
ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರಿಂದ ಪುಷ್ಪಾರ್ಚನೆ । ಗೌರವ ನಮನ
ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಹಸೀಲ್ದಾರ್ ಶ್ರೀಧರ, ಡಿವೈಎಸ್‍ಪಿ ಸೂರಜ್, ಮೇದಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ, ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ಪುತ್ತರಿರ ಪಪ್ಪು ತಿಮ್ಮಯ್ಯ, ಚೊಟ್ಟೆಯಂಡ ಸಂಜು ಕಾವೇರಪ್ಪ, ಕಂಬೆಯಂಡ ಡೀನಾ ಬೋಜಣ್ಣ, ಪಿ.ಕೆ.ಕುಟ್ಟಪ್ಪ ಬೊಳ್ಳಜೀರ ಅಯ್ಯಪ್ಪ, ಪ್ರಮುಖರಾದ ಕೊಕ್ಕಲೆಮಾಡ ಮಂಜುಚಿಣ್ಣಪ್ಪ, ನಾಪಂಡ ರವಿಕಾಳಪ್ಪ, ಬಿ.ಎಸ್.ತಮ್ಮಯ್ಯ, ಉಳ್ಳಿಯಡ ಎಂ.ಪೂವಯ್ಯ, ನಗರಸಭೆ ಸದಸ್ಯ ಸತೀಶ್, ಅನಿತಾ ಪೂವಯ್ಯ, ಸಬಿತಾ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಮಾಜಿ ಸೈನಿಕರ ಗೌರವ ಅಧ್ಯಕ್ಷ ಸೋಮಣ್ಣ, ಪಾಲೆಂಗಡ ಅಮಿತ್, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ಟಿ.ಸುಬ್ಬಯ್ಯ, ಬಿ.ಅಶ್ವಥ್, ವಿನು, ಚೆಯ್ಯಂಡ ಸತ್ಯ, ಸೂರಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಸ್ಕೌಟ್ಸ್ ಆಯುಕ್ತ ಜಿಮ್ಮಿ ಸ್ವೀಕ್ವೇರಾ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟಕ ದಮಯಂತಿ, ಸುಲೋಚನ, ಗಣೇಶ್, ಅವರೆಮಾದಂಡ ಶರಣ್, ಮಾಜಿ ಸೈನಿಕರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಅಭಿಮಾನಿಗಳು ಇತರರು ಹೂಗುಚ್ಛ ಇಟ್ಟು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಪ್ರತಿಯೊಬ್ಬರಿಗೂ ಮಾದರಿ. ಆ ನಿಟ್ಟಿನಲ್ಲಿ ರಾಷ್ಟ್ರದ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಆದರ್ಶವಾಗಿದ್ದು, ಅವರು ಸೇನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅನನ್ಯ ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆ ಸೇರಿದಂತೆ ಮಡಿಕೇರಿ ನಗರದಲ್ಲಿರುವ ಎಲ್ಲಾ ಪ್ರತಿಮೆಗಳನ್ನು ಜಿಲ್ಲಾಡಳಿತ ಸಂರಕ್ಷಿಸಬೇಕು ಎಂದು ಎಂ.ಸಿ.ನಾಣಯ್ಯ ಅವರು ಇದೇ ಸಂದರ್ಭ ಸಲಹೆ ಮಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆ ಇಂದಿನ ಯುವಜನರಿಗೆ ಮಾದರಿ ಎಂದು ತಿಳಿಸಿದರು.
ಶಿಸ್ತು, ಶ್ರದ್ಧೆ ಮತ್ತು ಸಮಯ ಪ್ರಜ್ಞೆಗೆ ಹೆಸರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ರಾಷ್ಟ್ರದ ರಕ್ಷಣಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿವರಿಸಿದರು.ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಕೊಡಗು ಮಣ್ಣಿನಲ್ಲಿ ಹುಟ್ಟಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದಾರೆ ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಶಿಸ್ತಿನ ಸಿಪಾಯಿ ಆಗಿ ಭಾರತೀಯ ಸೇನೆಯಲ್ಲಿ ವಿಶೇಷ ಸ್ಥಾನವನ್ನು ಪಡೆದಿದ್ದರು ಎಂದು ತಿಳಿಸಿದರು.ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ರಾಷ್ಟ್ರ ಕಂಡ ಸೇನಾ ಮಹಾದಂಡನಾಯಕರಾಗಿ ಅದರಂತೆ ನಡೆದುಕೊಂಡರು. ಅಷ್ಟರಮಟ್ಟಿಗೆ ಸೇನಾ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದರು ಎಂದು ತಿಳಿಸಿದರು. ಸಾಹಿತಿ ಮುಲ್ಲೇಂಗಡ ರೇವತಿ ಪೂವಯ್ಯ ಮಾತನಾಡಿ, ಭಾರತದ ಸೇನಾ ಕ್ಷೇತ್ರದಲ್ಲಿನ ಕಣ್ಮಣಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದರು. ಭೂಸೇನೆ, ವಾಯುಸೇನೆ, ನೌಕಸೇನೆ ಈ ಮೂರು ವಿಭಾಗಗಳ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂಡು ಸ್ವಾತಂತ್ರ್ಯ ಭಾರತದ ಮೊಟ್ಟ ಮೊದಲ ಭಾರತೀಯ ಮಹಾ ದಂಡನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಹೇಳಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಧ್ವನಿ ಮುದ್ರಿತ ಸಂದೇಶ ಪ್ರಸಾರ ಮಾಡಲಾಯಿತು.ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ದೇಶಭಕ್ತಿ, ರಾಷ್ಟ್ರಪ್ರೇಮವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರಲ್ಲಿದ್ದ ನಾಗರಿಕ ಪ್ರಜ್ಞೆ ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು. ಪ್ರತಿಯೊಬ್ಬರೂ ಶಿಸ್ತು ಮತ್ತು ಸಮಯ ಪ್ರಜ್ಞೆಯಿಂದ ಬದುಕು ನಡೆಸುವುದು ಹೇಗೆ ಎಂಬುದಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರೇ ಮಾದರಿ ಎಂದರು.ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಗೆ ಶುಭ ಸಂದೇಶ ಕಳುಹಿಸಿದ್ದರು.
ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ರಾಷ್ಟ್ರಗೀತೆ ಹಾಡಿದರು. ನಗರದ ಸಂತ ಮೈಕಲರ ಗೈಡ್ಸ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸಿ.ಅನಿತಾ ನಿರೂಪಿಸಿ, ಸ್ವಾಗತಿಸಿದರು.ವಾದ್ಯವೃಂದ ಸಹಿತ ಪಥಸಂಚಲನಕಾರ್ಯಕ್ರಮಕ್ಕೂ ಮೊದಲು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗಣ್ಯರು ಪಥಸಂಚಲನಕ್ಕೆ ಚಾಲನೆ ನೀಡಿದರು. ಪಥ ಸಂಚಲನದಲ್ಲಿ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಿಂದ ವಾದ್ಯವೃಂದ ನಡೆಯಿತು. ನಗರದ ವಿವಿಧ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು, ಮಾಜಿ ಸೈನಿಕರು ಇತರರು ಪಾಲ್ಗೊಂಡಿದ್ದರು.