-ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ
ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸಂವಿಧಾನ ವಿರೋಧಿಯಾಗಿದೆ. ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಎಚ್‌ಪಿ ಮತ್ತು ಭಜರಂಗದಳ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಶುಕ್ರವಾರ ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.ಮುಸ್ಲಿಂರಿಗೆ ಪ್ರತ್ಯೇಕ ಅನುದಾನ ಕೊಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ಸಿಎಂ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿ ಸಲ್ಲಿಸಿದ ಸಂದರ್ಭದಲ್ಲಿ ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ರಂಗನಾಥ, ಬಜರಂಗದಳ ಜಿಲ್ಲಾ ಸಂಯೋಜಕ ಸಿ.ಡಿ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಯೋಗೀಶ್ ರಾಜ್ ಅರಸ್, ಶ್ಯಾಮ್, ಕೋಟೆ ಪ್ರಸಾದ್, ಕೃಷ್ಣ ಹಾಜರಿದ್ದರು. 8 ಕೆಸಿಕೆಎಂ 4