ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ
ಮಂಗಳೂರು: ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸ್ವಾವಲಂಬಿಗಳಾಗಿ ಬೆಳೆಯುತ್ತಿದ್ದಾರೆ. ಇನ್ನಷ್ಟು ಸಂಘಟಿತರಾಗಿ ಬೆಳೆಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಹೇಳಿದ್ದಾರೆ.
ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಇನ್ನಷ್ಟು ಸಂಘಟಿತರಾಗಬೇಕು. ಸ್ವಸಹಾಯ ಗುಂಪು ರಚಿಸುವುದರೊಂದಿಗೆ ಸ್ವಾವಲಂಬನೆಯ ಜೀವನಕ್ಕೆ ಬೇಕಾದ ಸೂಕ್ತ ತರಬೇತಿ ಪಡೆದು ಮುಂದುವರಿಯಬಹುದು ಎಂದು ಸಲಹೆ ನೀಡಿದರು.
ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ದುಶ್ಚಟ ಮುಕ್ತ, ಶಾಂತಿಯುತ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಮುಂದಾಗಬೇಕು. ಆ ಶಕ್ತಿ ಮಹಿಳೆಯರಲ್ಲಿದೆ ಎಂದರು.
ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲಾ ತೇಜೋಮಯ ಅಧ್ಯಕ್ಷತೆ ವಹಿಸಿದ್ದರು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಣಚೂರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಕಣಚೂರು ಮೋನು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ನಿಗಮ ಮಂಡಳಿ ಅಧ್ಯಕ್ಷರಾದ ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ, ಪ್ರಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್, ಪ್ರಮುಖರಾದ ವಂ.ಫಾ.ಗೋಮ್ಸ್, ಭಾಸ್ಕರ್ ಎಂ., ಗಣಪತಿ ಗೌಡ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.