೨೩ರಿಂದ ವೀರಶೈವ ಲಿಂಗಾಯತ ಮಹಾ ಅಧಿವೇಶನ: ಸಿದ್ದುಗೌಡ

KannadaprabhaNewsNetwork |  
Published : Dec 14, 2023, 01:30 AM IST
ಚಿತ್ತಾಪುರ ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ವೀರಶೈವ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಸಿದ್ದುಗೌಡ ಅಫಜಲ್ಪುರಕರ್‌ ಮಾತನಾಡಿದರು. | Kannada Prabha

ಸಾರಾಂಶ

ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ೨೪ನೇ ಮಹಾ ಅಧಿವೇಶನ ಡಿ.೨೩ ಮತ್ತು ೨೪ರಂದು ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಸಿದ್ದುಗೌಡ ಅಫಜಲ್ಪುರಕರ್ ಹೇಳಿದ್ದಾರೆ.

ಅಕ್ಕಮಹಾದೇವಿ ದೇವಸ್ಥಾನದಲ್ಲಿ ನಡೆದ ವೀರಶೈವ ಮುಖಂಡರ ಸಿದ್ಧತಾ ಸಭೆಕನ್ನಡಪ್ರಭ ವಾರ್ತೆ ಚಿತ್ತಾಪುರ

ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ೨೪ನೇ ಮಹಾ ಅಧಿವೇಶನ ಡಿ.೨೩ ಮತ್ತು ೨೪ರಂದು ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಸಿದ್ದುಗೌಡ ಅಫಜಲ್ಪುರಕರ್ ಹೇಳಿದ್ದಾರೆ.

ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ನಡೆದ ವೀರಶೈವ ಮುಖಂಡರ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಸೇರಿ ದೇಶದ ವಿವಿಧ ಭಾಗಗಳಿಂದ ೩ ಲಕ್ಷಕ್ಕೂ ಹೆಚ್ಚು ಜನರು ಈ ಮಹಾ ಅಧಿವೇಶನಕ್ಕೆ ಸಾಕ್ಷಿಯಾಗಳಿದ್ದಾರೆ. ಚಿತ್ತಾಪುರ ತಾಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಭಾಂದವರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಮಾಜದ ಸಂಘಟನೆ, ಒಳ ಪಂಗಡಗಳ ಭೇದ ಮರೆತು ಎಲ್ಲರೂ ಸೇರಿ ಒಗ್ಗಟ್ಟು ಪ್ರದರ್ಶನ ಮಾಡಬೇಕು. ಮಹಾ ಅಧಿವೇಶನದಲ್ಲಿ ವಿವಿಧ ವಿಷಯಗಳ ವಿಶೇಷ ಮಂಡನೆ, ಚರ್ಚೆ ಇರಲ್ಲಿದ್ದು, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ಸಂಬಂಧಿಸಿದ ಅನೇಕ ವಿಷಯಗಳು ಇರುತ್ತವೆ. ಈ ಅಧಿವೇಶನದಲ್ಲಿ ಭಾಗವಹಿಸಿಸುವರು ರು.೫೦೦ ಕೊಟ್ಟು ಡಿ.೧೫ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡವರಿಗೆ ೨ದಿನಗಳ ಕಾಲ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಮಹಾಸಭಾ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ ಎಂದರು.

ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ, ಗೌರವಾಧ್ಯಕ್ಷ ಲಿಂಗಾರೆಡ್ಡಿಗೌಡ ಭಾಸರೆಡ್ಡಿ ಮುಖಂಡರಾದ ಮಲ್ಲಣ ಮಾಸ್ಟರ್ ಮೂಡಬುಳ, ನಾಗರೆಡ್ಡಿ ಪಾಟೀಲ್ ಕರದಾಳ, ಸೋಮಶೇಖರ್ ಪಾಟೀಲ್ ಬೆಳಗುಂಪಾ, ಚಂದ್ರಶೇಖರ ಅವಂಟಿ, ಅಂಬರೀಶ್ ಸುಲೇಗಾಂವ, ಸಿದ್ರಾಮಪ್ಪ ಗೊಂಬಿಮಠ ಮಾತನಾಡಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮೇಟಿಕರ್, ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ಜಗದೇವ ದಿಗ್ಗಾಂವಕರ್ ಪ್ರಮುಖರಾದ ವೀರಣ್ಣಗೌಡ ಪರಸರೆಡ್ಡಿ, ಜಗಣ್ಣಗೌಡ ರಾಮತಿರ್ಥ, ಶಿವಲಿಂಗಪ್ಪ ವಾಡೆದ್, ರವೀಂದ್ರ ಸಜ್ಜನಶೆಟ್ಟಿ, ಚಂದ್ರಶೇಖರ್ ತೆಂಗಳಿ, ಅಣ್ಣರಾವ್ ಬಾಳಿ,ಶರಣಪ್ಪ ಸಜ್ಜನ, ಆನಂದ ಪಾಟೀಲ್ ನರಿಬೊಳಿ, ಕೋಟೇಶ್ವರ ರೇಷ್ಮೀ, ಮಂಜುನಾಥಗೌಡ ಪೊಲೀಸ್ ಪಾಟೀಲ್, ಬಸವರಾಜ ಬೊಮ್ಮನಹಳ್ಳಿ ಸೇರಿ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌
ಖಮೇನಿ ಆತ್ಮಕ್ಕೆ ಶಾಂತಿ ದೊರೆಯಲಿ, ಅಮೆರಿಕ ದಾಳಿ ಖಂಡನಾರ್ಹ: ಸಿಎಂ