- ಮಾಜಿ ಸಚಿವ, ವೀರಶೈವ ಮಹಾಸಭಾ ಉಪಾಧ್ಯಕ್ಷ ಅಮರೇಗೌಡ ಹೇಳಿಕೆ
- ಒಳಪಂಗಡ ಬೇಧ ಮರೆತು ಒಂದಾದಾಗ ಮಾತ್ರ ರಾಜಕೀಯ ಶಕ್ತಿ ಸಾಧ್ಯ : ಬಯ್ಯಾಪುರ
- ಜಾತಿಗಣತಿ ಅವೈಜ್ಞಾನಿಕ ಎಂಬ ನಮ್ಮ ಒಕ್ಕೂರಲ ಕೂಗಿಗೆ ಕೈಬಿಟ್ಟ ಸರ್ಕಾರ ------ಕನ್ನಡಪ್ರಭ ವಾರ್ತೆ ಯಾದಗಿರಿ
ಭಾನುವಾರ, ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಮಹಾಸಭಾದ ಜಿಲ್ಲಾ ಮತ್ತು ಪದಾಧಿಕಾರಿಗಳ ಸಭೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಒಂದು ಕಾಲದಲ್ಲಿ ಕರ್ನಾಟಕದ ವಿಧಾನಸಭೆಗೆ ನೂರಕ್ಕೂ ಹೆಚ್ಚು ಜನ ವೀರಶೈವ ಲಿಂಗಾಯತ ಸಮಾಜದ ಶಾಸಕರು ಆಯ್ಕೆಯಾಗಿ ಬರುತ್ತಿದ್ದರು. ಆದರೆ, ನಾವು ಒಳಪಂಗಡಗಳ ಹೆಸರಲ್ಲಿ ಛಿಧ್ರವಾಗಿರುವುದರಿಂದ ನಮ್ಮ ಸಂಖ್ಯೆ ಈಗ ಅರ್ಧಕ್ಕಿಳಿದಿದೆ ಎಂದು ಅವರು ಬೇಸರ ಹೊರಹಾಕಿದರು.
ಜಾತಿಗಣತಿ ಅವೈಜ್ಞಾನಿಕ ಮತ್ತು ಅದನ್ನು ಜಾರಿಗೊಳಿಸಲೇಬಾರದು ಎಂದು ನಾವೆಲ್ಲರೂ ಒಕ್ಕೂರಲಿನಿಂದ ಒತ್ತಾಯಿಸಿದ್ದಕ್ಕಾಗಿಯೇ ಸರ್ಕಾರ ಅದನ್ನು ಕೈಬಿಟ್ಟಿದೆ ಎಂದರು.
ಮಹಾಸಭಾದ ರಾಜ್ಯ ಪ್ರ.ಕಾ ನಟರಾಜ ಸಾಗರನಹಳ್ಳಿ ಮಾತನಾಡಿ, ಜಿಲ್ಲೆಯಲ್ಲೂ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಾಣ ಹಾಗೂ ವೀರಶೈವ ಲಿಂಗಾಯತ ಭವನ ನಿರ್ಮಾಣ ಮಾಡಬೇಕು ಎಂಬುದು ರಾಜ್ಯ ಘಟಕದ ಯೋಜನೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಸಚಿವರು ನಮ್ಮ ಸಮಾಜಕ್ಕೆ ಸೂಕ್ತ ನಿವೇಶನ ಒದಗಿಸುವ ಕಾರ್ಯ ಮಾಡಬೇಕೆಂದು ಮನವಿ ಮಾಡಿದರು.
ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಅಮರೇಗೌಡ ಬಯ್ಯಾಪೂರ ಚಾಲನೆ ನೀಡಿ, ಸಿದ್ಧಲಿಂಗರೆಡ್ಡಿ ಹಳಿಮನಿ ಮಲ್ಹಾರ ಹಾಗೂ ಶಾಂತರೆಡ್ಡಿ ದೇಸಾಯಿ ನಾಯ್ಕಲ್ ಅವರಿಗೆ ಸಾಂಕೇತಿಕವಾಗಿ ಸದಸ್ಯತ್ವ ರಸೀದಿ ನೀಡಿ ಚಾಲನೆ ನೀಡಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಸಿದ್ಧರಾಜರೆಡ್ಡಿ ವಂದಿಸಿದರು.
29ವೈಡಿಆರ್1: ಯಾದಗಿರಿಯಲ್ಲಿ ಮಹಾಸಭಾದ ಜಿಲ್ಲಾ ಮತ್ತು ಪದಾಧಿಕಾರಿಗಳ ಸಭೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾಜಿ ಸಚಿವ ಹಾಗೂ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಅಮರೇಗೌಡ ಬಯ್ಯಾಪೂರ ಮಾತನಾಡಿದರು.