ಬಕ್ರೀದ್ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಟ, ಅಕ್ರಮ ಕಸಾಯಿಖಾನೆಗಳಲ್ಲಿ ವಧೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕುರ್ಬಾನಿ ನಡೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು. ತಮ್ಮ ಠಾಣಾ ವ್ಯಾಪ್ತಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ ದಾಳಿ ನಡೆಸಬೇಕು. ಜಾನುವಾರು ವಧೆ ನಡೆದ ಮನೆ, ಕಟ್ಟಡ ಹಾಗೂ ಖಾಲಿ ಜಾಗಗಳನ್ನು ಜಫ್ತಿ ಮಾಡಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸಿದರು. ಅಕ್ರಮ ವಧೆ ಹಾಗೂ ಸಾಗಾಟದಲ್ಲಿ ತೊಡಗಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ದಂಡ ಹಾಗೂ ಶಿಕ್ಷೆ ವಿಧಿಸಬೇಕೆಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರು
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವುಗಳ ಅಕ್ರಮ ಸಾಗಾಣಿಕೆ ಹಾಗೂ ಅಕ್ರಮ ವಧೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ವತಿಯಿಂದ ಪೊಲೀಸ್ ಠಾಣೆಯ ಮುಖ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭರತ್ ಬಿರಡಹಳ್ಳಿ ಹಾಗೂ ನಾಗೇಶ್ (ಗುಂಡ) ಮಾತನಾಡಿ, ಬಕ್ರೀದ್ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಟ, ಅಕ್ರಮ ಕಸಾಯಿಖಾನೆಗಳಲ್ಲಿ ವಧೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕುರ್ಬಾನಿ ನಡೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು. ತಮ್ಮ ಠಾಣಾ ವ್ಯಾಪ್ತಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ ದಾಳಿ ನಡೆಸಬೇಕು. ಜಾನುವಾರು ವಧೆ ನಡೆದ ಮನೆ, ಕಟ್ಟಡ ಹಾಗೂ ಖಾಲಿ ಜಾಗಗಳನ್ನು ಜಫ್ತಿ ಮಾಡಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸಿದರು. ಅಕ್ರಮ ವಧೆ ಹಾಗೂ ಸಾಗಾಟದಲ್ಲಿ ತೊಡಗಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ದಂಡ ಹಾಗೂ ಶಿಕ್ಷೆ ವಿಧಿಸಬೇಕೆಂದು ತಿಳಿಸಿದರು.ಬಕ್ರೀದ್ ಹಿನ್ನೆಲೆ 24 ಗಂಟೆಗಳ ಗಸ್ತು ವ್ಯವಸ್ಥೆ ಕಲ್ಪಿಸಿ ವಾಹನ ತಪಾಸಣೆ ತೀವ್ರಗೊಳಿಸಬೇಕು. ಖಾಸಗಿ ವಾಹನಗಳು, ಕ್ಲೋಸ್‌ಡ್ ಕಂಟೈನರ್‌ಗಳು, ಹಾಲಿನ ಟ್ಯಾಂಕರ್‌ಗಳು ಸೇರಿದಂತೆ ವಿವಿಧ ವಾಹನಗಳಲ್ಲಿ ಅಕ್ರಮ ಸಾಗಾಟ ನಡೆಯುವ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ನಿಗಾ ಇರಿಸಬೇಕೆಂದು ಮನವಿ ಮಾಡಲಾಗಿದೆ. ಈಗಾಗಲೇ ಅಕ್ರಮ ಗೋಸಾಗಾಟ ಹಾಗೂ ವಧೆ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ಮೇಲೂ ವಿಶೇಷ ನಿಗಾ ವಹಿಸಿ ಎಚ್ಚರಿಕೆ ನೀಡಬೇಕು ಎಂದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ–1960, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (FSSAI) ಸೇರಿದಂತೆ ವಿವಿಧ ಕಾನೂನುಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಆಗ್ರಹಿಸಿವೆ.ಹಿಂದೂಗಳಿಗೆ ಪೂಜನೀಯವಾಗಿರುವ ಗೋವಂಶ ರಕ್ಷಣೆಗೆ ಸಂವಿಧಾನದ ಚೌಕಟ್ಟಿನಲ್ಲಿ ಬದ್ಧರಾಗಿದ್ದು, ಅಕ್ರಮ ಗೋಸಾಗಾಟ ಹಾಗೂ ವಧೆ ತಡೆಯಲು ಪೊಲೀಸ್ ಇಲಾಖೆಗೆ ಅಗತ್ಯ ಸಹಕಾರ ನೀಡಲು ಸಿದ್ಧವಿದ್ದೇವೆ ಎಂದು ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ಮುಖಂಡರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಿಐ ರೇವಣ್ಣ ಹಾಗೂ ತಾಲೂಕು ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಸುಮನ್ ನವಿಲಹಳ್ಳಿ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.