ಕಂಬಳೀಪುರ ಸರ್ಕಾರಿ ಶಾಲೆಗೆ ವಾಹನ ವ್ಯವಸ್ಥೆ

KannadaprabhaNewsNetwork |  
Published : Feb 21, 2025, 12:45 AM IST
ಸೂಲಿಬೆಲೆ ಹೋಬಳಿ ಕಂಬಳೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಸಂಚಾರಕ್ಕೆ ವಾಹನದ ವ್ಯವಸ್ಥೆಯನ್ನು ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ರಾಮಕೃಷ್ಣಪ್ಪ ಕಲ್ಪಿಸಿದ್ದಾರೆ, ಶಾಲಾ ಅಧ್ಯಕ್ಷ ಶ್ರೀನಿವಾಸ್, ಮುಖ್ಯಶಿಕ್ಷಕ ಎಡ್ವರ್ಡ್ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ವರ್ಗದಲ್ಲಿರುವ ತಾತ್ಸಾರ ಮನೋಭಾವವನ್ನು ತೊಲಗಿಸಬೇಕು. ಸರ್ಕಾರಿ ಶಾಲೆಗಳ ಬಲವರ್ಧನೆಗೆ ದಾನಿಗಳು ಮುಂದಾಗಬೇಕು ಎಂದು ಕಂಬಳೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಧ್ಯಕ್ಷ ಶ್ರೀನಿವಾಸ್ ಹೇಳಿದರು.

ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ವರ್ಗದಲ್ಲಿರುವ ತಾತ್ಸಾರ ಮನೋಭಾವವನ್ನು ತೊಲಗಿಸಬೇಕು. ಸರ್ಕಾರಿ ಶಾಲೆಗಳ ಬಲವರ್ಧನೆಗೆ ದಾನಿಗಳು ಮುಂದಾಗಬೇಕು ಎಂದು ಕಂಬಳೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಧ್ಯಕ್ಷ ಶ್ರೀನಿವಾಸ್ ಹೇಳಿದರು. ಹೋಬಳಿಯ ಕಂಬಳೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ದಾನಿ ರಾಮಕೃಷ್ಣಪ್ಪ ಉಚಿತ ವಾಹನ ಸಂಚಾರ ವ್ಯವಸ್ಥೆಗೆ ನೀಡಿರುವ ವಾಹನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ವಹಿಸಬೇಕು. ಪ್ರಥಮವಾಗಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಚ್ಚಾಶಕ್ತಿ ಹೊಂದಬೇಕು ಎಂದು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾಮಕೃಷ್ಣಪ್ಪ ಮಾತನಾಡಿ, ಬಡ ಮಕ್ಕಳೇ ಮಕ್ಕಳೇ ಬರುವ ಸರ್ಕಾರಿ ಶಾಲೆಗಳಿಗೆ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆ ತಲುಪಲು ಸಂಚಾರ ಸಮಸ್ಯೆ ಇರುವುದನ್ನು ಮನಗಂಡು ವಾಹನ ನೀಡಿದ್ದೇನೆ. ಸಂಚಾರ ವ್ಯವಸ್ಥೆ ಇಲ್ಲದೆ ಕೆಲ ಮಕ್ಕಳು ಶಾಲೆಗೆ ಸೇರುವುದು, ಕೆಲವರು ಶಾಲೆ ಬಿಡುವುದು ಇರುತ್ತದೆ. ಇದು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಲು ನೆರವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಮುಖ್ಯಶಿಕ್ಷಕ ಎಡ್ವರ್ಡ್ ಡಿಸೋಜಾ, ಶಾಲಾ ಸದಸ್ಯರಾದ ರಾಮಕೃಷ್ಣಪ್ಪ, ಚಂದನ್‌ಯಾದವ್,ಆಶೋಕ್, ಅಭಿಲಾಷ್, ಸಹ ಶಿಕ್ಷಕಿಯರು ಸಂಗೀತಾ, ಇಂದ್ರಾಣಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!