ಕಪ್ಪು ಪಟ್ಟಿ ಧರಿಸಿ ಪಶು ವೈದ್ಯರ ಪ್ರತಿಭಟನೆ

KannadaprabhaNewsNetwork |  
Published : Mar 25, 2026, 02:45 AM IST
ಕುಶಾಲನಗರದಲ್ಲಿ ಪಶುವೈದ್ಯರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ. | Kannada Prabha

ಸಾರಾಂಶ

ಇತ್ತೀಚೆಗೆ ಶಿವಮೊಗ್ಗದ ಹುಲಿ ಮತ್ತು ಸಿಂಹ ಧಾಮದಲ್ಲಿ ನೀರಾನೆ ದಾಳಿಯಿಂದ ನಡೆದ ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಸ್ಥಳೀಯ ಪಶು ಆಸ್ಪತ್ರೆ ಆವರಣದಲ್ಲಿ ಕೊಡಗು ಜಿಲ್ಲಾ ಪಶು ವೈದ್ಯಕೀಯ ಸಂಘದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಕುಶಾಲನಗರ: ಇತ್ತೀಚೆಗೆ ಶಿವಮೊಗ್ಗದ ಹುಲಿ ಮತ್ತು ಸಿಂಹ ಧಾಮದಲ್ಲಿ ನೀರಾನೆ ದಾಳಿಯಿಂದ ನಡೆದ ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಸ್ಥಳೀಯ ಪಶು ಆಸ್ಪತ್ರೆ ಆವರಣದಲ್ಲಿ ಕೊಡಗು ಜಿಲ್ಲಾ ಪಶು ವೈದ್ಯಕೀಯ ಸಂಘದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.ದುರಂತ ಸಾವಿನ ಹಿಂದೆ ಸಂಶಯಗಳಿದ್ದು, ಸೂಕ್ತ ತನಿಖೆ ಆಗಬೇಕು ಮತ್ತು ತಪ್ಪಿಸ್ತರಿಗೆ ಶಿಕ್ಷೆ ಆಗಬೇಕು ಎಂದು ಸಂಘದ ಅಧ್ಯಕ್ಷ ಡಾ. ಲಿಂಗರಾಜ್ ದೊಡ್ಡಮನಿ ಒತ್ತಾಯಿಸಿದರು. ಈ ಸಂದರ್ಭ ಡಾ. ಸಂಜೀವ ಕುಮಾರ್ ಶಿಂಧೆ. ಡಾ. ಸಿದ್ದಲಿಂಗಯ್ಯ ಹಿರೇಮಠ, ಡಾ. ಅಮೃತಾ ಹಾಗೂ ಇಲಾಖೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ. 29, 30ರಂದು ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ
ಕರಿಕೆ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ