ಇಂದು ಮಂಡ್ಯಕ್ಕೆ ಉಪರಾಷ್ಟ್ರಪತಿ ಜಗದೀಶ್ ಧನಕರ್‌ ಆಗಮನ

KannadaprabhaNewsNetwork |  
Published : Oct 25, 2024, 12:55 AM IST
ಜಗದೀಶ್ ಧನಕರ್‌  | Kannada Prabha

ಸಾರಾಂಶ

ಆದಿ ಚುಂಚನಗಿರಿ ವಿಶ್ವವಿದ್ಯಾಲಯದಿಂದ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿದೆ. ಕಾರ್ಯಕ್ರಮವು ಮಧ್ಯಾಹ್ನ 2 ಗಂಟೆಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‍ನಲ್ಲಿರುವ ಆದಿಚುಂಚನಗಿರಿ ಮಠದ ಬಿಜಿಎಸ್ ಆಡಿಟೋರಿಯಂನ ಏಮ್ಸ್ ಕ್ಯಾಂಪಸ್‍ನಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಆದಿ ಚುಂಚನಗಿರಿ ವಿಶ್ವವಿದ್ಯಾಲಯದಿಂದ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿದೆ. ಕಾರ್ಯಕ್ರಮವು ಮಧ್ಯಾಹ್ನ 2 ಗಂಟೆಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‍ನಲ್ಲಿರುವ ಆದಿಚುಂಚನಗಿರಿ ಮಠದ ಬಿಜಿಎಸ್ ಆಡಿಟೋರಿಯಂನ ಏಮ್ಸ್ ಕ್ಯಾಂಪಸ್‍ನಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಶ್ ಧನಕರ್‌ ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೂಡ ಆಗಮಿಸಲಿದ್ದಾರೆ. ಕಾರ್ಯಕ್ರಮದ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಗುಜರಾತ್‍ನ ರಾಜ್‍ಕೋಟ್‍ನ ಅರ್ಷ ವಿದ್ಯಾ ಮಂದಿರದ ಜಗದ್ಗುರು ಶ್ರೀಪರಮಾತ್ಮನಂದ ಸರಸ್ವತಿ ಜೀ, ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಬಿ.ಎಲ್.ಸುಜಾತ ರಾಥೋಡ್ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಠದ ಆಡಳಿತ ಮಂಡಳಿ ಕೋರಿದೆ.ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ: 66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್ 6 - ಹೊಸಹಳ್ಳಿ ಅರ್ಬನ್ ಫೀಡರ್ ಮತ್ತು ಎಫ್ 4 -ಹೆಬ್ಬಕವಾಡಿ ಎನ್.ಜೆ.ವೈ ಫೀಡರ್‌ಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಳ್ಳಲಾಗಿದೆ.

ಅ.26 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ನಗರ ಪ್ರದೇಶಗಳಾದ ಸುಭಾಷ್‌ನಗರ, ಅಶೋಕ ನಗರ, ವಿದ್ಯಾನಗರ, ವಿ.ವಿ.ರಸ್ತೆ, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರಸ್ತೆ, ನೆಹರು ನಗರ, ಹಾಲಹಳ್ಳಿ, ಹೌಸಿಂಗ್ ಬೋರ್ಡ್ 1 ಹಾಗೂ 2 ನೇ ಹಂತ, ದ್ವಾರಕನಗರ, ಗಾಂಧಿನಗರ, ಎನ್ ಜಿ ಲೆಔಟ್, ಶ್ರೀರಾಮನಗರ, ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ ಎರಡನೇ ಹಂತ, ಶಂಕರನಗರ, ಕ್ಯಾತುಂಗೆರೆ ಬಡಾವಣೆ, ಶಂಕರಪ್ಪ ಬಡಾವಣೆ, ಮಿಮ್ಸ್ ಆಸ್ಪತ್ರೆ ಹಾಗೂ ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ, ಮತ್ತು ಐಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಂಡ್ಯ ವಿಭಾಗದ ಸೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರಷ್ಟಾಚಾರಕ್ಕೆ ಅಂತ್ಯ ಹಾಡಿದಜಿ ರಾಮ್‌ ಜಿ: ಡಾ। ಸುಧಾಕರ್‌
ದೂರು ಕೊಡಲು ಹೋದವರ ಮೇಲೆಯೇ ಪೊಲೀಸರ ದರ್ಪ