ನಾಳೆ ಶ್ರವಣಬೆಳಗೊಳಕ್ಕೆ ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಆಗಮನ

KannadaprabhaNewsNetwork |  
Published : Nov 08, 2025, 02:00 AM IST
5ಎಚ್ಎಸ್ಎನ್17 : ಶ್ರವಣಬೆಳಗೊಳಕ್ಕೆ ಉಪರಾಷ್ಟ್ರಪತಿ ಆಗಮನದ ಹಿನ್ನೆಲೆ ಜಿಲ್ಲಾಧಿಕಾರಿ ಕಟಕುಮಾರಿ ಹಾಗೂ ಅಧಿಕಾರಿಗಳ ತಂಡ ಮಂಗಳವಾರ ಕಾರ್ಯಕ್ರಮದ ಸ್ಥಳ ಪರಿಶೀಲನೆ. | Kannada Prabha

ಸಾರಾಂಶ

ಸುಸಜ್ಜಿತ ಆ್ಯಂಬುಲೆನ್ಸ್‌ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ನೇಮಿಸುವಂತೆ ಸೂಚಿಸಿದರಲ್ಲದೆ ಸಾರ್ವಜನಿಕರಿಗೂ ಕೂಡ ಒಂದು ಆ್ಯಂಬುಲೆನ್ಸ್ ಪ್ರತ್ಯೇಕವಾಗಿರಬೇಕು, ಆಹಾರ ಸುರಕ್ಷತೆ ನಿಟ್ಟಿನಲ್ಲಿ ಪರಿಶೀಲಿಸಲು ಕ್ರಮವಹಿಸುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ನ.9ರಂದು ಆಚಾರ್ಯ ಶ್ರೀ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ, ಪಾದುಕೆ ಸ್ಥಾಪನೆ ಹಾಗೂ ಬೆಟ್ಟಕ್ಕೆ ಪದನಾಮ ಅನಾವರಣ ಮತ್ತು ಶಾಂತಿ ಸಾಗರ ಮಹಾರಾಜರ ಜೀವನ ಚರಿತ್ರೆಯ ಬೃಹತ್ ಶಿಲಾಶಾಸನ ಲೋಕಾರ್ಪಣೆಗೆ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ತಾಲೂಕಿನ ಜೈನಕ್ಷೇತ್ರ ಶ್ರವಣಬೆಳಗೊಳಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮದ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಶ್ರವಣಬೆಳಗೊಳದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರಲ್ಲದೆ, ಕಾರ್ಯಕ್ರಮದ ಹಿನ್ನೆಲೆ ತಯಾರಿ ಬಗ್ಗೆ ವರದಿ ನೀಡುವಂತೆ ತಿಳಿಸಿದರು.

ನಿರಂತರವಾಗಿ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು, ಕಾರ್ಯಕ್ರಮದ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚನೆ ನೀಡಿ, ರಸ್ತೆಗಳ ಅಕ್ಕಪಕ್ಕದಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು, ಕಾರ್ಯಕ್ರಮದಂದು ತಾತ್ಕಾಲಿಕವಾಗಿ ಮಾಂಸದ ಅಂಗಡಿಗಳನ್ನು ಮುಚ್ಚಲು ಕ್ರಮವಹಿಸಿ ಎಂದರಲ್ಲದೆ, ಬೀದಿ ನಾಯಿಗಳ ಹಾವಳಿ ತಡೆಗೆ ಕೂಡ ಕ್ರಮವಹಿಸಬೇಕು, ಸೈನೇಜ್ ಬೋರ್ಡ್ ಹಾಕುವಂತೆ ಸೂಚಿಸಿದರು.

ಸುಸಜ್ಜಿತ ಆ್ಯಂಬುಲೆನ್ಸ್‌ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ನೇಮಿಸುವಂತೆ ಸೂಚಿಸಿದರಲ್ಲದೆ ಸಾರ್ವಜನಿಕರಿಗೂ ಕೂಡ ಒಂದು ಆ್ಯಂಬುಲೆನ್ಸ್ ಪ್ರತ್ಯೇಕವಾಗಿರಬೇಕು, ಆಹಾರ ಸುರಕ್ಷತೆ ನಿಟ್ಟಿನಲ್ಲಿ ಪರಿಶೀಲಿಸಲು ಕ್ರಮವಹಿಸುವಂತೆ ತಿಳಿಸಿದರು.

ಕಾರ್ಯಕ್ರಮ ನಡೆಯುವ ಹಸಿರು ಕೊಠಡಿಯಲ್ಲಿ ಗಣ್ಯರಿಗೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆಗೆ ಕ್ರಮವಹಿಸಬೇಕು. ಅಗ್ನಿಶಾಮಕ ದಳದ ಹೆಲಿಪ್ಯಾಡ್ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರತ್ಯೇಕ ವಾಹನಗಳನ್ನು ಇರಿಸಲು ಕ್ರಮವಹಿಸುವಂತೆ ಸೂಚಿಸಿದರು.

ಸ್ಥಳ ಪರಿಶೀಲನೆ:

ಸಭೆಗೂ ಮುನ್ನ ಜಿಲ್ಲಾಧಿಕಾರಿಯವರು ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆಲಿಪ್ಯಾಡ್‌ಗೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ನಂತರ ಮಠಕ್ಕೆ ಆಗಮಿಸಿ ಸ್ವತ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮ ಕುರಿತು ಚರ್ಚಿಸಿದರು.

ಅಪರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ರಾಜು, ಚನ್ನರಾಯಪಟ್ಟಣದ ಸಹಾಯಕ ಕಾರ್ಯಪಾಲಕ ಅಭಿಯಂತರ ರುಕ್ಮಿಣಿ, ಚನ್ನರಾಯಪಟ್ಟಣದ ತಹಸೀಲ್ದಾರ್ ಶಂಕರ್, ಅರಸೀಕೆರೆ ತಾಲೂಕು ತಹಸೀಲ್ದಾರ್ ಸಂತೋಷ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

PREV

Recommended Stories

ಬ್ರಾಹ್ಮಣ ಸಮುದಾಯಕ್ಕೆ ಸೌಲಭ್ಯ ನೀಡಲು ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌
ಬೆಂಗಳೂರು ನಗರದ 6 ಆರ್‌ಟಿಒ ಕಚೇರಿ ಮೇಲೆ ದಾಳಿ: ಹಲವು ಅಕ್ರಮ ಪತ್ತೆ