ಇಂದು ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ

KannadaprabhaNewsNetwork |  
Published : Apr 25, 2025, 11:47 PM IST

ಸಾರಾಂಶ

ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇಂದು ಬೆಳಿಗ್ಗೆ 10ಕ್ಕೆ ನಗರದ ಸಾಲಗಾಮೆ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿದೆ. ಪದಗ್ರಹಣದ ವಿತರಣೆಯನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಬಿ. ಮುಕ್ತಾಂಭಾ ನೆರವೇರಿಸುವರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಬಿ. ಅಬ್ಬೀಗೆರೆ ಮನೋಹರ್ ಪ್ರಾಸ್ತಾವಿಕ ನುಡಿ ಮಾತಾನಾಡುವರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇಂದು ಬೆಳಿಗ್ಗೆ 10ಕ್ಕೆ ನಗರದ ಸಾಲಗಾಮೆ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಹಾಸನ ತಣ್ಣೀರು ಹಳ್ಳ ಮಠದ ಮಠಾಧೀಶರಾದ ಹಾಗೂ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗೌರವಧ್ಯಕ್ಷ ವಿಜಯ್ ಕುಮಾರ್ ಸ್ವಾಮೀಜಿರವರು ವಹಿಸುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕರು ಹಾಗೂ ಹಾಸನ ಮಾಜಿ ಹಾಸನ ಜಿಲ್ಲಾ ಅಧ್ಯಕ್ಷರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಬಿ.ಆರ್‌. ಗುರುದೇವ್ ಇವರು ನೆರವೇರಿಸುವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ವಹಿಸುವರು.

ಪದಗ್ರಹಣದ ವಿತರಣೆಯನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಬಿ. ಮುಕ್ತಾಂಭಾ ನೆರವೇರಿಸುವರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಬಿ. ಅಬ್ಬೀಗೆರೆ ಮನೋಹರ್ ಪ್ರಾಸ್ತಾವಿಕ ನುಡಿ ಮಾತಾನಾಡುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷರಾದ ಗೀತಾ ಪುಟ್ಟಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಮಹೀಳಾ ಘಟಕದ ಮಹಿಳಾ ಘಟಕದ ಅಧ್ಯಕ್ಷರಾದ ಮಮತಾ ಪಾಟೀಲ್ ಭಾಗವಹಿಸಿಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ಪದಾಧಿಕಾರಿಗಳಿಗೆ ನಿರ್ದೇಶಕರಿಗೆ ಪದಗ್ರಹಣದ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ನಿಡಲಾಗುವುದು. ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಹಾಗೂ ಸದಸ್ಯತ್ವ ಪಡೇದವರಿಗೆ ಗುರುತಿನ ಪತ್ರ ನಿಡಲಾಗುವುದು. ಈ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮಹಿಳೆಯರು ಹಾಗೂ ಹಾಸನ ತಾಲೂಕು ಮಹಾಸಭಾ ಸಮಿತಿಯವರು ಹಾಗೂ ವೀರಶೈವ ಲಿಂಗಾಯಿತ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದ್ದಾರೆ.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ