ಕನ್ನಡಪ್ರಭ ವಾರ್ತೆ ಹಾಸನ
ಸೋಮವಾರ ಬೆಳಿಗ್ಗೆ ಪಡಿತರ ಅಕ್ಕಿಯನ್ನು ವಾಹನದಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ತೆರಳಿದಾಗ, ವಾಹನದಲ್ಲಿ ಸುಮಾರು ನಾಲ್ಕರಿಂದ ಐದು ಕ್ವಿಂಟಾಲ್ ಅಕ್ಕಿ ಸಾಗಿಸುತ್ತಿರುವುದು ಕಂಡುಬಂದಿತು. ತಕ್ಷಣ ವಾಹನವನ್ನು ತಡೆದು, ಪೊಲೀಸ್ ಸಹಾಯವಾಣಿ 112 ಗೆ ಮಾಹಿತಿ ನೀಡಲಾಯಿತು. ಸಂಬಂಧಪಟ್ಟ ಅಧಿಕಾರಿಗಳಿಗೂ ವಿಷಯ ತಿಳಿಸಲಾಗಿದ್ದು, ವಾಹನ ಮತ್ತು ಅಕ್ಕಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದರು. ನಂತರ ನಗರದ ಎನ್.ಆರ್. ವೃತ್ತದ ಬಳಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ ತೂಕ ಮಾಡಲು ಬಳಕೆ ಮಾಡಲಾಗುತ್ತಿದ್ದ ತೂಕದ ಯಂತ್ರ, ಅಕ್ರಮ ಅಕ್ಕಿ ಹಾಗೂ ಆಟೋ ಓಡಿಸುತ್ತಿದ್ದ ಯುವಕನನ್ನು ಪೊಲೀಸರಿಗೆ ಒಪ್ಪಿಸಿದರು.ಈ ಸಂದರ್ಭದಲ್ಲಿ ಶ್ರೀರಾಮಸೇನೆಯ ವಿನಯ್, ಧನಂಜಯ್, ಕಿರಣ್, ಮೋಹನ್, ಮಣಿಕಂಠ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಇದ್ದರು.