ಗೋಪುರದ ಅಭಿವೃದ್ಧಿ ಕಾಮಗಾರಿಗೆ ವೀರೇಂದ್ರ ಹೆಗ್ಗಡೆ ನೆರವು

KannadaprabhaNewsNetwork |  
Published : Sep 16, 2026, 01:45 AM IST
ಆಂಜನೇಯ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಮಂಜೂರಾದ ರೂ.1 ಲಕ್ಷ ಮೌಲ್ಯದ ಚೆಕ್ಕನ್ನು ಶಿರಸಿ ಜಿಲ್ಲಾ ನಿರ್ದೇಶಕ ಎಂ.ದಿನೇಶ್ ದೇವಸ್ಥಾನ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು | Kannada Prabha

ಸಾರಾಂಶ

Veerendra Heggade extends support for the tower development work.

- ಧನ ಸಹಾಯ

- ₹1 ಲಕ್ಷ ಮೊತ್ತದ ಡಿಡಿಯನ್ನು ದೇಗುಲದ ಆಡಳಿತ ಮಂಡಳಿಗೆ ಹಸ್ತಾಂತರಿಸಿದ ಎಂ.ದಿನೇಶ್

-----

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ 16 ಸಾವಿರ ಅಧಿಕ ದೇವಾಲಯಗಳ ಅಭಿವೃದ್ಧಿಗೆ ಹಂತ ಹಂತವಾಗಿ ಅನುದಾನ ನೀಡಲಾಗಿದ್ದು, ಧರ್ಮಾಧಿಕಾರಿಗಳು ಈ ಮೂಲಕ ಧಾರ್ಮಿಕ ಪರಂಪರೆ, ಸಂಸ್ಕೃತಿ ಜತೆಗೆ ಗ್ರಾಮೀಣ ಸಮುದಾಯದ ಒಗ್ಗಟ್ಟು ಬಲಪಡಿಸುವ ದಿಸೆಯಲ್ಲಿ ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ ಎಂದು ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ಎಂ. ದಿನೇಶ್ ತಿಳಿಸಿದರು.

ಯೋಜನಾ ಕಚೇರಿ ವತಿಯಿಂದ ತಾಲೂಕಿನ ಶಿರಾಳಕೊಪ್ಪ ಸಮೀಪದ ನೇರಲಗಿ ಗ್ರಾಮದ ಆಂಜನೇಯ ದೇವಸ್ಥಾನದ ಗೋಪುರದ ಅಭಿವೃದ್ಧಿ ಕಾಮಗಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ ₹1ಲಕ್ಷ ಮೊತ್ತದ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಕ್ಷೇ.ಧ.ಗ್ರಾ.ಯೋಜನೆ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಧಾರ್ಮಿಕ ಅಭಿವೃದ್ಧಿಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ದೇವಸ್ಥಾನಗಳು ಗ್ರಾಮೀಣ ಪ್ರದೇಶಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರಗಳಾಗಿದ್ದು, ಇವುಗಳ ಅಭಿವೃದ್ಧಿಗೆ ಧರ್ಮಸ್ಥಳವು ವಿಶೇಷ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಈಗಾಗಲೇ 16 ಸಾವಿರ ಅಧಿಕ ದೇವಸ್ಥಾನಗಳಿಗೆ ವಿವಿಧ ಹಂತಗಳಲ್ಲಿ ಅನುದಾನ ಹಾಗೂ ಸಹಕಾರ ನೀಡಲಾಗಿದ್ದು, ದೇವಸ್ಥಾನಗಳ ಅಭಿವೃದ್ಧಿಯ ಮೂಲಕ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಗ್ರಾಮೀಣ ಸಮುದಾಯದ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಕ್ಷೇತ್ರ ಹೊಂದಿದೆ ಎಂದು ಅವರು ವಿವರಿಸಿದರು.

ನೇರಲಗಿ ಗ್ರಾಮದ ಆಂಜನೇಯ ದೇವಸ್ಥಾನದ ಗೋಪುರ ಅಭಿವೃದ್ಧಿಗೆ ನೀಡಿರುವ ₹1 ಲಕ್ಷ ಸಹಾಯಧನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ದೇವಸ್ಥಾನದ ಆಡಳಿತ ಮಂಡಳಿ ಹೆಚ್ಚಿನ ರೀತಿಯಲ್ಲಿ ನಿಗಾವಹಿಸುವಂತೆ ಅವರು ಸೂಚಿಸಿದರು.

ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ಮುಂದಾಳತ್ವ ವಹಿಸಿ ಕುಣಿತ ಭಜನಾ ಮಂಡಳಿ ರಚಿಸುವಂತೆ ಅವರು ಕರೆ ನೀಡಿದರು.

ಯುವಜನರು, ಮಹಿಳೆಯರು ಹಾಗೂ ಗ್ರಾಮಸ್ಥರು ಇಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಗ್ರಾಮದಲ್ಲಿ ಉತ್ತಮ ಸಾಮಾಜಿಕ ವಾತಾವರಣ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಧರ್ಮಸ್ಥಳದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಜನಪರ ಯೋಜನೆಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿ ಕ್ಷೇತ್ರದಿಂದ ದೊರೆಯುವ ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾ.ಯೋಜನಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಫೋಟೋ

ಕ್ಷೇ.ಧ.ಗ್ರಾ.ಯೋಜನೆಯಿಂದ ತಾಲೂಕಿನ ನೇರಲಗಿ ಆಂಜನೇಯ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಮಂಜೂರಾದ ₹1ಲಕ್ಷ ಮೌಲ್ಯದ ಚೆಕ್‌ನ್ನು ಶಿರಸಿ ಜಿಲ್ಲಾ ನಿರ್ದೇಶಕ ಎಂ. ದಿನೇಶ್ ದೇವಸ್ಥಾನ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು.

15 ಕೆ.ಎಸ್.ಕೆ.ಪಿ 1

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಡು ರಸ್ತೆಯಲ್ಲೇ ಗಣೇಶಮೂರ್ತಿ ಇಟ್ಟು ಯುವಕರ ಪ್ರತಿಭಟನೆ
ವಿಜೃಂಭಣೆಯಿಂದ ನಡೆದ 46ನೇ ವರ್ಷದ ಗಣಪತಿ ಪೂಜಾ ಮಹೋತ್ಸವ