ಗುಂಡ್ಲುಪೇಟೆ ಶಾಸಕರಿಗೆ ಮಂತ್ರಿಗಿರಿಗಾಗಿ ಬೇಡಿಕೆ

KannadaprabhaNewsNetwork |  
Published : Jun 02, 2026, 01:45 AM IST
 ಎನ್‌ರಿಚ್ | Kannada Prabha

ಸಾರಾಂಶ

ಮಾಜಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್‌ರವರ ಪುತ್ರ ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್‌ರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಾಜಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್‌ರವರ ಪುತ್ರ ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್‌ರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎನ್‌ರಿಚ್ ಮಹದೇವಸ್ವಾಮಿ, ವೀರಶೈವ ಲಿಂಗಾಯತ ಸಮಾಜದ ಯುವ ನಾಯಕರು ಆದ ಎಚ್.ಎಂ. ಗಣೇಶ್ ಪ್ರಸಾದ್‌ ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರು ಆಗಿದ್ದು, ಇವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಯತ್ತ ಕೊಂಡೊಯ್ಯಲು ಅನುಕೂಲವಾಗಲಿದೆ ಎಂದರು.ಜಿಲ್ಲೆಯ ಅಭಿವೃದ್ಧಿ, ರೈತರ ಸಮಸ್ಯೆಗಳು, ಯುವಕರ ಉದ್ಯೋಗ, ಶಿಕ್ಷಣ, ಸಾಮಾಜಿಕ ಸಮಾನತೆ ಹಾಗೂ ಹಿಂದುಳಿದ ಭಾಗಗಳ ಅಭಿವೃದ್ಧಿಗಾಗಿ ಎಚ್.ಎಂ.ಗಣೇಶ್ ಪ್ರಸಾದ್ ರವರು ಶ್ರಮಿಸುತ್ತಿದ್ದಾರೆ ಎಂದರು.ಮೈಸೂರು ಭಾಗದ ೩೬ ಕ್ಷೇತ್ರಗಳಲ್ಲಿ ಏಕೈಕ ಲಿಂಗಾಯತ ಸಮುದಾಯಕ್ಕೆ ಸೇರಿದ ವಿಧಾನಸಭಾ ಸದಸ್ಯರು ಇವರೊಬ್ಬರೇ ಆಗಿದ್ದು, ದಕ್ಷಿಣ ಕರ್ನಾಟಕ ಭಾಗದಲ್ಲಿ ಸಮಾಜಮುಖಿ ಚಿಂತನೆ, ಕಾಯಕನಿ?, ಜನಪ ಸೇವೆ ಹಾಗೂ ಸರಳ ವ್ಯಕ್ತಿತ್ವದಿಂದ ಜನಮನ ಗೆದ್ದಿರುವ ನಾಯಕರಾಗಿರುವ ಇವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.ಹಳೆ ಮೈಸೂರು ಭಾಗದ ವೀರಶೈವ ಲಿಂಗಾಯತ ಸಮಾಜದ ಪ್ರಬಲ ಧ್ವನಿ ಆಗುವುದರ ಮೂಲಕ ಪಕ್ಷಕ್ಕೆ ಅನುಕೂಲವಾಗಲಿದೆ. ಹಳೆ ಮೈಸೂರು ಭಾಗವು ಅಂದಿನಿಂದ ಇಂದಿನವರೆಗೂ ರಾಜಕೀಯದಲ್ಲಿ ವಿಶೇಷ ಪಾತ್ರವಹಿಸುತ್ತದೆ. ಎಚ್.ಎಸ್.ಮಹದೇವಪ್ರಸಾದ್ ನಂತರ ವೀರಶೈವ ಲಿಂಗಾಯತ ಸಮಾಜದ ಮಂತ್ರಿ ಸ್ಥಾನಕ್ಕೆ ಅವಕಾಶ ದೊರಕಿರುವುದಿಲ್ಲ. ಆದ್ದರಿಂದ ಎಚ್.ಎಂ.ಗಣೇಶ್ ಪ್ರಸಾದ್‌ರವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದರು.ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬಾಲಚಂದ್ರಮೂರ್ತಿ, ಉಮೇಶ್ ಬಿಸಲವಾಡಿ, ಮಹದೇವಸ್ವಾಮಿ, ಮಧುಶಂಕರ್, ಕೊಡಸೋಗೆ ಬಸವಣ್ಣ, ಇಂಚರ ಮಂಜು, ಮಂಜುನಾಥ್ ಕಲ್ಪುರ ಇದ್ದರು.--------೧ಸಿಎಚ್‌ಎನ್೧ಚಾಮರಾಜ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡ ಎನ್‌ರಿಚ್ ಮಹದೇವಸ್ವಾಮಿ ಮಾತನಾಡಿದರು.---------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ವೆಚ್ಚ ಕಡಿಮೆ ಮಾಡಿಕೊಳ್ಳುವ ಕುರಿತ ಜಾಗೃತಿ ಮೂಡಿಸಿ
ರಜೆ ಬಳಿಕ ಶಾಲೆಗೆ ಮರಳಿದ ಮಕ್ಕಳಿಗೆ ಗುಲಾಬಿ ಹೂ ಜೊತೆ ಸಿಹಿ ಸ್ವಾಗತ