ವೀರಶೈವ ಲಿಂಗಾಯುತರೇ, ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿ: ಮಾಧವಪ್ರಸಾದ್ ಕರೆ

KannadaprabhaNewsNetwork | Updated : Apr 25 2024, 01:04 AM IST

ಸಾರಾಂಶ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ಮೋಸ ಮಾಡಿದ ವ್ಯಕ್ತಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಬುದ್ಧಿ ಕಲಿಸುವ ಅವಕಾಶ ಇಂದು ಜಿಲ್ಲೆಯ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರಬಹುದು. ಇದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಆಶಯಕ್ಕೆ ವಿರುದ್ಧವಾಗಿದೆ. ಸಮುದಾಯದ ಒಗ್ಗಟ್ಟಿನಿಂದ ಎಚ್ಡಿಕೆ ಸೋಲಿಸೋಣ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮಂಡ್ಯ ಜಿಲ್ಲೆಯ ವೀರಶೈವ - ಲಿಂಗಾಯತ ಸಮುದಾಯ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತಹಾಕುವಂತೆ ತಾಪಂ ಮಾಜಿ ಸದಸ್ಯ ಮಾಧವ ಪ್ರಸಾದ್ ಕರೆ ನೀಡಿದರು.

ಪಟ್ಟಣದ ಎಸ್.ಕೆ.ಚಿಕ್ಕಣ್ಣಗೌಡ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೆಂಬಲಿತ ವೀರಶೈವ ಸಮುದಾಯದ ಸಭೆಯಲ್ಲಿ ಮಾತನಾಡಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ಮೋಸ ಮಾಡಿದ ವ್ಯಕ್ತಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಬುದ್ಧಿ ಕಲಿಸುವ ಅವಕಾಶ ಇಂದು ಜಿಲ್ಲೆಯ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸಿಕ್ಕಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರಬಹುದು. ಇದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಆಶಯಕ್ಕೆ ವಿರುದ್ಧವಾಗಿದೆ. ಸಮುದಾಯದ ಒಗ್ಗಟ್ಟಿನಿಂದ ಎಚ್ಡಿಕೆ ಸೋಲಿಸೋಣ ಎಂದು ಕರೆ ನೀಡಿದರು.

ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಕೊಟ್ಟ ಮಾತಿನಂತೆ ಅಧಿಕಾರ ಬಿಟ್ಟುಕೊಡದೆ ಮೋಸ ಮಾಡಿದ ಜೆಡಿಎಸ್ ನ ಅಪ್ಪ ಮಕ್ಕಳ ರಾಜಕೀಯಕ್ಕೆ ಅಂತ್ಯಕ್ಕೆ ಜಿಲ್ಲೆಯ ಜನ ಮುನ್ನುಡಿ ಬರೆಯಬೇಕು ಎಂದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾಂಗ್ರೆಸ್ ಮುಖಂಡರಾದ ಬಿ.ಎಲ್.ದೇವರಾಜು, ಎಂ.ಡಿ.ಕೃಷ್ಣಮೂರ್ತಿ, ಕೋಡಿಮಾರನಹಳ್ಳಿ ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ವೀರಶೈವ ಸಮಾಜದ ಮುಖಂಡ ಸಾಸಲು ಈರಪ್ಪ, ಮಾದೇಶ್ ಸೇರಿದಂತೆ ಹಲವರು ಮಾತನಾಡಿದರು. ವಕೀಲ ಚಟ್ಟಂಗೆರೆ ನಾಗೇಶ್, ಪುರಸಭಾ ಸದಸ್ಯ ಕೆ.ಆರ್.ರವೀಂದ್ರ ಬಾಬು, ಕೆ.ಎಸ್.ನಾಗೇಶ್‌ ಬಾಬು, ಯಗಚಗುಪ್ಪೆ ಶಿವಲಿಂಗಪ್ಪ ಇದ್ದರು.ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ಖಚಿತ : ಎನ್.ಚಲುವರಾಯಸ್ವಾಮಿಭಾರತೀನಗರ:ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಭಾರತೀಕಾಲೇಜಿಗೆ ಭೇಟಿ ನೀಡಿದ ವೇಳೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳನ್ನು ಜನರು ಸದ್ಬಳಕೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಜನರು ಬೆಂಬಲಿಸುವರು. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಇದರಿಂದ ಸ್ಟಾರ್ ಚಂದ್ರು ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಮಾತನಾಡಿ, ಮತದಾರರು ನನ್ನನ್ನು ಕ್ಷೇತ್ರದಲ್ಲಿ ಅಧಿಕ ಮತಗಳಿಂದ ಗೆಲ್ಲಿಸಬೇಕು. ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಶಾಸಕ ಪಿ.ನರೇಂದ್ರಸ್ವಾಮಿ, ಮಧು ಜಿ.ಮಾದೇಗೌಡ, ಮಾಜಿ ಶಾಸಕರಾದ ಬಿ.ರಾಮಕೃಷ್ಣ, ಎಂ.ಶ್ರೀನಿವಾಸ್, ತಾಪಂ ಮಾಜಿ ಸದಸ್ಯರಾದ ಬಿ.ಗಿರೀಶ್, ಭರತೇಶ್, ಮುಖಂಡರಾದ ಬಸವರಾಜೇಗೌಡ, ಆರ್.ಸಿದ್ದಪ್ಪ, ಸ್ವರೂಪ್‌ಚಂದ್ರ, ಪುಟ್ಟಸ್ವಾಮೀಗೌಡ, ಕಬ್ಬಾಳಯ್ಯ, ಸಿದ್ದೇಗೌಡ, ಅಪ್ಪಾಜಿ, ವಿಶ್ವ, ಅವಿನಾಶ್, ಮೆಳ್ಳಹಳ್ಳಿ ವಿನಯ್, ಚಿಕ್ಕರಸಿನಕೆರೆ ವಿಜಿ, ಪಾಪಣ್ಣ ಸೇರಿದಂತೆ ಹಲವರಿದ್ದರು.

Share this article