ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಪದಾಧಿಕಾರಿಗಳ ಪದಗ್ರಹಣ

KannadaprabhaNewsNetwork |  
Published : Oct 07, 2025, 01:02 AM IST
೬ಕೆಎಲ್‌ಆರ್-೩ಕೋಲಾರ ತಾಲೂಕು ವೇಮಗಲ್-ನರಸಾಪುರ ಯೋಜನಾ  ಪ್ರಾಧಿಕಾರದ ನೂತನ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ ಸೇರಿದಂತೆ ಸದಸ್ಯರಾದ ಶಿವಕುಮಾರ್, ನಾಗರಾಜ್, ಚೌಡಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು. | Kannada Prabha

ಸಾರಾಂಶ

ಪ್ರಾಧಿಕಾರದ ಕಚೇರಿಯಲ್ಲಿ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು.

ಕನ್ನಡಪ್ರಭ ವಾರ್ತೆ ಕೋಲಾರ

ವೇಮಗಲ್- ನರಸಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಉರಟ ಅಗ್ರಹಾರ ಚೌಡರೆಡ್ಡಿ ಹಾಗೂ ಸದಸ್ಯರಾಗಿ ಶಿವಕುಮಾರ್, ನಾಗರಾಜ್, ಚೌಡಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು.

ಪ್ರಾಧಿಕಾರದ ಕಚೇರಿಯಲ್ಲಿ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು.

ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಚೌಡರೆಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಈ ಜವಾಬ್ದಾರಿ ಹಾಗೂ ಅವಕಾಶ ಕಲ್ಪಿಸಿದ್ದಾರೆ, ವೇಮಗಲ್- ನರಸಾಪುರ ಭಾಗದಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೆಲ ಯೋಜನೆಗಳು ಅಭಿವೃದ್ಧಿಯಾಗದಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮಕ್ಕೆ ಸೂಚಿಸಲಾಗುವುದು, ಅಕ್ರಮ ಸಕ್ರಮ ಲೇಔಟ್‌ಗಳಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ, ರಾಜ್ಯ ಸರ್ಕಾರಕ್ಕೆ ಆದಾಯ ಬರುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇವೆ ಎಂದರು.

ಕೋಲಾರ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಕುರಿಗಳ ರಮೇಶ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಸೈಯದ್ ಅಪ್ಸರ್, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಮುನಿಯಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ದೀಪಾ ವಿನಯ್, ಶಶಿಕಲಾ ನಾಗೇಶ್, ಪುರಹಳ್ಳಿ ಗಂಗಪ್ಪ, ಅಂಜಲಿ ಪ್ರಕಾಶ್, ಶಿಲ್ಪ ಶಿವಶಂಕರ್, ತಾಸೂಪ್ ಖಾನ್, ಮಂಜುಳ ಮುನಿರಾಜು, ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಮುಖಂಡರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಬೆಳ್ಳೂರು ವಿಜಯಲಕ್ಷ್ಮೀ, ಪ್ರೀತಿ ಚೌಡರೆಡ್ಡಿ, ವನಿತಾ, ಮಂಜುಳ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೀರೇಂದ್ರ ಪಾಟೀಲ್, ಮಾಜಿ ಗ್ರಾಪಂ ಅಧ್ಯಕ್ಷ ಕುಮಾರ್, ನವೀನ್ ಕುಮಾರ್, ಸಕಲೇಶ್, ಮೇಡಿಹಾಳ ಮುನಿಆಂಜಿನಪ್ಪ, ಕಲ್ವಮಂಜಲಿ ರಾಮುಶಿವಣ್ಣ, ಮಡಿವಾಳ ಮುನಿರಾಜು, ಬೈರೇಗೌಡ, ಪೆರ್ಜೇನಹಳ್ಳಿ ನಾಗೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ