ಕನ್ನಡಪ್ರಭ ವಾರ್ತೆ, ಬೆಂಗಳೂರು
ಎಸ್ಸಿ, ಎಸ್ಟಿ ವಿದ್ಯಾರ್ಥಿ ಎಂಬ ಕಾರಣಕ್ಕೆ ಲಿಖಿತ ಪರೀಕ್ಷೆ ಅಥವಾ ಭೌತಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗೆ ವೈವಾ ಅಥವಾ ಪ್ರಾಕ್ಟಿಕಲ್ ಪರೀಕ್ಷೆ ವೇಳೆ ಕಡಿಮೆ ಅಂಕ ನಿಡುವುದು ಸಹ ಜಾತಿ ತಾರತಮ್ಯ ಎಂದು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.
ಇಂತಹ ಹಲವು ಅಂಶಗಳನ್ನು ಹೊಂದಿರುವ ವಿಧೇಯಕದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಜಾತಿ ತಾರತಮ್ಯ ಮಾಡಿದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಸಮಾನತೆ ಸಮಿತಿ (ಈಕ್ವಿಟಿ ಕಮಿಟಿ) ರಚಿಸಿ ಪರಿಶೀಲನೆ ನಡೆಸಬೇಕು. ಸಮಾನತೆ ಸಮಿತಿ ವರದಿ ನೀಡಿದ 30 ದಿನಗಳ ಒಳಗಾಗಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಉಂಟಾದರೆ ಸಂಸ್ಥೆಗೆ 10 ಲಕ್ಷ ರು. ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯಕ್ಕೆ ಒಳಗಾಗದಂತೆ ರಕ್ಷಣೆ ನೀಡುವುದು ವಿಧೇಯಕದ ಆಶಯ. ವಿಧೇಯಕದಲ್ಲಿನ ಅಂಶಗಳ ಉಲ್ಲಂಘನೆಯು ಜಾಮೀನುರಹಿತ ಅಪರಾಧವಾಗಲಿದ್ದು, ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಜತೆಗೆ ಸಂಬಂಧಪಟ್ಟ ಸಂಸ್ಥೆಗೆ 10 ಲಕ್ಷ ರು.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರೋಹಿತ್ ವೇಮುಲಾ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ವಿಧೇಯಕ ಅನುಷ್ಠಾನ ಕುರಿತಂತೆ ಈ ಹಿಂದೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದರು.
ಬದಲಿಗೆ ಕಾನೂನು ಮತ್ತು ಗೃಹ ಇಲಾಖೆ ಅಭಿಪ್ರಾಯ ನೀಡಲು ಸಂಪುಟ ಸಭೆಯಲ್ಲಿ ಸೂಚಿಸಿ, ವಿಧೇಯಕದ ಬಗೆಗಿನ ನಿರ್ಧಾರವನ್ನು ಮುಂದೂಡಲಾಗಿತ್ತು. ಇದೀಗ ಕಾನೂನು ಮತ್ತು ಗೃಹ ಇಲಾಖೆ ಅಭಿಪ್ರಾಯ ನೀಡಿದ್ದು, ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.
ಜಾತಿ ತಾರತಮ್ಯದ ಕ್ರಮಗಳ ಪಟ್ಟಿ
ಉದಾಹರಣೆಗೆ:
2. ಕಾಲೇಜು ಕೊಠಡಿಯಲ್ಲಿ ಪ್ರತ್ಯೇಕಿಸುವುದು. ಎಸ್ಸಿ, ಎಸ್ಟಿ ಜಾತಿ ಬಗ್ಗೆ ಕೀಳಾಗಿ ಮಾತನಾಡುವುದು.
4. ಲಿಖಿತ ಹಾಗೂ ಭೌತಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗೆ ವೈವಾ, ಪ್ರಾಕ್ಟಿಕಲ್‌ನಲ್ಲಿ ಕಡಿಮೆ ಅಂಕ ನೀಡುವುದು.
5. ಆರ್ಥಿಕವಾಗಿ ಹಿಂದುಳಿದ ಎಸ್ಸಿ,ಎಸ್ಟಿ ವಿದ್ಯಾರ್ಥಿಗೆ ದೇಣಿಗೆ ನೀಡುವಂತೆ ಒತ್ತಾಯಿಸಿ ಅವಮಾನಿಸುವುದು ಸೇರಿದಂತೆ ಹಲವು ಅಂಶಗಳನ್ನು ಸೇರಿಸಲಾಗಿದೆ.ಬಾಕ್ಸ್..
ಯಾವ ಸಂಸ್ಥೆಗಳಿಗೆ ಅನ್ವಯ?ರಾಜ್ಯ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು ಹಾಗೂ ಸಂವಿಧಾನದ ಆರ್ಟಿಕಲ್ 29 ಹಾಗೂ 30ರ ಅಡಿ ಸ್ಥಾಪಿಸಲಾದ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ.