ಕನ್ನಡಪ್ರಭ ವಾರ್ತೆ ಭಾಲ್ಕಿ
ನಗರದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಮರಣವೇ ಮಹಾನವಮಿ ಮತ್ತು ಕಲ್ಯಾಣ ಕ್ರಾಂತಿ ವಿಜಯೋತ್ಸವ ನಿಮಿತ್ತ ಶನಿವಾರ ಆಯೋಜಿಸಿದ್ದ ಪ್ರವಚನ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಕಾಯಕವೇ ಕೈಲಾಸ ಮತ್ತು ದಯವಿಲ್ಲದ ಧರ್ಮ ಯಾವುದಯ್ಯಾ ಎಂಬ ಸರಳ ತತ್ವಗಳ ಮೂಲಕ ಸಮಾಜದಲ್ಲಿ ಸಮಾನತೆ, ಕರುಣೆ ಮತ್ತು ಶ್ರಮದ ಮಹತ್ವವನ್ನು ಸಾರಿದರು. ಈ ವಚನಗಳು ಇಂದಿಗೂ ಮಾನವನಿಗೆ ನೈತಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ತುಂಬುತ್ತವೆ.
ಪ್ರವಚನಗಳು ಈ ಮಹಾನ್ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಅತ್ಯುತ್ತಮ ಮಾಧ್ಯಮಗಳಾಗಿವೆ. ಒತ್ತಡ ಮತ್ತು ಗೊಂದಲಗಳಿಂದ ತುಂಬಿದ ಇಂದಿನ ಅಧುನಿಕ ಜೀವನದಲ್ಲಿ ಪ್ರವಚನಗಳನ್ನು ಕೇಳುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಭಾವನೆ ಮೂಡುತ್ತದೆ. ವಚನ ಪ್ರವಚನದಿಂದ ವ್ಯಕ್ತಿಯ ಅಂತರಂಗವನ್ನು ಶುದ್ಧೀಕರಿಸಿ ಆತನನ್ನು ಸನ್ಮಾರ್ಗದಲ್ಲಿ ನಡೆಸುತ್ತದೆ ಇವು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ನೈತಿಕ ಮೌಲ್ಯಗಳನ್ನು ಜೀವಂತ ವಾಗಿಡಲು ಅತ್ಯಂತ ಅವಶ್ಯಕವಾಗಿವೆ ಎಂದು ತಿಳಿಸಿದರು.ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಶಿವಬಸವ ಸ್ವಾಮೀಜಿ ಅವರು ಅ.20ರ ವರೆಗೆ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಚನ್ನಬಸವಾಶ್ರಮ ಪರಿಸರದಲ್ಲಿ ಪ್ರವಚನ ನಡೆಸಿ ಕೊಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಲ್ಲಮ್ಮ ಆರ್ ಪಾಟೀಲ್, ಸುವರ್ಣಾ ಓಂಕಾರ ಬಲ್ಲೂರೆ, ಚಂದ್ರಕಲಾ ಪ್ರಭು ಡಿಗ್ಗೆ ಸೇರಿದಂತೆ ಹಲವರು ಇದ್ದರು. ಪಾರ್ವತಿ ಜಗನ್ನಾಥ ಧೂಮನಸೂರೆ ವಚನ ಪಠಣ ನಡೆಸಿಕೊಟ್ಟರು. ಸಂಗಮೇಶ ಡೋಣಗಾಪೂರೆ, ವಿಜಯಕುಮಾರ ನಿಟ್ಟೂರೆ ವಚನ ಸಂಗೀತ ನಡೆಸಿ ಕೊಟ್ಟರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.