉಪಸ್ಥಿತರಿರುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಮಾರಂಭ ಉದ್ಘಾಟಿಸುವರು. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಧ್ಯಕ್ಷತೆ ವಹಿಸುವರು. ರಾಜ್ಯದ ಎಲ್ಲ ಸಮುದಾಯದ, ಎಲ್ಲ ಹಂತದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ತಿಳಿಸಿದರು.

ಅದೇ ಸಂಜೆ 4.30 ಗಂಟೆಗೆ ರಾಜವೀರ ಮದಕರಿ ನಾಯಕ ರಾಜರ ಪುತ್ಥಳಿ ಮೆರವಣಿಗೆ ನಡೆಯಲಿದೆ. ಅಲ್ಲದೇ, ಬಹಿರಂಗ ಸಭೆಯೂ ನಡೆಯಲಿದ್ದು, ಮಾಜಿ ಸಚಿವ ಬಿ.ಶ್ರೀರಾಮುಲು ಪಾಲ್ಗೊಳ್ಳಲಿದ್ದಾರೆ. ​ರಾತ್ರಿ 7:30ಕ್ಕೆ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಧ್ವನಿ ಬೆಳಕಿನ ಪ್ರದರ್ಶನ ಹಾಗೂ ಪಟಾಕಿ ಸಿಡಿತ ಮತ್ತು ಲೇಸರ್ ಶೋ ಆಯೋಜಿಸಲಾಗಿದೆ ಎಂದು ಶ್ರೀನಿವಾಸ ನಾಯಕ ಮಾಹಿತಿ ನೀಡಿದರು.

ಸಮಾಜದ ಮುಖಂಡರಾದ ಬಿ.ವೀರಣ್ಣ, ಹಿರಿಯ ವಕೀಲ ಎನ್.ಎಂ.ಆಂಜನೇಯ ಗುರೂಜಿ, ಎಚ್.ಜಿ.ಕೃಷ್ಣಮೂರ್ತಿ, ವೆಂಕಟೇಶ, ಮಂಜುನಾಥ ಶ್ಯಾಗಲೆ, ಕೊಡಗನೂರು ಸುರೇಶ, ರಾಜಣ್ಣ ಲಕ್ಷ್ಮೀಸಾಗರ ಇತರರು ಇದ್ದರು.

- - -

-6ಕೆಡಿವಿಜಿ5: ದಾವಣಗೆರೆಯಲ್ಲಿ ಮಂಗಳ‍ವಾರ ಚಿತ್ರದುರ್ಗ ಜಿಲ್ಲಾ ನಾಯಕ ಸಮಾಜದ ಮುಖಂಡ ಶ್ರೀನಿವಾಸ ನಾಯಕ ಸುದ್ದಿಗೋಷ್ಠಿಯಲ್ಲಿ ಮದಕರಿ ನಾಯಕ ಜಯಂತಿ ಆಯೋಜನೆ ಕುರಿತು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಕಾಂಗ್ರೆಸ್ ದೂರು
ಶಿಥಿಲ, ಹಳೇ ಪಶು ವೈದ್ಯಕೀಯ ಆಸ್ಪತ್ರೆಗಳ ಪಟ್ಟಿ ನೀಡಿ: ಶಾಂತನಗೌಡ