ಕನ್ನಡಪ್ರಭ ವಾರ್ತೆ ಸುರಪುರ
ನಗರದ ಸತ್ಯಂಪೇಟೆ ಗ್ರಾಮದಲ್ಲಿನ ಪತ್ರಕರ್ತ ಲಿಂ. ಲಿಂಗಣ್ಣ ಸಂತ್ಯಂಪೇಟೆ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿ, ದಾವಣಗೆರೆ ಸಮಾವೇಶದಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹೊರತುಪಡಿಸಿ ವಿರೋಧ ಪಕ್ಷದ ಹಲವಾರು ವೀರಶೈವ ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಳ್ಳದೆ ದೂರ ಉಳಿದಿದ್ದು ಮುಂದಿನ ದಿನಗಳಲ್ಲಿ ಮಾರಕವಾಗಲಿದೆ. ಇದನ್ನು ಹೊಡೆದೋಡಿಸಲು ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಸಮಾವೇಶದಲ್ಲಿ ತೆಗೆದುಕೊಂಡ ನಿರ್ಣಯಗಳಿಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಸಮುದಾಯದ ವಿಷಯದಲ್ಲಿ ರಾಜಕೀಯ ನಾಯಕರು ರಾಜಕೀಯ ಬೆರೆಸಬಾರದು. ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯಗಳನ್ನು ರೂಪಿಸಬೇಕು. ಅದಕ್ಕೆ ನನ್ನ ಬೆಂಬಲಿವಿದೆ ಎಂದರು.ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಭೀಮರಾಯನಗುಡಿಯಲ್ಲಿ ರೈತರು ನಿರಂತರ ಪ್ರತಿಭಟಿಸಿದ್ದರ ಫಲವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ನಾವು ಮತ್ತು ಸಚಿವ ಶರಣಬಸಪ್ಪಗೌಡ ದರ್ಶನಾಪುರ ತಂದು ಬೆಳೆಗಳನ್ನು ಉಳಿಸಲು ನೀರು ಬಿಡಿಸುವ ಕೆಲಸ ಮಾಡಿದ್ದೇವೆ. ಮುಂದೆಯೂ ರೈತರು ಬೇಡಿಕೆ ಈಡೇರಿಕೆಗಾಗಿ ಸರಕಾರಕ್ಕೆ ಮನವಿ ಸಲ್ಲಿಸಿದರೆ ಅದಕ್ಕೆ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ಪಿಎಸ್‌ಐ ಸಿದ್ದಣ್ಣ ಯಡ್ರಾಮಿ, ಮುಖಂಡರಾದ ಶಿವರುದ್ರ ಉಳ್ಳಿ, ವೀರಭದ್ರ ಕೆಂಭಾವಿ, ಜಟ್ಟೆಪ್ಪ, ಮಂಜುನಾಥ ಹಿರೇಮಠ, ಶರಬಣ್ಣ ಹೊಸ್ಮನಿ, ವಿಜಯಕುಮಾರ ಗುಳಗಿ ಸೇರಿದಂತೆ ಇತರರಿದ್ದರು.