ವೀರಶೈವ ಲಿಂಗಾಯಿತ ಧರ್ಮ ವಿಶ್ವದಲ್ಲಿ ಶ್ರೀಮಂತ ಧರ್ಮ

KannadaprabhaNewsNetwork |  
Published : Jul 21, 2025, 12:00 AM IST
ಗುಬ್ಬಿ ಪಟ್ಟಣದ ಹೊರವಲಯದಲ್ಲಿರುವ ಶ್ರೀಗುರು ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ತಾಲೂಕು ಘಟಕ ಹಾಗೂ ಶಿವ ಬಸವ ನೌಕರರ ಸೌಹಾರ್ದ ಸಹಕಾರ ಸಂಘ  ಇವರ ಆಶ್ರಯದಲ್ಲಿ ತಾಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ, ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಟ್ಟದಹಳ್ಳಿ ಗವಿಮಠ ಅಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ. | Kannada Prabha

ಸಾರಾಂಶ

ವೀರಶೈವ ಲಿಂಗಾಯಿತ ಧರ್ಮ ವಿಶ್ವದಲ್ಲಿ ಶ್ರೀಮಂತ ಧರ್ಮವಾಗಿದೆ ಎಂದು ಬೆಟ್ಟದಹಳ್ಳಿ ಗವಿಮಠ ಅಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ವೀರಶೈವ ಲಿಂಗಾಯಿತ ಧರ್ಮ ವಿಶ್ವದಲ್ಲಿ ಶ್ರೀಮಂತ ಧರ್ಮವಾಗಿದೆ ಎಂದು ಬೆಟ್ಟದಹಳ್ಳಿ ಗವಿಮಠ ಅಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಶ್ರೀಗುರು ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ತಾಲೂಕು ಘಟಕ ಹಾಗೂ ಶಿವ ಬಸವ ನೌಕರರ ಸೌಹಾರ್ದ ಸಹಕಾರ ಸಂಘ ಇವರ ಆಶ್ರಯದಲ್ಲಿ ತಾಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ, ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವೀರಶೈವ ಹಾಗೂ ಲಿಂಗಾಯಿತ ಎರಡು ಒಂದೇ ಧರ್ಮವಾಗಿದೆ. ನಾವೆಲ್ಲರೂ ಸಹ ವೀರಶೈವ ಧರ್ಮವನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಭಾರತಿ ಸಂಸ್ಕೃತಿಯ ಆಚರಣೆ ಹಾಗೂ ಅನುಷ್ಠಾನದಿಂದ ಹಿಡಿದು ಎಲ್ಲವನ್ನು ಕಾಲಕಾಲಕ್ಕೂ ಎತ್ತಿಹಿಡಿಯುವ ಮೂಲಕ ಮೂಲ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಿದ ಕೀರ್ತಿ ವೀರಶೈವ ಲಿಂಗಾಯತ ಧರ್ಮಕ್ಕಿದೆ. ಈ ದೇಶದಲ್ಲಿ ಮಠ ಮಾನ್ಯಗಳು ಇಲ್ಲದಿರುವ ಆ ಸಮಾಜವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಶಿಕ್ಷಣದಿಂದ ಹಿಡಿದು ಎಲ್ಲ ರಂಗಕ್ಕೂ ಕೊಡುಗೆ ನೀಡಿದ ಧರ್ಮವಾಗಿರುವ ಈ ಧರ್ಮವನ್ನು ನಾವುಗಳು ಇನ್ನಷ್ಟು ಎತ್ತರಕ್ಕೆ ಕೊಂಡೋಯ್ಯಬೇಕಿದೆ ಎಂದರು. ಗೊಲ್ಲಹಳ್ಳಿ ಮಠಾಧ್ಯಕ್ಷರಾದ ಶ್ರೀ ವಿಭವ ವಿದ್ಯಾಶಂಕರ ದೇಶಿಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿಕೊಂಡು ಮಾತನಾಡಿದ ಅವರು, ಮಕ್ಕಳ ವಿಧ್ಯಾಭ್ಯಾಸದ ಕಡೆ ಪೋಷಕರು ಹೆಚ್ಚು ಗಮನಕೊಡಿ. ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕು.ಮಕ್ಕಳು ಶಿಕ್ಷಣದಲ್ಲಿ ಒಳ್ಳೆಯ ಹೆಸರನ್ನು ಸಂಪಾದಿಸಿದರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸಲು ಸಾಧ್ಯವಾಗುತ್ತದೆ ಎಂದರು.

ಯೋಜನಾ ಮತ್ತು ಸಾಂಖ್ಯಿಕ ಸಚಿವರ ಆಪ್ತ ಕಾರ್ಯದರ್ಶಿ ಎಚ್.ಸಿ.ಸೋಮಶೇಖರ್ ಮಾತನಾಡಿ, ಸಮಾಜದಲ್ಲಿ ಹೆಚ್ಚು ಶ್ರೀಮಂತರು ಇರುವುದರಿಂದ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಕೊಡುಗೆಯನ್ನು ನೀಡಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಎಸ್. ಸಿದ್ದಲಿಂಗಪ್ಪ ಮಾತನಾಡಿ, ಬುದ್ಧಿವಂತಿಕೆಯಲ್ಲಿ ಎಲ್ಲಾ ಸಮಾಜದ ಮಕ್ಕಳಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಓದುವ ಅಭ್ಯಾಸವನ್ನು ನಿರಂತರವಾಗಿ ಮಾಡುವ ಮೂಲಕ ಸಮಾಜದಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ಉತ್ತಮ ಸ್ಥಾನಮಾನ ಗಳಿಸಬೇಕು. ಮಕ್ಕಳು ಸಂಕುಚಿತ ಮನೋಭಾವವನ್ನು ಬಿಟ್ಟು ವಿಶಾಲವಾಗಿ ಯೋಚಿಸುವುದನ್ನು ರೂಡಿಸಿಕೊಳ್ಳಬೇಕು ಎಂದರು.ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್, ನೊಳಂಬ ಲಿಂಗಾಯತ ಸಂಘದ ವೀರಶೈವ ಮಹಾಸಭಾದ ಕಾರ್ಯದರ್ಶಿ ಎಸ್.ಆರ್.ನಟರಾಜು ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತ ನೌಕರರಿಗೆ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಿ. ಬಿ. ಚಂದ್ರಶೇಖರ್ ಬಾಬು, ಎಚ್.ಸಿ.ಪ್ರಾಭಾಕರ್, ಎ.ಎನ್.ವಿಶ್ವಾರಾಧ್ಯ, ಬಿ.ಜಿ.ದಿವ್ಯಪ್ರಕಾಶ್, ಎಚ್.ಸಿ.ಯತೀಶ್, ಪಿ.ಆರ್.ಚನ್ನಬಸವಯ್ಯ, ಎನ್.ಆರ್.ನಿಜಗುಣಪ್ಪ, ಎಸ್.ಮಂಜುನಾಥ್ ಹಾಗೂ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿ, ಶಿವಬಸವ ನೌಕರರ ಸೌಹಾರ್ದ ಸಹಕಾರಿ ನಿಯಮಿತದ ಪದಾಧಿಕಾರಿಗಳು, ನಿವೃತ್ತ ನೌಕರರು ಪ್ರತಿಭಾನ್ವಿತ ಮಕ್ಕಳು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’