ರಾಣಿಬೆನ್ನೂರು: ಮಕ್ಕಳು ತಮ್ಮ ಭವಿಷ್ಯವನ್ನು ಸುಂದರವಾಗಿಸಿಕೊಳ್ಳಲು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿರಂತಹ ಮಹಾನ್ ನಾಯಕರ ಜೀವನದ ಆದರ್ಶಗಳನ್ನು ಅರಿತು ಅಳವಡಿಸಿಕೊಳ್ಳಬೇಕು ಮತ್ತು ಅವರಂತೆ ಸಮಾಜ ಸುಧಾರಣೆಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಮರಡೆಪ್ಪ ಮಾಳಗಿ ಹೇಳಿದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸೋಮರೆಡ್ಡಿ ಹಾದಿಮನಿ ಮಾತನಾಡಿ, ಚಿಕ್ಕಂದಿನಲ್ಲಿಯೇ ಮಕ್ಕಳಿಗೆ ಹಸಿವು, ನೀರಡಿಕೆ ಮತ್ತು ಬಳಲಿಕೆಯ ಅನುಭವವನ್ನು ತಿಳಿಸಿಕೊಟ್ಟಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಯಕ ಅಥವಾ ಆಡಳಿತಗಾರನಾಗಲು ಸಾಧ್ಯ. ವಿದ್ಯಾರ್ಥಿಗಳು ದೇಶದ ಸ್ವಾತಂತ್ರ‍್ಯ ಮತ್ತು ಜನರ ಹಿತಕ್ಕಾಗಿ ತಮ್ಮ ಜೀವನವನ್ನೇ ಮೀಸಲಿಟ್ಟ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜೀವನ ಸಾಧನೆಗಳನ್ನು ಅರಿತು ಅನುಸರಿಸುವಂತಾಗಬೇಕು ಎಂದರು.
ಮುಖ್ಯೋಪಾಧ್ಯಾಯ ರಮೇಶ ಕಾಳಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.